ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶಾಸಕ ಎಂ.ಸಿ. ಸುಧಾಕರ್ ವಿರುದ್ಧ ಬಿಜೆಪಿ ಮುಖಂಡ ವೇಣುಗೋಪಾಲ್ ವಾಗ್ದಾಳಿ

ಸುದ್ದಿಗಾರರೊಂದಿಗೆ ಮಾತನಾಡಿ, ನಗರದ ವಿವಿಧ ಬಡಾವಣೆಗಳಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜತೆಗೆ ಜನರ ಅಗತ್ಯಕ್ಕೆ ತಕ್ಕಂತೆ ಉದ್ಯಾನವನ ಗಳನ್ನು ಅಭಿವೃದ್ಧಿಪಡಿಸಬೇಕಿದೆ. ಆದರೆ, ಈ ನಿಟ್ಟಿನಲ್ಲಿ ಶಾಸಕರು ಸಮರ್ಪಕ ಗಮನಹರಿಸುತ್ತಿಲ್ಲ ಎಂದು ದೂರಿದರು.

ಶಾಸಕ ಎಂ.ಸಿ. ಸುಧಾಕರ್ ವಿರುದ್ಧ ಬಿಜೆಪಿ ಮುಖಂಡ ವೇಣುಗೋಪಾಲ್ ವಾಗ್ದಾಳಿ

-

Profile
Ashok Nayak Nov 5, 2026 10:45 PM

ಚಿಂತಾಮಣಿ: ಶಾಸಕ ಡಾ. ಎಂ.ಸಿ. ಸುಧಾಕರ್(MLA Dr M C Sudhakar) ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ಆಡಳಿತ ವೈಖರಿಯನ್ನು ಟೀಕಿಸಿರುವ ಬಿಜೆಪಿ ಮುಖಂಡ ವೇಣುಗೋಪಾಲ್, ನಗರದಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ವಿವಿಧ ಬಡಾವಣೆಗಳಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜತೆಗೆ ಜನರ ಅಗತ್ಯಕ್ಕೆ ತಕ್ಕಂತೆ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಬೇಕಿದೆ. ಆದರೆ, ಈ ನಿಟ್ಟಿನಲ್ಲಿ ಶಾಸಕರು ಸಮರ್ಪಕ ಗಮನಹರಿಸುತ್ತಿಲ್ಲ ಎಂದು ದೂರಿದರು.

ಉತ್ತಮ ಸ್ಥಿತಿಯಲ್ಲಿದ್ದ ಹಳೆಯ ಕಾಲೇಜು ಹಾಗೂ ಕಟ್ಟಡಗಳನ್ನು ಕೆಡವಿ, ಮತ್ತೆ ಹೊಸ ಕಟ್ಟಡ ನಿರ್ಮಿಸುವ ಮೂಲಕ ಸಾರ್ವಜನಿಕರ ತೆರಿಗೆ ಹಣವನ್ನು ಅನಗತ್ಯವಾಗಿ ವೆಚ್ಚ ಮಾಡಲಾಗುತ್ತಿದೆ. ಇಂತಹ ಕಾಮಗಾರಿಗಳೇ ಅಭಿವೃದ್ಧಿಯಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: Dr M C Sudhakar: ಚಿಂತಾಮಣಿಯಲ್ಲಿ ಕ್ರೀಡಾಂಗಣ, ಸಿಂಥೆಟಿಕ್ ಟ್ರ್ಯಾಕ್ ಅಭಿವೃದ್ಧಿ: ಶಾಸಕ ಡಾ.ಎಂ.ಸಿ.ಸುಧಾಕರ್

ನಗರದ ಸಂಚಾರ ದಟ್ಟಣೆ ನಿವಾರಿಸಲು ಬೈಪಾಸ್ ಅಥವಾ ರಿಂಗ್ ರಸ್ತೆ ನಿರ್ಮಿಸುವ ಬದಲು, ರಸ್ತೆ ಅಗಲೀಕರಣದ ಹೆಸರಿನಲ್ಲಿ ಹಲವು ವರ್ಷಗಳಿಂದ ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿರುವ ಸಣ್ಣ ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅಧಿಕಾರಿಗಳನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ ಹಾಗೂ ಜನಸಾಮಾನ್ಯರಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದೂ ಆರೋಪಿಸಿದರು.

ಶಾಸಕರ ಈ ಆಡಳಿತ ಧೋರಣೆಯನ್ನು ಖಂಡಿಸಿ ಮುಂಬರುವ ಶನಿವಾರ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದರು.