ಲೋಕಸಭೆಯಲ್ಲಿ ನಾರೀ ಶಕ್ತಿ ವಂದನಾ ಮಸೂದೆಗೆ ಸೋಲು ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಮಹಿಳೆಯರಿಗೆ ರಾಜಕೀಯ ದಲ್ಲಿ ಹೆಚ್ಚಿನ ಅವಕಾಶ ದೊರಕಬೇಕು.ಸಮಾಜದ ಅಭಿವೃದ್ಧಿಗೆ ಅವರ ಪಾತ್ರ ಅತ್ಯಂತ ಮಹತ್ವದ್ದು. ಆದರೆ ಮಹಿಳಾ ಮೀಸಲಾತಿಯ ವಿರೋಧ ಕಾಂಗ್ರೆಸ್ ನೇತೃತ್ವದ ಇಂಡಿ ಕೂಟದ ನಡೆ ಮಹಿಳೆಯರಲ್ಲಿ ಆಕ್ರೋಶ ಮೂಡಿಸಿದೆ ಮುಂದಿನ ದಿನಗಳಲ್ಲಿ ಮಹಿಳೆಯರು ತಕ್ಕ ಪಾಠ ಕಲಿಸು ತ್ತಾರೆ. ದೇಶದಾದ್ಯಂತ ಬಿಜೆಪಿ ಇನ್ನಷ್ಟು ಬಲವಾಗಿ ಬೆಳೆಯಲಿದೆ
ಲೋಕಸಭೆಯಲ್ಲಿ ಐತಿಹಾಸಿಕ ಮಸೂದೆ ನಾರೀಶಕ್ತಿಗೆ ಸೋಲಾಗುವಂತೆ ಮಾಡುವ ಮೂಲಕ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಮಹಿಳಾ ವಿರೋಧಿ ನಿಲುವು ಜಗಜ್ಜಾಹೀರಾಗಿದೆ ಎಂದು ಆರೋಪಿಸಿ ಶನಿವಾರ ಬಿಜೆಪಿ ಪರಿವಾರವು ಬೃಹತ್ ಪ್ರತಿಭಟನೆ ಮಾಡುವ ಮೂಲಕ ತನ್ನ ಆಕ್ರೋಶ ವ್ಯಕ್ತಪಡಿಸಿತು. -
ಚಿಕ್ಕಬಳ್ಳಾಪುರ: ಲೋಕಸಭೆಯಲ್ಲಿ ಐತಿಹಾಸಿಕ ಮಸೂದೆ ನಾರೀಶಕ್ತಿಗೆ ಸೋಲಾಗುವಂತೆ ಮಾಡುವ ಮೂಲಕ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ(INDIA) ಮಹಿಳಾ ವಿರೋಧಿ ನಿಲುವು ಜಗಜ್ಜಾಹೀರಾಗಿದೆ ಎಂದು ಆರೋಪಿಸಿ ಶನಿವಾರ ಬಿಜೆಪಿ ಪರಿವಾರವು ಬೃಹತ್ ಪ್ರತಿಭಟನೆ ಮಾಡುವ ಮೂಲಕ ತನ್ನ ಆಕ್ರೋಶ ವ್ಯಕ್ತಪಡಿಸಿತು.
ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿಪರಿವಾರದ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ಈ ವೇಳೆ ಪ್ರತಿಭಟನಾ ನಿರತರು ಕಾಂಗ್ರೆಸ್ ವಿರುದ್ದ ಘೋಷಣೆಗಳನ್ನು ಮೊಳಗಿಸಿ ತಮ್ಮ ಅಸಹನೆ ವ್ಯಕ್ತಪಡಿಸಿದರು.
ನಾರಿ ಶಕ್ತಿ ವಂದನಾ ಕಾಯ್ದೆ(Nari Shakti Vandana Act)ಗೆ ವಿರೋಧವಾಗಿ ಇಂಡಿ ಕೂಟ(INDIA) ಮತ ಚಲಾಯಿಸಿರುವುದು ಮಹಿಳೆಯರಿಗೆ ಮೀಸಲಾತಿ(Reservation for Women) ನೀಡಬಾರ ದೆಂಬ ಅವರ ಮಹಿಳಾ ವಿರೋಧಿ ಮನೋಭಾವ ತೋರಿಸುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: Women Reservation Bill: ಮಹಿಳಾ ಮೀಸಲಾತಿ ಮಸೂದೆಗೆ ನಮ್ಮ ವಿರೋಧವಿಲ್ಲ ಎಂದ ಸಿಎಂ ಸಿದ್ದರಾಮಯ್ಯ
ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಒಬಿಸಿ ಉಪಾಧ್ಯಕ್ಷೆ ಹಾಗೂ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ನೇತೃತ್ವದ ಕೇಂದ್ರ ಸರ್ಕಾರ ಮಹಿಳೆಯರ ಸಬಲೀ ಕರಣಕ್ಕಾಗಿ ಸ್ವಚ್ಛ ಭಾರತ(Clean India), ಬೇಟಿ ಬಚಾವ್-ಬೇಟಿ ಪಡಾವ್(Beti Padhavo Beti Bachao) ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಜನಧನ್ ಖಾತೆ(Jan Dhan Account)ಗಳ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸಿದೆ. ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ನಾರಿ ಶಕ್ತಿ ವಂದನಾ ಕಾಯ್ದೆ ಜಾರಿಗೆ ತರಲು ಬಿಜೆಪಿ ಮುಂದಾಗಿದೆ. ಆದರೆ ಕಾಂಗ್ರೆಸ್ ನೇತೃತ್ವದ ಇಂಡಿ ಕೂಟ ಇದಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಮಹಿಳಾ ವಿರೋಧಿ ನಿಲುವನ್ನು ಮತ್ತೊಮ್ಮೆ ಬಹಿರಂಗ ಪಡಿಸಿದೆ ಎಂದು ಆರೋಪಿಸಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಮಹಿಳೆಯರಿಗೆ ರಾಜಕೀಯ ದಲ್ಲಿ ಹೆಚ್ಚಿನ ಅವಕಾಶ ದೊರಕಬೇಕು.ಸಮಾಜದ ಅಭಿವೃದ್ಧಿಗೆ ಅವರ ಪಾತ್ರ ಅತ್ಯಂತ ಮಹತ್ವದ್ದು. ಆದರೆ ಮಹಿಳಾ ಮೀಸಲಾತಿಯ ವಿರೋಧ ಕಾಂಗ್ರೆಸ್ ನೇತೃತ್ವದ ಇಂಡಿ ಕೂಟದ ನಡೆ ಮಹಿಳೆಯರಲ್ಲಿ ಆಕ್ರೋಶ ಮೂಡಿಸಿದೆ ಮುಂದಿನ ದಿನಗಳಲ್ಲಿ ಮಹಿಳೆಯರು ತಕ್ಕ ಪಾಠ ಕಲಿಸು ತ್ತಾರೆ. ದೇಶದಾದ್ಯಂತ ಬಿಜೆಪಿ ಇನ್ನಷ್ಟು ಬಲವಾಗಿ ಬೆಳೆಯಲಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ನಿರ್ಮಲಮ್ಮ,ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಲೀಲಾವತಿ ಶ್ರೀನಿವಾಸ್, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ,ಜಿಲ್ಲಾ ಉಪಾಧ್ಯಕ್ಷೆ ಸುಮಿತ್ರಾ, ಮಾಜಿ ಶಾಸಕ ರಾಜಣ್ಣ, ಜಿಲ್ಲಾ ಉಪಾಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ, ಕೆ.ವಿ.ನಾಗರಾಜ್, ಅನು ಆನಂದ್, ಗಿರೀಶ್ ಹರಿಸ್ಥಳ, ಮಂಡಲ ಅಧ್ಯಕ್ಷರಾದ ಭಾರತಿ, ಮಲ್ಲಿಕಾ, ತ್ರಿವೇಣಿ, ಚಾತುರ್ಯ, ಶಾಂತ ಶಿವರಾಮ್ ಸೇರಿದಂತೆ ಮಹಿಳಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.