ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಕ್ತಕ್ಕೆ ಯಾವುದೇ ಜಾತಿ ಧರ್ಮ ಇಲ್ಲ. ರಕ್ತದಾನ ಮಾನವೀಯತೆಯ ಸಂಕೇತ : ಪ್ರಾಂಶುಪಾಲ ಡಾ. ಮುರಳಿ ಆನಂದ. ಜಿ

ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರು ತ್ತದೆ. ದೇಶದಲ್ಲಿ ಪ್ರತಿವರ್ಷ ೪೧ ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳು ಗಳು ಮೃತಪಡುತ್ತಿದ್ದಾರೆ.

ರಕ್ತಕ್ಕೆ ಯಾವುದೇ ಜಾತಿ ಧರ್ಮ ಇಲ್ಲ. ರಕ್ತದಾನ ಮಾನವೀಯತೆಯ ಸಂಕೇತ

ಶಿಡ್ಲಘಟ್ಟ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿಕ್ಕಬಳ್ಳಾಪುರ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. -

Ashok Nayak
Ashok Nayak Dec 3, 2025 10:52 PM

ಶಿಡ್ಲಘಟ್ಟ: ರಕ್ತಕ್ಕೆ ಯಾವುದೇ ಜಾತಿ ಧರ್ಮ ಇಲ್ಲ. ರಕ್ತದಾನ ಮಾನವೀಯತೆಯ ಸಂಕೇತವಾಗಿದೆ. ದಾನದಲ್ಲಿ ಶ್ರೇಷ್ಠ ದಾನ ರಕ್ತದಾನ. ರಕ್ತದಾನದಿಂದ ಒಂದು ಜೀವವನ್ನು ಉಳಿಸಬಹುದು. ರಕ್ತದಾನ ದಿಂದ ಅನೇಕ ದೈಹಿಕ ಪ್ರಯೋಜನಗಳಿವೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮುರಳಿ ಆನಂದ. ಜಿ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿಕ್ಕಬಳ್ಳಾಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು ರಕ್ತದಾನದಿಂದ ಜೀವವನ್ನು ಉಳಿಸಿ ಇನ್ನೊಬ್ಬರಿಗೆ ಜೀವದಾನ ಮಾಡಿ ಎಲ್ಲರಿಗೂ ಸಹಾಯ ಮಾಡಬೇಕು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ: Shidlaghatta News: ಅಮೃತ ಸರೋವರ ದಂಡೆಯ ಮೇಲೆ ಸಂವಿಧಾನ ದಿನಾಚರಣೆ

ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ ೪೧ ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತ ದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯವದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದರು.

ಶಿಬಿರದಲ್ಲಿ ಒಟ್ಟು ೪೯ ಯೂನಿಟ್ ಜನರು ಸ್ವಯಂ ಪ್ರೇರಣೆಯೊಂದಿಗೆ ರಕ್ತ ಸಂಗ್ರಹವಾಗಿದೆ.

ರೈತ ಮುಖಂಡ ಭಕ್ತರಹಳ್ಳಿ ಬೈರೇಗೌಡ, ಶಿಬಿರದ ಸಂಘಟನಾ ಸಂಚಾಲಕ ಡಾ. ಶಫಿ ಅಹಮದ್, ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಆದಿನಾರಾಯಣಪ್ಪ ಎನ್.ಎ., ರೆಡ್ ಕ್ರಾಸ್ ಅಧಿಕಾರಿ ಡಾ. ಸುನಿತಾ ಎಂ, ಐ.ಕ್ಯೂ.ಎ.ಸಿ ಕೋಆರ್ಡಿನೇಟರ್ ಶ್ರೀ ವೆಂಕಟೇಶ್ ಜಿ.ಬಿ.ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಕಾರ್ಯದರ್ಶಿ ಬಿ.ಎನ್.ರವಿಕುಮಾರ್,  ರಾಮಾಂಜನೇಯ, ಸುರೇಶ್ ಭಗತ್, ಸೇರಿದಂತೆ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.