ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Kannada Rajyotsava: ಗಡಿನಾಡಿನಲ್ಲಿ ಕನ್ನಡಾಭಿಮಾನದ ಸಂಭ್ರಮಕ್ಕೆ ಸಜ್ಜು : ನ.1ರಂದು ಅದ್ಧೂರಿ ರಾಜ್ಯೋತ್ಸವ, ಬೃಹತ್ ಬೈಕ್ ರ‍್ಯಾಲಿ

ಸಂಸದ ಡಾ.ಕೆ.ಸುಧಾಕರ್ ಗಡಿಭಾಗದಲ್ಲಿದ್ದರೂ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕನ್ನಡದ ಅಭಿಮಾನ ಹಾಗೂ ಭಾಷೆಯ ಮೇಲಿನ ಪ್ರೀತಿ ಗಟ್ಟಿಯಾಗಿದೆ. ಕನ್ನಡದ ಅಸ್ಮಿತೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸ್ಮರಿಸುವ ಜತೆಗೆ ಯುವಜನರಲ್ಲಿ ಕನ್ನಡಾಭಿಮಾನ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

ಗಡಿನಾಡಿನಲ್ಲಿ ಕನ್ನಡಾಭಿಮಾನದ ಸಂಭ್ರಮಕ್ಕೆ ಸಜ್ಜು

-

Profile
Ashok Nayak Oct 31, 2026 1:14 AM

ಚಿಕ್ಕಬಳ್ಳಾಪುರ: ಗಡಿನಾಡು ಚಿಕ್ಕಬಳ್ಳಾಪುರದಲ್ಲಿ ಕನ್ನಡ ಭಾಷೆ, ನಾಡು-ನುಡಿಯ ಅಭಿಮಾನ ವನ್ನು ಬಿಂಬಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಸಂಸದ ಡಾ.ಕೆ.ಸುಧಾಕರ್(Dr K Sudhakar) ನೇತೃತ್ವದಲ್ಲಿ ನವೆಂಬರ್ 1ರಂದು ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಸಲಾಗಿದೆ.

ಬೃಹತ್ ಬೈಕ್ ರ‍್ಯಾಲಿ, ವಿಜಯ್ ಪ್ರಕಾಶ್ ಅವರ ಸಂಗೀತ ಸಂಜೆ ಹಾಗೂ 10,460 ವಿದ್ಯಾರ್ಥಿಗಳಿಗೆ ಜ್ಞಾನಸುಧಾ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಗಳಾಗಿವೆ.

ಈ ಸಂಬಂಧ ನಗರದಲ್ಲಿ ಗುರುವಾರ ನಡೆಸಿದ ಮಾಧ್ಯಮಗೋಷಿಯಲ್ಲಿ ಮಾತನಾಡಿದ ಅವರು ಮಾತನಾಡಿದ ಸಂಸದ ಡಾ.ಕೆ.ಸುಧಾಕರ್ ಗಡಿಭಾಗದಲ್ಲಿದ್ದರೂ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕನ್ನಡದ ಅಭಿಮಾನ ಹಾಗೂ ಭಾಷೆಯ ಮೇಲಿನ ಪ್ರೀತಿ ಗಟ್ಟಿಯಾಗಿದೆ. ಕನ್ನಡದ ಅಸ್ಮಿತೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸ್ಮರಿಸುವ ಜತೆಗೆ ಯುವಜನರಲ್ಲಿ ಕನ್ನಡಾಭಿಮಾನ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಇದನ್ನೂ ಓದಿ: Chikkaballapur News: ಸಮುದಾಯದ ಏಳಿಗೆಯ ಗುರಿಯೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಅಭಿವೃದ್ಧಿ ಟ್ರಸ್ಟ್ ಸ್ಥಾಪನೆ: ಉಪಾಧ್ಯಕ್ಷ ಶಿವಕುಮಾರ್

1956ರ ನವೆಂಬರ್ 1ರಂದು ಕನ್ನಡ ಮಾತನಾಡುವ ಪ್ರದೇಶಗಳ ಏಕೀಕರಣದೊಂದಿಗೆ ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದಿತು. ೧೯೭೩ರಲ್ಲಿ ಕರ್ನಾಟಕ ಎಂದು ಮರುನಾಮಕರಣಗೊಂಡಿತು. ಈ ಭಾಗದ ಮಾಸ್ತಿ ವೆಂಕಟೇಶ ಅಯ್ಯಂಗಾರ್, ಡಿ.ವಿ.ಗುಂಡಪ್ಪ, ಕೈವಾರ ತಾತಯ್ಯ, ಸರ್ ಎಂ.ವಿಶ್ವೇ ಶ್ವರಯ್ಯ ಸೇರಿದಂತೆ ಅನೇಕ ಮಹನೀಯರು ಕನ್ನಡ ನಾಡಿನ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. ಅವರ ಪರಂಪರೆಯನ್ನು ಸ್ಮರಿಸುವುದರೊಂದಿಗೆ ಗಡಿಭಾಗದಲ್ಲಿ ಕನ್ನಡದ ಅಭಿಮಾನವನ್ನು ಮತ್ತಷ್ಟು ಬಲಪಡಿಸುವುದು ಕಾರ್ಯಕ್ರಮದ ಆಶಯವಾಗಿದೆ ಹೇಳಿದರು.

ನವೆಂಬರ್ ೧ರಂದು ಮಧ್ಯಾಹ್ನ ೨ ಗಂಟೆಗೆ ನಗರದ ಎಂ.ಜಿ.ರಸ್ತೆಯ ಮರುಳುಸಿದ್ದೇಶ್ವರ ದೇವಸ್ಥಾನ ದ ಬಳಿ ಪೂಜೆ ಸಲ್ಲಿಸಿ ಸಾವಿರಾರು ಬೈಕ್‌ಗಳ ಬೃಹತ್ ರ‍್ಯಾಲಿಗೆ ಚಾಲನೆ ನೀಡಲಾಗುವುದು. ಕನ್ನಡದ ಬಾವುಟಗಳನ್ನು ಹಿಡಿದು ಸಾಗುವ ರ‍್ಯಾಲಿ ಕನ್ನಡಾಭಿಮಾನ ಮತ್ತು ಏಕತೆಯ ಸಂದೇಶ ಸಾರಲಿದೆ.

ಸಂಜೆ 4.30ರಿಂದ ಸೊಲಾಲಪ್ಪನ ದಿನ್ನೆಯಲ್ಲಿ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಖ್ಯಾತ ಗಾಯಕ ವಿಜಯ್ ಪ್ರಕಾಶ್ ಮತ್ತು ತಂಡದಿAದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

*
ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸಂಸದ ಪಿ.ಸಿ.ಮೋಹನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ವಿದ್ಯಾರ್ಥಿ ವೇತನ ವಿತರಣೆಗಾಗಿ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿದ್ದು, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ವಿತರಣೆಯ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಸಾರಿಗೆ, ವೇದಿಕೆ, ಆಹಾರ, ಆಹ್ವಾನ ಹಾಗೂ ಪ್ರಚಾರ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ.

ಇದು ಯಾವುದೇ ರಾಜಕೀಯ ಉದ್ದೇಶದಿಂದ ಆಯೋಜಿಸಿರುವ ಕಾರ್ಯಕ್ರಮವಲ್ಲ. ಕನ್ನಡ ಭಾಷೆ, ನಾಡು-ನುಡಿ ಹಾಗೂ ಯುವಜನರ ಭವಿಷ್ಯವನ್ನು ಕೇಂದ್ರವಾಗಿಟ್ಟುಕೊಂಡು ಹಮ್ಮಿಕೊಂಡಿರುವ ಸಂಭ್ರಮವಾಗಿದೆ. ಎಲ್ಲ ಪಕ್ಷಗಳ ಮುಖಂಡರು, ಕನ್ನಡಪರ ಸಂಘಟನೆಗಳು ಹಾಗೂ ಸಾರ್ವಜನಿ ಕರು ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕು ಎಂದು ಇದೇ ವೇಳೆ ಸಂಸದರು ನಾಗರೀಕರಲ್ಲಿ ಮನವಿ ಮಾಡಿದರು.

image

ಕನ್ನಡ ರಾಜ್ಯೋತ್ಸವ ಕೇವಲ ಆಚರಣೆಗೆ ಸೀಮಿತವಾಗದೆ ಯುವಜನರ ಶೈಕ್ಷಣಿಕ ಪ್ರಗತಿಗೂ ನೆರವಾಗಬೇಕು ಎಂಬ ಉದ್ದೇಶದಿಂದ ಜ್ಞಾನಸುಧಾ ವಿದ್ಯಾರ್ಥಿವೇತನ ಯೋಜನೆ ಹಮ್ಮಿಕೊಳ್ಳ ಲಾಗಿದೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈವರೆಗೆ 10,460 ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ. ಇನ್ನೂ ಕೆಲವರ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ಪರಿಶೀಲನೆ ಪೂರ್ಣಗೊಂಡ ಬಳಿಕ ಅವರಿಗೂ ವಿದ್ಯಾರ್ಥಿವೇತನ ವಿತರಿಸಲಾಗುವುದು. ಜಾತಿ, ಧರ್ಮ ಅಥವಾ ರಾಜಕೀಯ ಹಿನ್ನೆಲೆ ಪರಿಗಣಿಸದೆ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಗು ತ್ತಿದೆ. ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವುದರ ಜತೆಗೆ ಆತ್ಮವಿಶ್ವಾಸ ತುಂಬುವುದು ನಮ್ಮ ಉದ್ದೇಶ. ವಿದ್ಯಾವಂತ ಮತ್ತು ಆರೋಗ್ಯವಂತ ಸಮಾಜವೇ ಸಮೃದ್ಧ ನಾಡಿನ ನಿರ್ಮಾಣಕ್ಕೆ ಅಡಿಪಾಯವಾಗಲಿದೆ.

-ಸಂಸದ ಡಾ.ಕೆ.ಸುಧಾಕರ್.ಚಿಕ್ಕಬಳ್ಳಾಪುರ.