ಎಸ್‌ಐಆರ್ ಜಾಗೃತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ: ತೋಟದ ಮನೆಯಲ್ಲಿ ಸಾವಿರಾರು ಕಾರ್ಯಕರ್ತರಿಗೆ ಭರ್ಜರಿ ಬಾಡೂಟ
2023ರ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 52 ಸಾವಿರ ಮತದಾರರು ತಮ್ಮ ಮೇಲೆ ವಿಶ್ವಾಸ ವಿಟ್ಟು ಬೆಂಬಲ ನೀಡಿದ್ದನ್ನು ಸ್ಮರಿಸಿದ ಅವರು, "ಜನರು ಅಭಿವೃದ್ಧಿಯ ನಿರೀಕ್ಷೆಯಿಂದ ಮತ ಚಲಾಯಿ ಸುತ್ತಾರೆ. ಆ ವಿಶ್ವಾಸವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಜನರ ಸುಖ-ದುಃಖಗಳಲ್ಲಿ ಸದಾ ಜೊತೆಯಾಗಿ ನಿಂತು ಶಿಡ್ಲಘಟ್ಟ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ" ಎಂದರು.
-
ಶಿಡ್ಲಘಟ್ಟ: "2028ರ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ನಂಬಿ ಆಶೀರ್ವದಿಸಿ ಗೆಲ್ಲಿಸಿದರೆ, ನಿಮ್ಮ ವಿಶ್ವಾಸಕ್ಕೆ ಎಂದಿಗೂ ದ್ರೋಹ ಮಾಡುವುದಿಲ್ಲ. ಈ ಪುಟ್ಟು ಆಂಜಿನಪ್ಪ ನಿಮ್ಮ ಕೈಯನ್ನು ಎಂದಿಗೂ ಬಿಡುವುದಿಲ್ಲ. ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನಸೇವೆಗೆ ಸದಾ ಬದ್ಧನಾಗಿರುತ್ತೇನೆ" ಎಂದು ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ ಹೇಳಿದರು.
ತಾಲೂಕಿನ ಅಜ್ಜಕದಿರೇನಹಳ್ಳಿ ಸಮೀಪದ ತಮ್ಮ ತೋಟದಲ್ಲಿ ಆಯೋಜಿಸಿದ್ದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 52 ಸಾವಿರ ಮತದಾರರು ತಮ್ಮ ಮೇಲೆ ವಿಶ್ವಾಸವಿಟ್ಟು ಬೆಂಬಲ ನೀಡಿದ್ದನ್ನು ಸ್ಮರಿಸಿದ ಅವರು, "ಜನರು ಅಭಿವೃದ್ಧಿಯ ನಿರೀಕ್ಷೆಯಿಂದ ಮತ ಚಲಾಯಿಸುತ್ತಾರೆ. ಆ ವಿಶ್ವಾಸವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಜನರ ಸುಖ-ದುಃಖಗಳಲ್ಲಿ ಸದಾ ಜೊತೆಯಾಗಿ ನಿಂತು ಶಿಡ್ಲಘಟ್ಟ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ" ಎಂದರು.
ಇದನ್ನೂ ಓದಿ: Shidlaghatta News: ಎಸ್‌ಐಆರ್ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ, ಮತದಾನದ ಹಕ್ಕು ಉಳಿಸಿಕೊಳ್ಳಿ: ತಹಶೀಲ್ದಾರ್ ಗಗನ ಸಿಂಧು
ಪಕ್ಷದ ಕಾರ್ಯಕರ್ತರೇ ತಮ್ಮ ರಾಜಕೀಯ ಬದುಕಿನ ನಿಜವಾದ ಶಕ್ತಿಯಾಗಿದ್ದು, ಅವರ ಪ್ರೀತಿ, ವಿಶ್ವಾಸ ಮತ್ತು ಬೆಂಬಲವೇ ಸಾರ್ವಜನಿಕ ಸೇವೆಗೆ ಸ್ಫೂರ್ತಿ ನೀಡಿದೆ ಎಂದು ಹೇಳಿದರು.
ಎಸ್‌ಐಆರ್ ಪ್ರಕ್ರಿಯೆ ಕುರಿತು ಪ್ರತಿಯೊಬ್ಬ ಅರ್ಹ ಮತದಾರರಿಗೂ ಜಾಗೃತಿ ಮೂಡಿಸುವ ಜವಾ ಬ್ದಾರಿ ಕಾರ್ಯಕರ್ತರ ಮೇಲಿದೆ. ಮನೆಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ, ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಕುರಿತು ಜನರಿಗೆ ಮಾಹಿತಿ ನೀಡಬೇಕು. ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾವಿ ರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.
ತೋಟದ ಮನೆಯಲ್ಲಿ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ
ಎಸ್‌ಐಆರ್ ಜಾಗೃತಿ ಕಾರ್ಯಕ್ರಮದ ಬಳಿಕ ಅಜ್ಜಕದಿರೇನಹಳ್ಳಿ ಸಮೀಪದ ತಮ್ಮ ತೋಟದ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ ಅವರು ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಭರ್ಜರಿ ಬಾಡೂಟ ಏರ್ಪಡಿಸಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಕಾರ್ಯಕರ್ತರು ಒಟ್ಟಾಗಿ ಊಟದಲ್ಲಿ ಪಾಲ್ಗೊಂಡರು. ಈ ವೇಳೆ ಪುಟ್ಟು ಆಂಜಿನಪ್ಪ ಅವರು ಕಾರ್ಯಕರ್ತರೊಂದಿಗೆ ಆತ್ಮೀಯವಾಗಿ ಬೆರೆತು ಮಾತನಾಡಿ, ಪಕ್ಷ ಸಂಘಟನೆ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆಗಳ ಕುರಿತು ಅಭಿಪ್ರಾಯ ವಿನಿಮಯ ನಡೆಸಿದರು. ಬಾಡೂಟದಲ್ಲಿ ಪಾಲ್ಗೊಂಡ ಕಾರ್ಯಕರ್ತರು ಆತಿಥ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
![]()
"2023ರ ಚುನಾವಣೆಯಲ್ಲಿ ಸುಮಾರು 52 ಸಾವಿರ ಮತದಾರರು ನನ್ನ ಮೇಲೆ ವಿಶ್ವಾಸ ತೋರಿ ದ್ದಾರೆ. ಆ ವಿಶ್ವಾಸವನ್ನು ಎಂದಿಗೂ ಕಳೆದುಕೊಳ್ಳುವುದಿಲ್ಲ. 2028ರಲ್ಲಿ ಜನರು ಆಶೀರ್ವದಿಸಿ ಗೆಲ್ಲಿಸಿದರೆ ಅವರ ಕೈಯನ್ನು ಎಂದಿಗೂ ಬಿಡುವುದಿಲ್ಲ. ಶಿಡ್ಲಘಟ್ಟ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನಸೇವೆಗೆ ಜೀವನಪೂರ್ತಿ ಶ್ರಮಿಸುತ್ತೇನೆ."
ಪುಟ್ಟು ಆಂಜಿನಪ್ಪ, ಕಾಂಗ್ರೆಸ್ ಮುಖಂಡ