ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Lok Adalat: ಲೋಕ ಅದಾಲತ್‌ನಲ್ಲಿ ಪ್ರಕರಣಗಳಿಗೆ ಶೀಘ್ರ ಮುಕ್ತಿ ದೊರೆಯುತ್ತದೆ: ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಕಳವಳ

ಹಿಂದಿನ ಕಾಲದಲ್ಲಿ ಅವಿಭಕ್ತ ಕುಟುಂಬಗಳಿದ್ದವು. ಕುಟುಂಬದಲ್ಲಿದ್ದ ಅಜ್ಜ, ಅಜ್ಜಿ ಹಾಗೂ ಇನ್ನಿತರ ಹಿರಿಯ ಸದಸ್ಯರಿಂದ ಮಕ್ಕಳು ಅಥವಾ ಮೊಮ್ಮಕ್ಕಳು ತಪ್ಪು ಮಾಡಿದಾಗ ಮೂಲದಲ್ಲೇ ತಿದ್ದಿ ಸರಿ ಮಾಡುವ ಕೆಲಸ ಆಗುತ್ತಿತ್ತು. ಇಂದಿನ ದಿನಮಾನದಲ್ಲಿ ವಿಭಕ್ತ ಕುಟುಂಬಗಳೇ ಹೆಚ್ಚಾಗಿ ಇರುವುದರಿಂದ ಸಣ್ಣ ಸಣ್ಣ ಜಗಳಕ್ಕೂ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿರುವುದು ಕಳವಳಕಾರಿ ವಿಚಾರ

ಲೋಕ ಅದಾಲತ್‌ನಲ್ಲಿ ಪ್ರಕರಣಗಳಿಗೆ ಶೀಘ್ರ ಮುಕ್ತಿ ದೊರೆಯುತ್ತದೆ

-

Ashok Nayak
Ashok Nayak Mar 14, 2026 10:03 PM

ಚಿಕ್ಕಬಳ್ಳಾಪುರ: ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರು ಮುಂದಾಗುವುದರಿAದ ಪ್ರಕರಣಗಳಿಗೆ ಶೀಘ್ರ ಮುಕ್ತಿ ದೊರೆಯುತ್ತದೆ. ಹಣ, ಸಮಯ ಉಳಿಯುವ ಜೊತೆಗೆ ಪದೇ ಪದೇ ನ್ಯಾಯಾಲಯಕ್ಕೆ ಅಲೆಯುವುದು ತಪ್ಪುತ್ತದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ತಿಳಿಸಿದರು.

ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಗೆ ಚಾಲನೆ ನೀಡಿ ಮಾತನಾಡಿದರು.

ಅದಾಲತ್‌ನಲ್ಲಿ ನೀಡುವ ತೀರ್ಪು ನ್ಯಾಯಾಲಯದಲ್ಲಿ ಸಹಜವಾಗಿ ನಡೆಯುವ ಪ್ರಕರಣ ಗಳ ತೀರ್ಪುಗಳಿಗಿಂತ ಭಿನ್ನವಾಗಿದ್ದು ಉಭಯ ಕಕ್ಷಿದಾರರಿಗೂ ಸಮಾಧಾನ ಮತ್ತು ನೆಮ್ಮದಿ ಸಿಗುವ ಜೊತೆಗೆ  ಸಮಯ ಉಳಿತಾಯವಾಗುತ್ತದೆ ಎಂದರು.

ಹಿಂದಿನ ಕಾಲದಲ್ಲಿ ಅವಿಭಕ್ತ ಕುಟುಂಬಗಳಿದ್ದವು. ಕುಟುಂಬದಲ್ಲಿದ್ದ ಅಜ್ಜ, ಅಜ್ಜಿ ಹಾಗೂ ಇನ್ನಿತರ ಹಿರಿಯ ಸದಸ್ಯರಿಂದ ಮಕ್ಕಳು  ಅಥವಾ ಮೊಮ್ಮಕ್ಕಳು ತಪ್ಪು ಮಾಡಿದಾಗ ಮೂಲದಲ್ಲೇ ತಿದ್ದಿ ಸರಿ ಮಾಡುವ ಕೆಲಸ ಆಗುತ್ತಿತ್ತು. ಇಂದಿನ ದಿನಮಾನದಲ್ಲಿ ವಿಭಕ್ತ ಕುಟುಂಬಗಳೇ ಹೆಚ್ಚಾಗಿ ಇರುವುದರಿಂದ ಸಣ್ಣ ಸಣ್ಣ ಜಗಳಕ್ಕೂ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿರುವುದು ಕಳವಳಕಾರಿ ವಿಚಾರ ಎಂದರು.

ಇದನ್ನೂ ಓದಿ: Chikkamagaluru: ತಂದೆಯ ಶವಕ್ಕೆ ಮಗಳಿಂದಲೇ ಅಗ್ನಿಸ್ಪರ್ಶ, ಕಡೂರಿನಲ್ಲಿ ಮಾದರಿ ಘಟನೆ

ಪ್ರತಿ ಸಣ್ಣಪುಟ್ಟ ವಿಚಾರಗಳನ್ನೂ ವ್ಯಾಜ್ಯಗಳನ್ನಾಗಿ ಪರಿವರ್ತಿಸಿಕೊಳ್ಳಬಾರದು. ಸಂಯಮ ದಿಂದ ಪರಿಸ್ಥಿತಿಗಳನ್ನು ನಿಭಾಯಿಸಿ ಮುಂದೆ ಎದುರಾಗುವ ಸಮಸ್ಯೆಗಳಿಗೆ ಮೂಲದಲ್ಲೇ ಕಡಿವಾಣ ಹಾಕಬೇಕು. ಪ್ರಕರಣಗಳು ದಾಖಲಾಗುವುದರಿಂದ ಅಮೂಲ್ಯವಾದ ಸಮಯ, ಹಣ, ನೆಮ್ಮದಿ ಹಾಳಾಗುತ್ತದೆ. ಜೊತೆಗೆ ನ್ಯಾಯಾಲಯಗಳಲ್ಲೂ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗಿ  ನ್ಯಾಯಾಲಯಗಳ ಮೇಲೂ ಒತ್ತಡ ಅಧಿಕವಾಗಿ ಹೊರೆಯೂ ಹೆಚ್ಚಾಗು ತ್ತದೆ ಎಂದರು.

ಪ್ರಕರಣಗಳು ಹೆಚ್ಚಾದಾಗ ಇತ್ಯರ್ಥಪಡಿಸುವುದು ಸಹಜವಾಗಿ ತಡವಾಗುತ್ತದೆ. ಕೆಲವೊಮ್ಮೆ ದೀರ್ಘಕಾಲ ಹಿಡಿಯುತ್ತದೆ. ಇದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ವೋಚ್ಛ ನ್ಯಾಯಾ ಲಯ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆರಂಭಿಸಿದೆ. ಈ ಅದಾಲತ್ ಮೂಲಕ ನ್ಯಾಯಾಲಯದಲ್ಲಿ ಹಾಲಿ ಇರುವ ವಿವಿಧ ಕೆಲವು ಪ್ರಕರಣಗಳು, ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಕೀಲರ ಸಹಕಾರದೊಂದಿಗೆ ಕಕ್ಷಿದಾರರ ಪರಸ್ಪರ ರಾಜಿ, ಸಂಧಾನ ದೊಂದಿಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ. ಇದರ ಉಪಯೋಗವನ್ನು ಜಿಲ್ಲೆಯ ಜನರು ಪಡೆದುಕೊಳ್ಳಬೇಕು ಎದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಮಾತನಾಡಿ, ಅಣ್ಣ ತಮ್ಮಂದಿರು ತಮ್ಮ ಜಮೀನು, ಆಸ್ತಿಪಾಸ್ತಿಗಳ ಸಮಸ್ಯೆಗಳನ್ನು ಮೂಲದಲ್ಲೇ ಬಗೆ ಹರಿಸಿಕೊಂಡರೆ ಸಮಸ್ಯೆಗಳು ಪ್ರಕರಣಗಳಾಗಿ ನ್ಯಾಯಾಲಯದ ಮೆಟ್ಟಿಲು ಹತ್ತುವ ಅವಶ್ಯಕತೆ ಇರುವುದಿಲ್ಲ. ಅಣ್ಣ ತಮ್ಮಂದಿರ ಆಸ್ತಿ ಸಮಸ್ಯೆಗಳು ನ್ಯಾಯಾಲಯದ ಮೆಟ್ಟಿಲು ಏರಿದಲ್ಲಿ ಸಂಬಂಧಗಳು ಹದಗೆಡುತ್ತವೆ. ನೆಮ್ಮದಿ ಹಾಳಾಗಿ ದ್ವೇಷ ಅಸೂಯೆಗಳ ಹೆಚ್ಚಳಕ್ಕೂ ಕಾರಣವಾಗುತ್ತದೆ ಎಂದರು.

ಕುಟುಂಬಗಳ ಹಂತದಲ್ಲೇ ತಂದೆ ಸಂಪಾದನೆಯ ಆಸ್ತಿಪಾಸ್ತಿಗಳನ್ನು ನ್ಯಾಯಯುತ ರೀತಿಯಲ್ಲಿ ಮುಕ್ತವಾಗಿ ಹಂಚಿಕೊಂಡರೆ ಯಾವುದೇ ಸಮಸ್ಯೆ ಇರುವುದಿಲ್ಲ. ಸಣ್ಣಪುಟ್ಟ ವಿಸ್ತೀರ್ಣದ ಜಮೀನುಗಳಿಗಾಗಿ ಪ್ರತಿಷ್ಠೆಗಳಿಗೆ ಬಿದ್ದು ಅನೇಕರು ನ್ಯಾಯಾಲಯಗಳಲ್ಲಿ ಪ್ರಕರಣಗಳಿಗೆ ತಲೆಮಾರುಗಟ್ಟಲೇ  ಮತ್ತು ಅನೇಕ ವರ್ಷಾನುಗಟ್ಟಲೆ ಓಡಾಡುತ್ತಿರು ವವರು ಅನೇಕರಿದ್ದಾರೆ ಅಂತವರು ಅರ್ಥ ಮಾಡಿಕೊಂಡು ಸಂಬಂಧಗಳಿಗೆ ಬೆಲೆ ಕೊಟ್ಟರೆ ಎಲ್ಲ ಪ್ರಕರಣಗಳು ಇತ್ಯರ್ಥ ಆಗುತ್ತವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ನ್ಯಾಯಾಧೀಶರು ಸೇರಿದಂತೆ ವಕೀಲರು, ಕಕ್ಷಿದಾರರು ಭಾಗವಹಿಸಿದ್ದರು.