ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Dr D Veerendra Heggade: ಅರುಣೋದಯ ವಿಶೇಷ ಮಕ್ಕಳ ಶಾಲೆಯಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

ಸೇವೆ, ತ್ಯಾಗ, ಮಾನವೀಯತೆ ಹಾಗೂ ಸಮಾಜಮುಖಿ ಚಿಂತನೆಗಳ ಮೂಲಕ ಸಾವಿರಾರು ಜನರ ಬದುಕಿನಲ್ಲಿ ಆಶಾಕಿರಣ ಮೂಡಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಪದ್ಮವಿಭೂಷಣ ಹಾಗೂ ಕರ್ನಾಟಕ ರತ್ನ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜೀವನ ಸಮಾಜಕ್ಕೆ ಸದಾ ಪ್ರೇರಣಾ ದಾಯಕವಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಸೇವೆ, ತ್ಯಾಗ, ಮಾನವೀಯತೆಯೇ ಹೆಗ್ಗಡೆಯವರ ಬದುಕಿನ ಆದರ್ಶ: ಗಣ್ಯರ ಅಭಿಮತ

-

Profile
Ashok Nayak Nov 26, 2026 11:48 PM

ಗೌರಿಬಿದನೂರು: ಸೇವೆ, ತ್ಯಾಗ, ಮಾನವೀಯತೆ ಹಾಗೂ ಸಮಾಜಮುಖಿ ಚಿಂತನೆಗಳ ಮೂಲಕ ಸಾವಿರಾರು ಜನರ ಬದುಕಿನಲ್ಲಿ ಆಶಾಕಿರಣ ಮೂಡಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಪದ್ಮವಿಭೂಷಣ ಹಾಗೂ ಕರ್ನಾಟಕ ರತ್ನ ಡಾ. ಡಿ. ವೀರೇಂದ್ರ ಹೆಗ್ಗಡೆ(Dr D Veerendra Heggade)ಯವರ ಜೀವನ ಸಮಾಜಕ್ಕೆ ಸದಾ ಪ್ರೇರಣಾದಾಯಕವಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ನಗರದ ಅರುಣೋದಯ ವಿಶೇಷ ಮಕ್ಕಳ ಶಾಲೆಯಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ಅಂಗವಾಗಿ ಪ್ರಜ್ಞಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ: Veerendra Heggade: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ಕೈಲಾಸಗಿರಿ ಬರುವಂತೆ ಆಹ್ವಾನ ನೀಡಿದ ಸಹೋದರರು

ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಯೋಜನಾಧಿಕಾರಿ ನಾಗರಾಜ್ ಎಂ. ನಾಯ್ಕ ಮಾತನಾಡಿ, ಪೂಜ್ಯ ಹೆಗ್ಗಡೆಯವರು ಸಮಾಜಕ್ಕೆ ನೀಡಿರುವ ಕೊಡುಗೆಗಳು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಅನುಷ್ಠಾನಗೊಳ್ಳುತ್ತಿರುವ ವಿವಿಧ ಜನಪರ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಅರುಣೋದಯ ಶಾಲೆಯ ಸಂಸ್ಥಾಪಕ ನಾಗರಾಜ್ ಅವರ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.

ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಮಾರ್ಕೆಟ್ ಮೋಹನ್ ಮಾತನಾಡಿ, ಹೆಗ್ಗಡೆಯವರು ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಸೇವೆ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪತ್ರಕರ್ತ ಲೇಪಾಕ್ಷಿ ಸಂತೋಷ್ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯೆ ಲಕ್ಷ್ಮೀ ಮಾತನಾಡಿ, ಸಮಾಜದ ದುರ್ಬಲ ವರ್ಗದವರ ಬದುಕಿನಲ್ಲಿ ಬದಲಾವಣೆ ತರಲು ಹೆಗ್ಗಡೆಯವರು ಕೈಗೊಂಡಿರುವ ಸೇವಾ ಕಾರ್ಯಗಳನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಪ್ರಜ್ಞಾ ಟ್ರಸ್ಟ್ ಅಧ್ಯಕ್ಷೆ ವಿಜಯಲಕ್ಷ್ಮೀ, ರಮಾದೇವಿ, ವಲಯ ಮೇಲ್ವಿಚಾರಕ ಅಜಿತ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.