Shakti Scheme Celebration: ಶಕ್ತಿ ಯೋಜನೆಯಲ್ಲಿ 500 ಕೋಟಿಗೂ ಹೆಚ್ಚು ಮಹಿಳೆಯರು ಪ್ರಯಾಣ ಸಂಭ್ರಮದ ಆಚರಣೆ
ಐದು ಗ್ಯಾರಂಟಿ ಯೋಜನೆಗಳ ಪೈಕಿ "ಶಕ್ತಿ" ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಕಳೆದ 2023 ರ ಜೂನ್ 11 ರಿಂದ ಜಾರಿಗೊಳಿಸಿದ್ದು, ರಾಜ್ಯದ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿ ದ್ದಾರೆ.

ಬಾಗೇಪಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ 500 ಕೋಟಿ ಚೀಟಿ ವಿತರಣೆ ಸಂಭ್ರಮವನ್ನು ಸಿಹಿ ಹಂಚಿ ಆಚರಿಸಲಾಯಿತು

ಬಾಗೇಪಲ್ಲಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವಾಕಾಂಕ್ಷಿ ಯೋಜನೆ ಯಾಗಿರುವ "ಶಕ್ತಿ" ಯೋಜನೆಯಡಿ 500 ಕೋಟಿಗೂ ಹೆಚ್ಚು ಮಹಿಳೆಯರು ರಾಜ್ಯದ ಸರ್ಕಾರಿ ಸ್ವಾಮ್ಯದ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹಿನ್ನಲೆಯಲ್ಲಿ ಪಟ್ಟಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಸಂಭ್ರಮಾಚರಣೆ ನಡೆಯಿತು.
ಬಾಗೇಪಲ್ಲಿ ಪಟ್ಟಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಅಲಂಕೃತವಾಗಿರುವ ಬಸ್‍ಗೆ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ನರೇಂದ್ರ ಅವರು ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಮತ್ತು ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಹೂ ಹಾಗೂ ಸಿಹಿ ವಿತರಣೆ ಮಾಡಿದರು.
ಐದು ಗ್ಯಾರಂಟಿ ಯೋಜನೆಗಳ ಪೈಕಿ "ಶಕ್ತಿ" ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಕಳೆದ 2023 ರ ಜೂನ್ 11 ರಿಂದ ಜಾರಿಗೊಳಿಸಿದ್ದು, ರಾಜ್ಯದ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.
ಇದನ್ನೂ ಓದಿ: Shakti Scheme: ಶಕ್ತಿ ಯೋಜನೆಯಡಿ 500 ಕೋಟಿ ಗಡಿ ದಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ!
ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ ಫಲಾನುಭವಿಗಳ ಸಂಖ್ಯೆ 500 ಕೊಟಿ ಗಡಿ ದಾಟಿದ್ದು, ಈ ಸಂಭ್ರಮವನ್ನು ಸಾಂಕೇತಿಕವಾಗಿ ಕೇಂದ್ರ ಎಲ್ಲ ತಾಲ್ಲೂಕುಗಳಲ್ಲಿನ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ, ಬಸ್ಸಿಗೆ ಪೂಜೆ ಸಲ್ಲಿಸಿ, ಸಾರಿಗೆ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ಸಿಹಿ ತಿನಿಸಿ ಸಂಭ್ರಮಾಚರಣೆ ಮಾಡಲಾಯಿತು.
ಶಕ್ತಿ ಯೋಜನೆಯ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಪಟ್ಟಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣವನ್ನು ಹೂವು, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶಕ್ತಿ ಯೋಜನೆಗೆ ಸಂಬಂಧಿಸಿದ ಸಾಧನೆ ಬಿಂಬಿಸುವ ಫ್ಲೆಕ್ಸ್ ಗಳನ್ನು ಬಸ್ ನಿಲ್ದಾಣ ಆವರಣದಲ್ಲಿ ಅಳವಡಿಸಲಾಗಿತ್ತು. ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಶಕ್ತಿ ಯೋಜನೆಯ ಸಾಧನೆ ಯನ್ನು ಸಿಹಿ ಸವಿಯುವ ಮೂಲಕ ಸಂಭ್ರಮಿಸಿ, ಇಂತಹ ಉತ್ತಮ ಯೋಜನೆ ಜಾರಿಗೊಳಿಸಿದ ರ್ಕಾರಕ್ಕೆ ಜೈಕಾರ ಹಾಕಿದರು.
ತದನಂತರ ಮಾಧ್ಯಮದೊಂದಿಗೆ ಮಾತನಾಡಿ, ಸ್ತ್ರೀ ಶಕ್ತಿ ಯೋಜನೆ ಬಾಗೇಪಲ್ಲಿ ಚೇಳೂರು ಹಾಗೂ ಗುಡಿಬಂಡೆ ತಾಲ್ಲೂಕು ಮಹಿಳೆಯರು ಇದರ ಪ್ರಯೋಜನವನ್ನು ಪಡೆದಿದ್ದಾರೆ. ದೇವಾಲಯ ಸಂದರ್ಶನ, ತಮ್ಮ ದೂರದ ಊರಿಗೆ ಪ್ರಯಾಣಕ್ಕೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಸಿದ್ದರಾಮಯ್ಯರವರ ಅತ್ಯುತ್ತಮ ಯೋಚನೆ ಎಲ್ಲರೂ ಇದರ ಪ್ರಯೋಜನ ಪಡೆಯಲಿ
ಎಂದರು.
ರಾಜ್ಯದ ಸರ್ಕಾರದ ಶಕ್ತಿ ಯೋಜನೆಯಿಂದ ಬಹಳ ಅನುಕೂಲವಾಗಿದೆ. 500 ಕೋಟಿಗೆ ಹೆಚ್ಚು ಮಹಿಳಾ ಫಲಾನುಭವಿಗಳು ಸರ್ಕಾರಿ ಸ್ವಾಮ್ಯದ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ ಮೈಲಿಗಲ್ಲು ಸಾಧಿಸಿರುವುದು ಸಂತಸದ ಸಂಗತಿ. ನಾರಿಶಕ್ತಿಯ ಸಬಲೀಕರಣಕ್ಕೆ ಸಹಕಾರಿಯಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರವು ಬಡವರಿಗಾಗಿಯೇ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಮ ರ್ಪಕವಾಗಿ ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರ ಬದುಕು ಹಸನಾಗಿದೆ. ಉದ್ಯೋಗಿಗಳು ಬಸ್ ಪ್ರಯಾಣಕ್ಕಾಗಿ ಖರ್ಚು ಮಾಡುತ್ತಿದ್ದ ಹಣವನ್ನು, ಮನೆಯ ಇತರೆ ಖರ್ಚು ವೆಚ್ಚ ಭರಿಸಲು ಅನುಕೂಲವಾಗಿದೆ.
ಹಾಗಾಗಿ ಪಂಚ ಗ್ಯಾರಂಟಿ ಯೋಜನೆ ಬಡವರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಧನ್ಯವಾದಗಳು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಸೋಮಶೇಖರ್, ಹುಬ್ಬಳ್ಳಿ ಬಯಪ್ಪ,ಸುಬ್ಬರಾಮ್,ನರೇಶ್,ಮಂಜುನಾಥ ಗಂಗಾಧರ, ಬಾಬು, ಶ್ರೀನಿವಾಸ್, ವಿಭಾಗೀಯ ನಿಯತಂತ್ರಣಾಧಿಕಾರಿಗಳಾದ ಶ್ರೀನಿವಾಸ್ ಮೂರ್ತಿ, ಮಹಮ್ಮದ್ ಖಲೀದ್,ಹಾಗೂ ಸಾರ್ವಜನಿಕರು ಹಾಜರಿದ್ದರು.