ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಜಲ ಜೀವನ್ ಮಿಷನ್ ಯೋಜನೆಯಡಿ ಮಂಜೂರಾದ ಕಾಮಗಾರಿಗಳಗಳ ಪರಿಶೀಲನೆ

ತಾಲ್ಲೂಕಿನ ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡ್ರಮರದಹಳ್ಳಿ ಮತ್ತು ಪೆರೇಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪಾರೆಡ್ಡಿ ನಾಗೇನಹಳ್ಳಿ ಗ್ರಾಮದ ಜಲ ಜೀವನ್ ಮಿಷನ್ ಯೋಜನೆ ಯಡಿ ಮಂಜೂರಾದ ಕಾಮಗಾರಿ ಸ್ಥಳಕ್ಕೆ ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು

ಜಲ ಜೀವನ್ ಮಿಷನ್ ಯೋಜನೆ: ಕಾಮಗಾರಿಗಳ ಪರಿಶೀಲನೆ

Ashok Nayak Ashok Nayak Jul 25, 2025 8:44 PM

ಚಿಕ್ಕಬಳ್ಳಾಪುರ: ತಾಲ್ಲೂಕಿನ ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡ್ರಮರದಹಳ್ಳಿ ಮತ್ತು ಪೆರೇಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪಾರೆಡ್ಡಿ ನಾಗೇನಹಳ್ಳಿ ಗ್ರಾಮದ ಜಲ ಜೀವನ್ ಮಿಷನ್ ಯೋಜನೆಯಡಿ ಮಂಜೂರಾದ ಕಾಮಗಾರಿ ಸ್ಥಳಕ್ಕೆ ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪೆರೇಸಂದ್ರ ಗ್ರಾಮ ಪಂಚಾಯಿತಿಯ ಡಿಜಿಟಲ್ ಲೈಬ್ರರಿ ಸ್ಥಳಕ್ಕೆ ಮಾನ್ಯರು ಭೇಟಿ ನೀಡಿದರು.

ಇದನ್ನೂ ಓದಿ: Chikkaballapur News: ಸಿಇಒ ಡಾ.ನವೀನ್ ಭಟ್.ವೈ ರಿಂದ ಜೆಜೆಎಂ ಕಾಮಗಾರಿ ವೀಕ್ಷಣೆ

ನಂತರ ತಿಪ್ಪಾರೆಡ್ಡಿ ನಾಗೇನಹಳ್ಳಿ ಗ್ರಾಮದಲ್ಲಿರುವ ಮನೆ ಮನೆಗೆ ಗಂಗೆ ಅಳವಡಿಸಿರುವ (ನಲ್ಲಿ) ನಳಗಳನ್ನು ಮಾನ್ಯರು ನೀರು ಬರುವುಕಿಯ ಬಗ್ಗೆ ಪರೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ನವೀನ್ ಭಟ್ ಸರ್ ರವರು, ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮಂಜುನಾಥ್ ಜಿ.ಆರ್ ರವರು, ಜಿಲ್ಲಾ JJM ಸಂಯೋಜಕರು, ಪೆರೇಸಂದ್ರ ಮತ್ತು ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ PDO ರವರಾದ ವಿಜೇಂದ್ರ ಕುಮಾರ್ ಮತ್ತು ನಾರಾಯಣಸ್ವಾಮಿ ರವರು , ನರೇಗಾ ತಾಂತ್ರಿಕ ಸಂಯೋಜಕರಾದ ಮಂಜುನಾಥ್ ರವರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸಿಬ್ಬಂದಿ ಸೇರಿದಂತೆ ಇತರರು ಹಾಜರಿದ್ದರು.