Minister K. J. George: ಜೂನ್ 11ಕ್ಕೆ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ: ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿಕೆ
ರೈತರ ಪಂಪ್ ಸೆಟ್ ಗಳಿಗೆ ಸಮಸ್ಯೆ ಇಲ್ಲದೆ ವಿದ್ಯುತ್ ನೀಡಲು ನಮ್ಮ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಕುಸುಮ್ ಬಿಗೆ ಚಾಲನೆ ನೀಡಿದ್ದು, ಈಗ ಕುಸುಮ್ ಸಿ ಯೋಜನೆಗೆ ಚಾಲನೆ ನೀಡಲಾಗು ತ್ತಿದ್ದು, ಇದೇ ತಿಂಗಳ ೧೧ ರಂದು ರಾಜ್ಯ ಮಟ್ಟದ ಕುಸುಮ್ ಸಿ ಕಾರ್ಯಕ್ರಮಕ್ಕೆ ತೊಂಡೇಬಾವಿಯಲ್ಲಿ ನಡೆಯುವ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ

ಜೂನ್ ೧೧ಕ್ಕೆ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಚಿಕ್ಕಬಳ್ಳಾಪುರ : ಕುಸುಮ್- ಸಿ ಯೋಜನೆಗೆ ಇದೇ ತಿಂಗಳ 11ರಂದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಕುಸುಮ್ ಸಿ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮದ ಆಯೋಜನೆಯ ಭಾಗವಾಗಿ ಸೋಮವಾರ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಗ್ರಾಮಕ್ಕೆ ಭೇಟಿ ನೀಡಿ ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾಧ್ಯಮ ದೊಂದಿಗೆ ಮಾತನಾಡಿದರು. ರಾಜ್ಯ ಸರ್ಕಾರ ರೈತರ ಕೃಷಿ ಪಂಪ್ ಸೆಟ್ಗಳಿಗೆ ಪ್ರಸ್ತುತ ೦೫ ಗಂಟೆಗಳ ವಿದ್ಯುತ್ ಪೂರೈಕೆ ಮಾಡುತ್ತಿದೆ. ರಾಜ್ಯದಲ್ಲಿನ ವಿದ್ಯುತ್ ಕಂಪನಿಗಳಿಗೆ ೧೮ ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿರುವ ಉಚಿತ ವಿದ್ಯುತ್ನ ಭಾಗವಾಗಿ ಸಬ್ಸಿಡಿಯಾಗಿ ಪಾವತಿಸುತ್ತಿದೆ. ರೈತರ ಪಂಪ್ ಸೆಟ್ ಗಳಿಗೆ ಸಮಸ್ಯೆ ಇಲ್ಲದೆ ವಿದ್ಯುತ್ ನೀಡಲು ನಮ್ಮ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಕುಸುಮ್ ಬಿಗೆ ಚಾಲನೆ ನೀಡಿದ್ದು, ಈಗ ಕುಸುಮ್ ಸಿ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಇದೇ ತಿಂಗಳ ೧೧ ರಂದು ರಾಜ್ಯ ಮಟ್ಟದ ಕುಸುಮ್ ಸಿ ಕಾರ್ಯಕ್ರಮಕ್ಕೆ ತೊಂಡೇಬಾವಿಯಲ್ಲಿ ನಡೆಯುವ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದರು.
ಇದನ್ನೂ ಓದಿ: Chikkanayakanahalli (Tumkur) News:ಹೇಮಾವತಿ ನೀರು ಹರಿಸಲು ಪ್ರಾಮಾಣಿಕವಾಗಿ ಶ್ರಮ ಹಾಕುತ್ತಿದ್ದೇನೆ : ಸಿಬಿಎಸ್
ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಭಾಗವಹಿಸಲಿದ್ದಾರೆ. ಕುಸುಮ್ ಸಿ ಮೂಲಕ ೨೪೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, ಇಲ್ಲಿಂದಲೇ ಸ್ಥಳೀಯ ಸುತ್ತಮುತ್ತಲ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಅನುಕೂಲವಾಗಲಿದೆ. ಈ ಹಿಂದೆ ಅಕ್ರಮ ಸಕ್ರಮದಡಿ ೪.೫ ಲಕ್ಷ ಅರ್ಜಿಗಳು ಬಾಕಿ ಇದ್ದವು. ಈವರೆಗೆ ೨.೫ ಲಕ್ಷ ಅರ್ಜಿಗಳು ವಿಲೇವಾರಿ ಯಾಗಿದ್ದು, ಉಳಿದ ಅರ್ಜಿಗಳನ್ನು ಹಂತ ಹಂತವಾಗಿ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.
ಈ ವರ್ಷ ಯಾವುದೇ ಸಮಸ್ಯೆ ಇಲ್ಲದೆ ವಿದ್ಯುತ್ ನಿರಂತರವಾಗಿ ಸರಬರಾಜಾಗಿದೆ. ರೈತರ ಪಂಪ್ ಸೆಟ್ ಗಳಿಗೆ ಬೇಡಿಕೆಗೆ ತಕ್ಕಂತೆ ಹಾಗೂ ಸಮಸ್ಯೆ ಇಲ್ಲದೆ ವಿದ್ಯುತ್ ಪೂರೈಸಲು ಕುಸುಮ್ ಸಿ ಅನುಕೂಲವಾಗಲಿದೆ. ಈಗಾಗಲೇ ಪಾವಗಡದಲ್ಲಿ ಏಷ್ಯಾದಲ್ಲೇ ಬೃಹತ್ತಾದ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯದಲ್ಲಿ ೧೬ ಲಕ್ಷ ಕಿ.ಮೀ ಉದ್ದದಷ್ಟು ವಿದ್ಯುತ್ ಮಾರ್ಗ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ. ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆ ಮಾಡಲು ಹಾಗೂ ನಿರಂತರ ವಿದ್ಯುತ್ ಸರಬರಾಜಿಸಲು ಪೂರಕವಾಗಿ ಇಲಾಖೆ ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಗೌರಿಬಿದನೂರು ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ,ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವ ಶಂಕರ್,ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ ಟಿ ನಿಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ , ಅಪರ ಜಿಲ್ಲಾಧಿಕಾರಿ ಡಾ ಎನ್ ಭಾಸ್ಕರ್,ಉಪ ವಿಭಾಗಾಧಿಕಾರಿ ಅಶ್ವಿನ್, ತಹಸೀಲ್ದಾರ್ ಮಹೇಶ್ ಪತ್ರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ
ಗಳು ಇದ್ದರು.