ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿ ಉಳಿವಿಗೆ ಸಮ್ಮೇಳನಗಳು ಪೂರಕ: ತಹಶೀಲ್ದಾರ್ ಗಗನ ಸಿಂಧು
ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಇಂತಹ ಸಮ್ಮೇಳನಗಳ ಪಾತ್ರ ಮಹತ್ವದ್ದಾಗಿದೆ. ಕನ್ನಡ ಭಾಷೆಯ ಶ್ರೀಮಂತ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ತಿಳಿಸಿದರು.
-
ಶಿಡ್ಲಘಟ್ಟ,: ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಬೆಳವಣಿಗೆಗೆ ಕನ್ನಡ ಸಾಹಿತ್ಯ ಸಮ್ಮೇಳನಗಳು ಮಹತ್ವದ ವೇದಿಕೆಯಾಗಿವೆ ಎಂದು ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿ ಗಗನ ಸಿಂಧು ಎನ್. ಅಭಿಪ್ರಾಯಪಟ್ಟರು.
ನಗರದಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ 11ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.
ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಇಂತಹ ಸಮ್ಮೇಳನಗಳ ಪಾತ್ರ ಮಹತ್ವದ್ದಾಗಿದೆ. ಕನ್ನಡ ಭಾಷೆಯ ಶ್ರೀಮಂತ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: Shidlaghatta News: ಜೆ.ವೆಂಕಟಾಪುರ ಗ್ರಾ.ಪಂ. ಹಣಕಾಸು ಅವ್ಯವಹಾರ ಆರೋಪ: ಪಿಡಿಒ ಅಮಾನತಿಗೆ ಆಗ್ರಹ
ಇದಕ್ಕೂ ಮುನ್ನ ಧ್ವಜಾರೋಹಣ ನೆರವೇರಿಸಿದ ಅವರು, ಕನ್ನಡದ ನಾಡು-ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ವೈಭವ ಸಾರುವ ಮೆರವಣಿಗೆಯಲ್ಲಿ ಪಾಲ್ಗೊಂಡರು. ಬಳಿಕ ವೇದಿಕೆ ಕಾರ್ಯಕ್ರಮ ದಲ್ಲಿಯೂ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಸಕ, ಸಮ್ಮೇಳನದ ಅಧ್ಯಕ್ಷ ವೇದಪಂಡಿತ ವಿದ್ವಾನ್ ವೈ.ಎನ್. ದಾಶರಥಿ ಭಟ್ಟಾಚಾರ್ಯ, ರಾಜ್ಯ ನೇಕಾರರ ನಿಗಮ ಮಂಡಳಿ ಅಧ್ಯಕ್ಷ ಬಿ.ಜೆ. ಗಣೇಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಪರ ಹೋರಾಟಗಾರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.