ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gudibande News: ಕಾಂಗ್ರೆಸ್ ಕೇವಲ ಟೀಕೆಗೆ ಸೀಮಿತ, ಅಭಿವೃದ್ಧಿಯಲ್ಲಿ ಶೂನ್ಯ: ಸಿ.ಮುನಿರಾಜು ವಾಗ್ದಾಳಿ

ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಅನಗತ್ಯವಾಗಿ ಟೀಕಿಸುವುದರಲ್ಲೇ ಈ ಸರ್ಕಾರ ಕಾಲ ಕಳೆಯುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಮಾಡುವಲ್ಲಿ ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್, ಕೇವಲ ಟೀಕೆ ಮಾಡುವುದರಲ್ಲಿ ಮಾತ್ರ ಅಭಿವೃದ್ಧಿ ಸಾಧಿಸಿದೆ. ಬಡವರು, ಮಹಿಳೆಯರಿಗೆ ಗ್ಯಾರಂಟಿ ಯೋಜನೆ ಗಳ ಹೆಸರಿನಲ್ಲಿ ಮೋಸ ಮಾಡುತ್ತಿದೆ. ನಿಮ್ಮ ಮನೆಗಳಿಂದ 10 ರೂಪಾಯಿ ಕಸಿದುಕೊಂಡು ನಿಮಗೆ 2 ರೂಪಾಯಿ ಕೊಡುತ್ತಿದೆ.

ಕಾಂಗ್ರೆಸ್ ಕೇವಲ ಟೀಕೆಗೆ ಸೀಮಿತ, ಅಭಿವೃದ್ಧಿಯಲ್ಲಿ ಶೂನ್ಯ

ಪಟ್ಟಣದ ಗಾಯತ್ರಿ ಪ್ರಸಾದ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಸಿ. ಮುನಿರಾಜು ಮಾತನಾಡಿದರು. -

Profile
Ashok Nayak May 22, 2026 10:29 AM

ಗುಡಿಬಂಡೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಮೂರು ವರ್ಷಗಳಾಗುತ್ತಾ ಬಂದರೂ ಅಭಿವೃದ್ಧಿ ಮಾತ್ರ ಸಂಪೂರ್ಣ ಕುಂಠಿತಗೊಂಡಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸರ್ಕಾರ ಇಡೀ ರಾಜ್ಯವನ್ನು ದಿವಾಳಿ ಮಾಡಿದೆ, ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಸಿ.ಮುನಿರಾಜು ಆರೋಪಿಸಿದರು.

ಪಟ್ಟಣದ ಗಾಯತ್ರಿ ಪ್ರಸಾದ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಜನರ ಹಿತಾಸಕ್ತಿಗಿಂತ ರಾಜಕಾರಣವೇ ಮುಖ್ಯವಾಗಿದೆ.

ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಅನಗತ್ಯವಾಗಿ ಟೀಕಿಸುವುದರಲ್ಲೇ ಈ ಸರ್ಕಾರ ಕಾಲ ಕಳೆಯುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಮಾಡುವಲ್ಲಿ ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್, ಕೇವಲ ಟೀಕೆ ಮಾಡುವುದರಲ್ಲಿ ಮಾತ್ರ ಅಭಿವೃದ್ಧಿ ಸಾಧಿಸಿದೆ. ಬಡವರು, ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಮೋಸ ಮಾಡುತ್ತಿದೆ. ನಿಮ್ಮ ಮನೆಗಳಿಂದ 10 ರೂಪಾಯಿ ಕಸಿದು ಕೊಂಡು ನಿಮಗೆ 2 ರೂಪಾಯಿ ಕೊಡುತ್ತಿದೆ. ಈಗಾಗಲೇ ಜನರು ಕಾಂಗ್ರೇಸ್ ಪಕ್ಷದ ಆಡಳಿತ ವಿರುದ್ದ ಬೇಸತ್ತಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೇಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಇದನ್ನೂ ಓದಿ: Gudibande News: ಸಾಗುವಳಿ ಚೀಟಿಗಾಗಿ ಆಗ್ರಹಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಪ್ರತಿಭಟನೆ

ಇನ್ನೂ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಆರ್ಥಿಕತೆಯ ಉದ್ದೇಶದಿಂದ ಅಗತ್ಯ ಬಿದ್ದರೇ ಚಿನ್ನ ಖರೀದಿ ಮಾಡಿ, ಸುಖಾಸುಮ್ಮನೆ ಚಿನ್ನದ ಮೇಲೆ ಬಂಡವಾಳ ಹಾಕಬೇಡಿ ಎಂದು ಹೇಳಿದ್ದಾರೆ. ಆದರೆ ಅದನ್ನು ತಿರುಚಿ ಹೇಳಿಕೆ ನೀಡುತ್ತಿರುವ ಕಾಂಗ್ರೇಸ್ ಮೋದಿಯವರ ದೂರದೃಷ್ಟಿಯನ್ನು ಅರಿತಿಲ್ಲ. ಇನ್ನೂ ಗುಡಿಬಂಡೆಯಲ್ಲಿ ಮಹಿಳಾ ಮೋರ್ಚಾ ಘಟಕದ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ತಾವೆಲ್ಲರೂ ಬಿಜೆಪಿ ಪಕ್ಷವನ್ನು ಬೆಳೆಸಿ ಕ್ಷೇತ್ರದಲ್ಲಿ ಕಮಲ ಅರಳುವಂತೆ ಮಾಡುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಹಿಳಾ ಮೋರ್ಚಾ ತಾಲೂಕು ಘಟಕದ ಅಧ್ಯಕ್ಷೆ ಲಕ್ಷ್ಮೀ ವೇಣು ಗೋಪಾಲ್, ಪಕ್ಷ ನನ್ನ ಸೇವೆಯನ್ನು ಗುರ್ತಿಸಿ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಆ ಜವಾಬ್ದಾರಿ ಯನ್ನು ನಾನು ಪ್ರಾಮಾಣಿಕತೆಯಿಂದ ನೆರವೇರಿಸುತ್ತೇನೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಸದಸ್ಯರನ್ನು ಸೇರಿಸಿ ಪಕ್ಷವನ್ನು ಬೂತ್ ಮಟ್ಟದಿಂದಲೇ ಬಲವರ್ಧನೆ ಮಾಡಲು ಶ್ರಮಿಸುತ್ತೇನೆ. ನನಗೆ ಈ ದೊಡ್ಡ ಹುದ್ದೆ ನೀಡಿದಂತಹ ಪಕ್ಷದ ಎಲ್ಲಾ ಪದಾಧಿಕಾರಿಗಳಿಗೂ ನಾನು ಋಣಿಯಾಗಿರುತ್ತೇನೆ ಎಂದರು.

ಇದೇ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡೆ ಆಶಾಜಯಪ್ಪ, ಬಿಜೆಪಿ ಗುಡಿಬಂಡೆ ಮಂಡಲ ಅಧ್ಯಕ್ಷ ಗಂಗಿರೆಡ್ಡಿ, ಬಾಗೇಪಲ್ಲಿ ಮಂಡಲ ಅಧ್ಯಕ್ಷ ಪ್ರತಾಪ್ ರವರುಗಳು ಮಾತನಾಡಿದರು. ಕಾರ್ಯಕ್ರಮ ದಲ್ಲಿ ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು.

ಈ ವೇಳೆ ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಜಿ ಎ ಅಮರೇಶ, ಮದನ ಮೋಹನ ರೆಡ್ಡಿ, ಮಹಿಳಾ ಮೋರ್ಚಾ ಕಾರ್ಯದರ್ಶಿ ಅರುಣಾ, ಜ್ಯೋತಿ, ಮಂಜುಳಾ ಸಿಂಗ್, ಮುಖಂಡರಾದ ಪ್ರೆಸ್ ಶಿವಪ್ಪ, ಗಗನ, ವರುಣ್, ಪ್ರಹ್ಲಾದ ರಾವ್, ರವಿಕುಮಾರ್, ದಪ್ಪರ್ತಿ ಹರೀಶ್, ನವೀನ್ ಸೇರಿದಂತೆ ಹಲವರಿದ್ದರು.