ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chikkaballapur Congress: ಇಂದು ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಮೆರವಣಿಗೆ

ಜಿಲ್ಲಾ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾ.14ರಂದು ಶನಿವಾರ ಬೆಳಿಗ್ಗೆ10 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಕಚೇರಿ ಯಿಂದ ಶಿಡ್ಲಘಟ್ಟ ವೃತ್ತದ ವರೆಗೆ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸ ಲಾಗುವುದು

ಇಂದು ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಮೆರವಣಿಗೆ

-

Ashok Nayak
Ashok Nayak Mar 13, 2026 10:32 PM

ಚಿಕ್ಕಬಳ್ಳಾಪುರ: ಜಿಲ್ಲಾ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾ.14 ರಂದು ಶನಿವಾರ ಬೆಳಿಗ್ಗೆ10 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಕಚೇರಿ ಯಿಂದ ಶಿಡ್ಲಘಟ್ಟ ವೃತ್ತದ ವರೆಗೆ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಾ.14ರ ಶನಿವಾರ ಕೇಂದ್ರ ಸರಕಾರದ ವೈಫಲ್ಯಗಳಾದ ಮೇಕ್ ಇನ್ ಇಂಡಿಯಾ ವಿಫಲ, ಒಂದು ದೇಶ ಒಂದು ತೆರೆಗೆ ವಿಫಲ, ಭೇಟಿ ಬಚಾವೋ ಭೇಟಿ, ಪಡಾವೋ ವಿಫಲ, ಕಪ್ಪು ಹಣ ವಾಪಸ್ ವಿಫಲ ಬೆಲೆ ಏರಿಕೆ ಕಡಿಮೆ ಮಾಡುವಲ್ಲಿ ವಿಫಲ, 100 ಸ್ಮಾರ್ಟ್ ಸಿಟಿ ರಚನೆ ಮಾಡುವಲ್ಲಿ ವಿಫಲ, ಭಾರತವನ್ನು ವಿಶ್ವಗುರುವನ್ನಾಗಿ ಮಾಡುವಲ್ಲಿ ವಿಫಲ, ಪ್ರಶ್ನೆ ಪತ್ರಿಕೆಗಳ ಸೋರಿಕೆಯನ್ನು ತಡೆಗಟ್ಟುವಲ್ಲಿ ವಿಫಲದ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: Chikkaballapur News: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ: ಜಿಲ್ಲಾಧಿಕಾರಿ ಜಿ.ಪ್ರಭು ಅಭಯ

ಮುಖ್ಯವಾಗಿ ಜನಸಾಮಾನ್ಯರಿಗೆ ಬೇಕಾಗಿರುವಂತಹ ಸಿಲಿಂಡರ್ ಬೆಲೆ ಏರಿಕೆ ಮತ್ತು ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಹಾಗಾಗಿ ಬಿಜೆಪಿ ವಿರುದ್ಧ ಪ್ರತಿಭಟನೆ ಹಮ್ಮಿ ಕೊಂಡಿದ್ದು ಈ ಪ್ರತಿಭಟನೆಯಲ್ಲಿ ಹಾಲಿ ಮತ್ತು ಮಾಜಿ ಶಾಸಕರುಗಳು ಕಾಂಗ್ರೆಸ್ ಮುಖಂಡರು ಜಿಲ್ಲಾಧ್ಯಕ್ಷರು,ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾಂಗ್ರೆಸ್‌ನ ಎಲ್ಲಾ  ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗಿಯಾಗುವರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾರ್ಯಕರ್ತರು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಾಗರೀಕರು ಬಂಧುಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಎಂದು ಮನವಿ ಮಾಡಿದೆ.