ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

MP Dr.K.Sudhakar: 2500 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 44ರ ದಶಪಥ ರಸ್ತೆ ನಿರ್ಮಾಣ: ಸಂಸದ ಡಾ. ಕೆ.ಸುಧಾಕರ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 44 ನ್ನು ದಶಪಥ ರಸ್ತೆ ಯನ್ನಾಗಿ ಅಭಿವೃದ್ಧಿ ಪಡಿಸುವ ಸಂಬಂಧ ಪ್ರಕ್ರಿಯೆ ಆರಂಭವಾಗಿದೆ. ಈಗಿರುವ ರಸ್ತೆಯ ಜೊತೆಗೆ 6 ಪಥದ ರಸ್ತೆಗಳನ್ನು ನಿರ್ಮಿಸಿ ದಶಪಥ ರಸ್ತೆ ಮಾಡಲಾಗುವುದು. ಈ ಸಂಬಂಧ ಭೂ ಸ್ವಾಧೀನ ಮಾಡುವ ಪ್ರಕ್ರಿಯೆಯು ಪೂರ್ಣಗೊಂಡಿದೆ. ಮುಂದಿನ ಮೂರು ತಿಂಗಳಲ್ಲಿ ಕಾಮಗಾರಿಗೆ ಚಾಲನೆ ಸಿಗಲಿದೆ

2500 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 44ರ ದಶಪಥ ರಸ್ತೆ ನಿರ್ಮಾಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಿಂದ ಬಾಗೇಪಲ್ಲಿ ತಾಲ್ಲೂಕಿನ ಆಂಧ್ರ ಪ್ರದೇಶದ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ 44 ನ್ನು ದಶಪಥ ರಸ್ತೆಯನ್ನಾಗಿ 2500 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು -

Ashok Nayak
Ashok Nayak Mar 6, 2026 12:12 AM

ಚಿಕ್ಕಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಿಂದ ಬಾಗೇಪಲ್ಲಿ ತಾಲ್ಲೂಕಿನ ಆಂಧ್ರ ಪ್ರದೇಶದ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ 44ನ್ನು ದಶಪಥ ರಸ್ತೆಯನ್ನಾಗಿ 2500 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್(MP Dr. K. Sudhakar) ತಿಳಿಸಿದರು.

ಜಿಲ್ಲಾ ಪಂಚಾಯತ್‌ನ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗುರುವಾರ ನಡೆದ “ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ” (ದಿಶಾ) ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 44 ನ್ನು ದಶಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವ ಸಂಬಂಧ ಪ್ರಕ್ರಿಯೆ ಆರಂಭವಾಗಿದೆ. ಈಗಿರುವ ರಸ್ತೆಯ ಜೊತೆಗೆ 6 ಪಥದ ರಸ್ತೆಗಳನ್ನು ನಿರ್ಮಿಸಿ ದಶಪಥ ರಸ್ತೆ ಮಾಡಲಾಗುವುದು. ಈ ಸಂಬಂಧ ಭೂ ಸ್ವಾಧೀನ ಮಾಡುವ ಪ್ರಕ್ರಿಯೆಯು ಪೂರ್ಣಗೊಂಡಿದೆ. ಮುಂದಿನ ಮೂರು ತಿಂಗಳಲ್ಲಿ ಕಾಮಗಾರಿಗೆ ಚಾಲನೆ ಸಿಗಲಿದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: MP Dr. K. Sudhakar: ಕಾಂಗ್ರೆಸ್‌ನಿಂದ ನರೇಗಾ ಬಚಾವೋ ಅಲ್ಲ ಕರ್ನಾಟಕ ಬಚಾವೋ" ಆಂದೋಲನದ ಅಗತ್ಯ ಇದೆ : ಸಂಸದ ಡಾ.ಕೆ.ಸುಧಾಕರ್

ಕೃಷಿ ಬೆಳೆಗಳಿಗೆ ಕೇಂದ್ರ ಸರ್ಕಾರ ದುಪ್ಪಟ್ಟು ಬೆಂಬಲ ಬೆಲೆಯನ್ನು ನಿಗದಿಪಡಿಸಿದೆ. ಜಿಲ್ಲೆಯಲ್ಲಿ ರಾಗಿ ಬೆಳೆಯುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಪ್ರತಿ ಕ್ವಿಂಟಾಲ್ ರಾಗಿಗೆ ರೂ.4886  ದರ ನಿಗದಿಪಡಿಸಿದೆ. ಈ ದರವು ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿದ್ದು, ರಾಗಿ ಖರೀದಿ ಪ್ರಕ್ರಿಯೆಯು ಜಿಲ್ಲೆಯಲ್ಲಿ ಚಾಲನೆಯಲ್ಲಿದೆ. ಜಿಲ್ಲೆಯ ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ರೈತರಿಗೆ ಹಗಲು ವೇಳೆಯಲ್ಲೆ ವಿದ್ಯುತ್

ಕುಸುಮ್ ಸಿ ಯೋಜನೆಯಡಿ ಜಿಲ್ಲೆಯಲ್ಲಿ 300 ಮೆ.ವ್ಯಾಟ್ ಸೌರ ವಿದ್ಯುತ್ ಅನ್ನು ಉತ್ಪಾದನೆ ಮಾಡಿ ಸ್ಥಳೀಯ ಅಭಿವೃದ್ಧಿ ಕಾರ್ಯಗಳಿಗೆ ಅತಿ ಕಡಿಮೆ ಬೆಲೆಗೆ ನೀಡಲಾಗು ತ್ತದೆ, ಈ ಯೋಜನೆಯಡಿ ರೈತರಿಗೆ ಉಚಿತವಾಗಿ ಹಗಲು ವೇಳೆಯಲ್ಲೆ ಸಾಕಷ್ಟು ತೃಪ್ತಿ ದಾಯಕವಾಗಿ ವಿದ್ಯುತ್ ನೀಡುವ ಯೋಜನೆ ಇದಾಗಿದೆ, ಇಂತಹ ಯೋಜನೆಗಳು 2047ಕ್ಕೆ ಭಾರತವನ್ನು ವಿಶ್ವದ ಸಂಪತ್ ಭರಿತ ದೇಶವನ್ನಾಗಿ ಹೊರಹೊಮ್ಮಿಸಲು ಕಾರಣವಾಗಲಿವೆ ಎಂದು ತಿಳಿಸಿದರು.

cbpm6a

ಆದಿ ಆದರ್ಶ ಗ್ರಾಮ ಯೋಜನೆಯಡಿ ಈ ಹಿಂದೆ 18 ಗ್ರಾಮಗಳನ್ನು ತೆಗೆದುಕೊಳ್ಳಲಾಗಿತ್ತು. ಈ ಸಾಲಿನಲ್ಲಿ 30 ಗ್ರಾಮಗಳನ್ನು ತೆಗೆದುಕೊಂಡು ಆ ಗ್ರಾಮಗಳ ಸಂಪೂರ್ಣ ಅಭಿವೃದ್ಧಿ ಗಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಈ ಯೋಜನೆಗೆ ಅನುದಾನದ ಮಿತಿ ಇರುವುದಿಲ್ಲ. ಸದರಿ ಗ್ರಾಮದ ಗ್ರಾಮ ಸಭೆಯ ಬೇಡಿಕೆಯನ್ವಯ ಗ್ರಾಮದ ಸಂಪೂರ್ಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

2 ತಿಂಗಳಲ್ಲಿ ಜಿಲ್ಲಾ ಆಯುಷ್ ಆಸ್ಪತ್ರೆ

ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಆಯುಷ್ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯು ಅಂತಿಮ ಹಂತದಲ್ಲಿದ್ದು, ಮುಂದಿನ 2 ತಿಂಗಳಲ್ಲಿ ಲೋಕಾ ರ್ಪಣೆಯಾಗಲಿದೆ. ಅಲ್ಲದೆ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ 65 ಲಕ್ಷ ವೆಚ್ಚ ದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣವಾಗಲಿದೆ ಎಂದರು.

ಬೇಸಿಗೆಗೆ ಸಿದ್ಧತೆ ಮಾಡಿಕೊಳ್ಳಿ

ಈ ಬಾರಿಯ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಸಲು ಕೂಡಲೇ ಸಿದ್ಧತೆ ಮಾಡಿಕೊಳ್ಳಬೇಕು. 2019ರಿಂದ 2025 ರವರೆಗೆ 350 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬಂದಿದೆ. ಈ ಪೈಕಿ 150 ರಿಂದ 170 ಗ್ರಾಮಗಳಲ್ಲಿ ತೀವ್ರ ಕೊರತೆ ಎಂದು ಗುರುತಿಸಲಾಗಿದೆ. 30 ರಿಂದ 40 ಗ್ರಾಮಗಳಿಗೆ ಟ್ಯಾಂಕರ್ ಅಥವಾ ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು ಈ ಬಾರಿಯ ಬೇಸಿಗೆಯಲ್ಲಿ ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬರದಂತೆ ಕ್ರಮ ವಹಿಸಬೇಕಿದೆ. ನೀರು ಕೊರತೆಯಾದ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಸೂಚನೆ ನೀಡಿದರು.

cbpm6t

ಬೇಸಿಗೆ ಈಗಾಗಲೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ತೆಗೆದುಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.

ಜಲಜೀವನ್ ಮಿಷನ್ ಯೋಜನೆಯಡಿ 800ಕ್ಕೂ ಅಧಿಕ ಗ್ರಾಮಗಳಲ್ಲಿ ಕಾಮಗಾರಿ ಆರಂಭವಾಗಿದೆ. 25 ಗ್ರಾಮಗಳಲ್ಲಿ ಪರಿಶೀಲನೆ ನಡೆದಿದ್ದು, 22 ಕಡೆ ಕಾಮಗಾರಿ ಪೂರ್ಣ ಗೊಂಡಿದೆ. ಒಟ್ಟಾರೆಯಾಗಿ 983 ಓವರ್‌ಹೆಡ್ ಟ್ಯಾಂಕ್‌ಗಳನ್ನು ನಿರ್ಮಿಸಲು ಉದ್ದೇಶಿ ಸಿದ್ದು, 310 ಕಡೆ ಕಾಮಗಾರಿ ಪ್ರಗತಿಯಲ್ಲಿದೆ. 22 ಕಡೆ ಇನ್ನೂ ಆರಂಭವಾಗಬೇಕಿದೆ. ಕೆಲವೆಡೆ ಅನುದಾನದ ಸಮಸ್ಯೆಯಿಂದ ಟೆಂಡರ್ ವಿಳಂಬವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಎಲ್ಲ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಹಾಗೂ ಕಾಮಗಾರಿ ವಿಳಂಬವಾದರೆ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಬೇಕು. ಎಲ್ಲ ಕಾಮಗಾರಿ ಗಳನ್ನು ಕಾಲಮಿತಿಯಲ್ಲಿ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿ ದರು.

ಎಚ್‌ಎನ್ ವ್ಯಾಲಿ ಹಾಗೂ ಕೆಸಿ ವ್ಯಾಲಿಯಿಂದ ಬರುವ ನೀರನ್ನು ಹೆಚ್ಚು ಶುದ್ಧ ಮಾಡಲು 3ನೇ ಹಂತದ ಸಂಸ್ಕರಣೆ ಯೋಜನೆ ಜಾರಿ ಮಾಡಬೇಕು. 2ನೇ ಹಂತದಲ್ಲಿ ಸಂಸ್ಕರಣೆ ಯಾಗುವ ನೀರು ಕುಡಿಯಲು ಯೋಗ್ಯವಲ್ಲ ಎಂದು ವಿಜ್ಞಾನಿಗಳೇ ಹೇಳಿದ್ದಾರೆ. ಯಾವುದೇ ದೇಶದಲ್ಲಿ ಎರಡನೇ ಹಂತದಲ್ಲಿ ಸಂಸ್ಕರಣೆಯಾಗುವ ನೀರುವ ಕುಡಿಯಲು ಅಥವಾ ಕೃಷಿಗೆ ಬಳಸುವುದಿಲ್ಲ ಎಂದು ಮಾಹಿತಿ ನೀಡಿದರು.

ಕೇಂದ್ರ ಪುರಸ್ಕೃತ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡಲು ಜಿಲ್ಲಾಡಳಿತಕ್ಕೆ ತಿಳಿಸಲಾಗಿದೆ. ಗೌರಿಬಿದನೂರು ತಾಲ್ಲೂಕಿನಲ್ಲಿ ಒಂದು ಏಕಲವ್ಯ ಶಾಲೆ ತೆರೆಯಲು ಚಿಂತಿಸಲಾಗಿದೆ. ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆಯಡಿ ಜಿಲ್ಲೆಯ 4886 ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡಲಾಗಿದೆ. 2.36 ಲಕ್ಷ ಕಾರ್ಮಿಕರನ್ನು ಇ-ಶ್ರಮ್ ಯೋಜನೆಯಡಿ ಹಾಗೂ 70 ಸಾವಿರ ಕಾರ್ಮಿಕರನ್ನು ಅಸಂಘಟಿತ ವಲಯದಲ್ಲಿ ನೋಂದಾ ಯಿಸಿ ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಡಾ. ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ದಿಶಾ ಸಮಿತಿಯ ಸದಸ್ಯರು ಹಾಜರಿದ್ದರು.