Chikkaballapur News: ಸಕಾಲಕ್ಕೆ ಬೀಜ ಗೊಬ್ಬರ ವಿತರಣೆಗೆ ಸಿಪಿಐಎಂ ಆಗ್ರಹ
ತಾಲ್ಲೂಕಿನಲ್ಲಿ ಹಿಂದೆ ಗೊಬ್ಬರವನ್ನು ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆಯಲ್ಲಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿದ್ದಾರೆ. ಹೀಗೆ ಅಕ್ರಮ ದಂಧೆಯು ಮತ್ತೆ ಮರುಕಳಿಸದಂತೆ ಮುಂಜಾಗ್ರತೆ ಕ್ರಮ ಅನು ಸರಿಸಬೇಕು. ಬೀಜ ಮತ್ತು ವಿತರಣಾ ಕೇಂದ್ರದಲ್ಲಿ ಬೀಜಗಳು ಸಂಗ್ರಹಣೆಯ ವಿವರಣೆ ಹಾಗೂ ದರಪಟ್ಟಿಯು ಕಡ್ಡಾಯವಾಗಿ ಪ್ರದರ್ಶಿಸಲು ಮೇಲಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾ ಗಬೇಕು

ತಾಲ್ಲೂಕಿನ ಬಹುತೇಕ ಪ್ರದೇಶದಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ರೈತರು ಬಿತ್ತನೆಗೆ ಸಿದ್ಧತೆ ಕೈಗೊಂಡಿದ್ದಾರೆ. ಹೀಗಾಗಿ ಬೀಜ ಮತ್ತು ಗೊಬ್ಬರ ವಿತರಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು' ಎಂದು ಸಿಪಿಐಎಂ ಪಕ್ಷದ ಮುಖಂಡರು ಕೃಷಿ ಇಲಾಖೆ ಅಧಿಕಾರಿ ಮನವಿ ಸಲ್ಲಿಸಿದರು.

ಬಾಗೇಪಲ್ಲಿ: ಮುಂಗಾರು ಹಂಗಾಮು ಆರಂಭಗೊಂಡಿದ್ದು, ತಾಲ್ಲೂಕಿನ ಬಹುತೇಕ ಪ್ರದೇಶದಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ರೈತರು ಬಿತ್ತನೆಗೆ ಸಿದ್ಧತೆ ಕೈಗೊಂಡಿದ್ದಾರೆ. ಹೀಗಾಗಿ ಬೀಜ ಮತ್ತು ಗೊಬ್ಬರ ವಿತರಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಸಿಪಿಐಎಂ ಪಕ್ಷದ ಮುಖಂ ಡರು ಕೃಷಿ ಇಲಾಖೆ ಅಧಿಕಾರಿ ಮನವಿ ಸಲ್ಲಿಸಿದರು. ಡಿ.ಟಿ.ಮುನಿಸ್ವಾಮಿ ಮಾತನಾಡಿ ಒಂದು ವಾರದಿಂದ ಮಳೆ ಸುರಿಯುತ್ತಿದೆ. ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿ ದ್ದಾರೆ. ಭೂಮಿಯನ್ನು ಬಿತ್ತನೆಗೆ ಹದಗೊಳಿಸುತ್ತಿದ್ದಾರೆ. ಗುಣಮಟ್ಟದ ವಿವಿಧ ಬೆಳೆಗಳ ಬೀಜಗಳು ಹಾಗೂ ಡಿಎಪಿ ಗೊಬ್ಬರವನ್ನು ಸಮರ್ಪಕವಾಗಿ ಪೂರೈಕೆಗೆ ಪೂರ್ವ ತಯಾರಿ ಮಾಡಿಕೊಳ್ಳಬೇಕಾಗಿದೆ. ಹಾಗೆಯೇ ಹೆಚ್ಚುವರಿ ಬೀಜ ವಿತರಣಾ ಕೇಂದ್ರ ಸ್ಥಾಪಿಸಿ, ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ: Chikkaballapur News: 15ನೇ ವಾರ್ಷಿಕೋತ್ಸವ: ಶ್ರೀ ವರಸಿದ್ದಿ ವಿನಾಯಕನಿಗೆ ಬೆಳ್ಳಿ ರಥೋತ್ಸವ
ತಾಲ್ಲೂಕಿನಲ್ಲಿ ಹಿಂದೆ ಗೊಬ್ಬರವನ್ನು ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆಯಲ್ಲಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿದ್ದಾರೆ. ಹೀಗೆ ಅಕ್ರಮ ದಂಧೆಯು ಮತ್ತೆ ಮರುಕಳಿಸದಂತೆ ಮುಂಜಾಗ್ರತೆ ಕ್ರಮ ಅನುಸಿರಿಸಬೇಕು. ಬೀಜ ಮತ್ತು ವಿತರಣಾ ಕೇಂದ್ರದಲ್ಲಿ ಬೀಜಗಳು ಸಂಗ್ರಹಣೆಯ ವಿವರಣೆ ಹಾಗೂ ದರಪಟ್ಟಿಯು ಕಡ್ಡಾಯವಾಗಿ ಪ್ರದರ್ಶಿಸಲು ಮೇಲಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾ ಗಬೇಕು. ಅಕ್ರಮವಾಗಿ ಹಾಗೂ ಹೆಚ್ಚಿನ ದರದಲ್ಲಿ ಬೀಜ ಗೊಬ್ಬರ ಮಾರಾಟ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಬೇಕು ಎಂದು ಆಗ್ರಹಿಸಿದ್ದಾರೆ.
ಸಿಪಿಐಎಂ ಪಕ್ಷದ ಮುಖಂಡ ಚನ್ನರಾಯಪ್ಪ ಮಾತನಾಡಿ ಕಳೆದ ವರ್ಷ ಕಳಪೆ ಬಿತ್ತನೆ ಬೀಜ ಕೊಟ್ಟಿರುವುದರಿಂದ ಎಷ್ಟೋ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದೊ ದಗಿತ್ತು. ಸರಿಯಾದ ಸಮಯಕ್ಕೆ ಗೊಬ್ಬರ ಸಿಗದೆ ಬಡ ರೈತರು ಪರದಾಡುವಂತಾಗಿತ್ತು. ಆದ್ದರಿಂದ ಗುಣಮಟ್ಟದ ಬೀಜ ವಿತರಿಸಬೇಕು ಎಂದು ಚನ್ನರಾಯಪ್ಪ ಕೃಷಿ ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ.
ಈ ಸಂಧರ್ಭದಲ್ಲಿ ತಾಲ್ಲೂಕು ಸಿಪಿಐಎಂ ಪಕ್ಷದ ಕಾರ್ಯದರ್ಶಿ ಎಂ.ಎನ್.ರಘುರಾಮ ರೆಡ್ಡಿ, ಬಿಳ್ಳೂರು ನಾಗರಾಜು, ವಾಲ್ಮೀಕಿ ಅಶ್ವತ್ಥಪ್ಪ, ಜಿ.ಕೃಷ್ಣಪ್ಪ, ಹಾಗೂ ಸಿಪಿಐಎಂ ಪಕ್ಷದ ಮುಖಂಡರು ಭಾಗವಹಿಸಿದ್ದರು.