ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಆದಿಚುಂಚನಗಿರಿ ಮಠದ ಬಗ್ಗೆ ಟೀಕೆ ಸಲ್ಲದು; ಮಾಜಿ ಶಾಸಕರ ಹೇಳಿಕೆಗೆ ರಾಜ್ಯ ಒಕ್ಕಲಿಗರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ತಿರುಗೇಟು

ಮಠ ಹಾಗೂ ಪೀಠಾಧಿಪತಿಗಳು ಭಕ್ತರು ಮತ್ತು ಸರ್ಕಾರ ನೀಡಿದ ದೇಣಿಗೆ ಅಥವಾ ಜಮೀನುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪಗಳನ್ನು ಅವರು ತಳ್ಳಿಹಾಕಿದರು. ಮಠದ ವತಿಯಿಂದ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕಾಗಿವೆ. ಹೀಗಾಗಿ ಸಂಸ್ಥೆಯ ವಿರುದ್ಧ ಆಧಾರರಹಿತವಾಗಿ ಮಾತನಾಡುವುದನ್ನು ಖಂಡಿಸುವುದಾಗಿ ತಿಳಿಸಿ ದರು.

ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಘನತೆಗೆ ತಕ್ಕಂತೆ ಮಾತನಾಡಲಿ

-

Profile
Ashok Nayak Sep 3, 2026 10:08 PM

ಚಿಕ್ಕಬಳ್ಳಾಪುರ: ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಗೂ ಪೀಠಾಧಿಪತಿಗಳ ವಿರುದ್ಧ ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮಾಡಿರುವ ಟೀಕೆಗಳನ್ನು ರಾಜ್ಯ ಒಕ್ಕಲಿಗರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಕೋನಪ್ಪರೆಡ್ಡಿ ತೀವ್ರವಾಗಿ ಖಂಡಿಸಿದ್ದಾರೆ.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 1500–2000 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಆದಿಚುಂಚನಗಿರಿ ಮಠವು ಒಕ್ಕಲಿಗ ಸಮುದಾಯ ಸೇರಿದಂತೆ ಸಮಾಜದ ವಿವಿಧ ವರ್ಗಗಳ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ. ಇಂತಹ ಧಾರ್ಮಿಕ ಸಂಸ್ಥೆ ಹಾಗೂ ಪೀಠಾಧಿಪತಿಗಳ ಬಗ್ಗೆ ಮಾಜಿ ಶಾಸಕರು ಟೀಕಿಸುವುದು ಸರಿಯಲ್ಲ ಎಂದು ಹೇಳಿದರು.

ಮಠ ಹಾಗೂ ಪೀಠಾಧಿಪತಿಗಳು ಭಕ್ತರು ಮತ್ತು ಸರ್ಕಾರ ನೀಡಿದ ದೇಣಿಗೆ ಅಥವಾ ಜಮೀನುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪಗಳನ್ನು ಅವರು ತಳ್ಳಿಹಾಕಿದರು. ಮಠದ ವತಿಯಿಂದ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕಾಗಿವೆ. ಹೀಗಾಗಿ ಸಂಸ್ಥೆಯ ವಿರುದ್ಧ ಆಧಾರರಹಿತವಾಗಿ ಮಾತನಾಡುವುದನ್ನು ಖಂಡಿಸುವುದಾಗಿ ತಿಳಿಸಿ ದರು.

ಇದನ್ನೂ ಓದಿ: Chinthamani News: ಮಡಿವಾಳ ಸಮುದಾಯವನ್ನು ಎಸ್‌ಸಿಗೆ ಸೇರಿಸಲು ಒತ್ತಾಯ: ಸೆ.9ರಂದು ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ

ಚಿಂತಾಮಣಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಬಳಸಿರುವ ಪದಪ್ರಯೋಗಗಳು ಖಂಡನೀಯವಾಗಿದ್ದು, ಮಾಜಿ ಶಾಸಕರ ಘನತೆಗೆ ತಕ್ಕಂತೆ ಮಾತನಾಡಬೇಕು ಎಂದು ಕೋನಪ್ಪರೆಡ್ಡಿ ತಾಕೀತು ಮಾಡಿದರು.

ಚಿಂತಾಮಣಿ ತಾಲ್ಲೂಕಿನ ಕೈವಾರ ಹೋಬಳಿಯ ನಲ್ಲಗುಟ್ಟಹಳ್ಳಿ ಗ್ರಾಮದ ಸರ್ವೆ ನಂಬರ್ 42ರ ಬ್ಲಾಕ್ 11ರಲ್ಲಿ 1.02 ಎಕರೆ ಜಮೀನು ಮಂಜೂರು ಮಾಡುವ ವಿಚಾರದಲ್ಲಿ ಕೆಲವು ಅಂಶಗಳನ್ನು ಮುಂದಿಟ್ಟು ಆಕ್ಷೇಪ ವ್ಯಕ್ತಪಡಿಸಲಾಗುತ್ತಿದೆ. ಈ ಸಂಬಂಧದ ದಾಖಲೆಗಳು ಹಾಗೂ ಸರ್ಕಾರದ ನಿಯಮಾವಳಿಗಳ ಕುರಿತು ಸಮಗ್ರವಾಗಿ ಪರಿಶೀಲಿಸಬೇಕಿದೆ ಎಂದು ಹೇಳಿದರು.

ತಮ್ಮ ವಿರುದ್ಧ ಸಂಘದ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಮಾಡಿರುವ ಆರೋಪ ಗಳನ್ನೂ ಕೋನಪ್ಪರೆಡ್ಡಿ ತಳ್ಳಿಹಾಕಿದರು. ಸಂಘವು ನಿಯಮಾನುಸಾರ ಕಾರ್ಯನಿರ್ವಹಿಸುತ್ತಿದ್ದು, ದಂತ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಿಗೆ ಏಳನೇ ವೇತನ ಆಯೋಗದಂತೆ ವೇತನ ಪಾವತಿಸಲು ಸಂಘದ ನಿಯಮಾವಳಿಯಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ತಾವು 68ನೇ ವಯಸ್ಸಿನಲ್ಲಿ ರಾಜಕೀಯ ಹಂಬಲ ಹೊಂದಿಲ್ಲ. ಮಠ ಹಾಗೂ ಸ್ವಾಮೀಜಿಗಳ ಕುರಿತು ಮಾತನಾಡಿದ ಹಿನ್ನೆಲೆಯಲ್ಲಿ ಚಿಂತಾಮಣಿಗೆ ಬಂದು ತಮ್ಮ ನಿಲುವು ಸ್ಪಷ್ಟಪಡಿಸಬೇಕಾಯಿತು. ಜೆ.ಕೆ.ಕೃಷ್ಣಾರೆಡ್ಡಿ ಅವರಿಗೆ ಜೆಡಿಎಸ್ ಟಿಕೆಟ್ ದೊರಕಿಸುವಲ್ಲಿ ತಾವು ಸಹಕರಿಸಿದ್ದರೂ, ಅವರು ತಮ್ಮ ವಿರುದ್ಧ ಟೀಕೆ ಮಾಡಿರುವುದು ಬೇಸರ ತಂದಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೋನಪ್ಪರೆಡ್ಡಿ ಬೆಂಬಲಿಗ ಮುಖಂಡರು ಉಪಸ್ಥಿತರಿದ್ದರು.