ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಮೀಕ್ಷಾ ಕರ್ತವ್ಯ ನಿರ್ವಹಿಸಿದ ಶಿಕ್ಷಕರಿಗೆ ಗಳಿಕೆ ರಜೆ ನಮೂದಿಸಲು ವಿಳಂಬ: ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಶಿಕ್ಷಕರ ಅಸಮಾಧಾನ

ಜಿಲ್ಲಾಡಳಿತ ಹಾಗೂ ಚುನಾವಣಾ ಆಯೋಗದ ನಿರ್ದೇಶನದಂತೆ ವೈಯಕ್ತಿಕ ಸಮಸ್ಯೆಗಳ ನಡುವೆಯೂ ಶಿಕ್ಷಕರು ಕರ್ತವ್ಯವನ್ನು ತಪ್ಪದೆ ನಿರ್ವಹಿಸಿದ್ದಾರೆ. ಆದರೆ, ಈ ಸೇವೆಗೆ ಪ್ರತಿಯಾಗಿ ದೊರೆಯಬೇಕಾದ ಗಳಿಕೆ ರಜೆಯನ್ನು ಸೇವಾ ಪುಸ್ತಕದಲ್ಲಿ ನಮೂದಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಶಿಕ್ಷಕರ ಅಸಮಾಧಾನ

-

Profile
Ashok Nayak Aug 21, 2026 1:43 PM

ಚಿಕ್ಕಬಳ್ಳಾಪುರ: ಜ್ಯೋತಿ ಸಂಜೀವಿನಿ ಸೇರಿದಂತೆ ವಿವಿಧ ಸರ್ಕಾರಿ ಕರ್ತವ್ಯಗಳು ಹಾಗೂ ಗಣತಿ, ಸಮೀಕ್ಷೆಗಳಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಿರುವ ಶಿಕ್ಷಕರಿಗೆ ಗಳಿಕೆ ರಜೆಯನ್ನು ಸೇವಾ ಪುಸ್ತಕದಲ್ಲಿ ನಮೂದಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವಿಳಂಬ ಮಾಡುತ್ತಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿಕ್ಕಬಳ್ಳಾಪುರ ತಾಲೂಕು ಘಟಕ ಆರೋಪಿಸಿದೆ.

ಕಳೆದ ಮೂರು ವರ್ಷಗಳಿಂದ ವಿವಿಧ ಸಮೀಕ್ಷೆ ಹಾಗೂ ಗಣತಿ ಕಾರ್ಯಗಳಲ್ಲಿ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ಚುನಾವಣಾ ಆಯೋಗದ ನಿರ್ದೇಶನದಂತೆ ವೈಯಕ್ತಿಕ ಸಮಸ್ಯೆಗಳ ನಡುವೆಯೂ ಶಿಕ್ಷಕರು ಕರ್ತವ್ಯವನ್ನು ತಪ್ಪದೆ ನಿರ್ವಹಿಸಿದ್ದಾರೆ. ಆದರೆ, ಈ ಸೇವೆಗೆ ಪ್ರತಿಯಾಗಿ ದೊರೆಯಬೇಕಾದ ಗಳಿಕೆ ರಜೆಯನ್ನು ಸೇವಾ ಪುಸ್ತಕದಲ್ಲಿ ನಮೂದಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Chikkaballapur News: ಬರದ ಹೊಡೆತಕ್ಕೆ ರೈತ ಸಂಘ ಆಕ್ರೋಶ; ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಎಕೆಆರ್‌ಎಸ್ ಆಗ್ರಹ

ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ಈಗಾಗಲೇ ಗಳಿಕೆ ರಜೆಯನ್ನು ಸೇವಾ ಪುಸ್ತಕದಲ್ಲಿ ನಮೂದಿಸ ಲಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಶಿಕ್ಷಕರು ವಿವಿಧ ಸಮೀಕ್ಷೆಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದರೂ ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಇದಲ್ಲದೆ, ಈ ಸಾಲಿನ ಗುರುಸ್ಪಂದನ ಕಾರ್ಯಕ್ರಮವನ್ನೂ ಆಯೋಜಿಸಿಲ್ಲ ಎಂದು ಸಂಘ ದೂರಿದೆ. ಶಿಕ್ಷಕರ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಜಿಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಘದ ತಾಲೂಕು ಅಧ್ಯಕ್ಷ ಕೆ.ಜಿ. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ.