ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

CITU: ಖಾಯಂ ನೌಕರರನ್ನಾಗಿ ಪರಿಗಣಿಸಲು ಆಗ್ರಹ; ನ.4ರಂದು ಸಂಸದರ ಮನೆ ಮುಂದೆ ಪ್ರತಿಭಟನೆ, ಡಿಸೆಂಬರ್‌ನಲ್ಲಿ ದೆಹಲಿ ಚಲೋ

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸಿಐಟಿಯು ವತಿಯಿಂದ ಭಾನುವಾರ ನಡೆದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ 6ನೇ ಜಿಲ್ಲಾ ಸಮ್ಮೇಳನದಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸಿದ್ದಗಂಗಪ್ಪ, ಅಂಗನವಾಡಿ ನೌಕರರ ಸಂಘ ದೇಶದ ಪ್ರಬಲ ಸಂಘಟನೆಗಳಲ್ಲಿ ಒಂದಾಗಿದೆ. ಸರ್ಕಾರಗಳು ನೌಕರರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿದ್ದು, ಅಂಗನವಾಡಿಗಳ ಖಾಸಗೀಕರಣ ನಿಲ್ಲಿಸಬೇಕು

ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ 41 ಸಾವಿರ ರೂ. ವೇತನ ನೀಡಿ

-

Profile
Ashok Nayak Oct 25, 2026 8:13 PM

ಚಿಕ್ಕಬಳ್ಳಾಪುರ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಕನಿಷ್ಠ ವೇತನ, ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತಾ ಸೌಲಭ್ಯ ಗಳನ್ನು ಕಲ್ಪಿಸಬೇಕು. ಕಾರ್ಯಕರ್ತೆಯರಿಗೆ ಕನಿಷ್ಠ 41 ಸಾವಿರ ರೂ., ಸಹಾಯಕಿಯರಿಗೆ 35 ಸಾವಿರ ರೂ. ಮಾಸಿಕ ವೇತನ ಹಾಗೂ ಕನಿಷ್ಠ 18 ಸಾವಿರ ರೂ. ಪಿಂಚಣಿ ನೀಡಬೇಕು ಎಂದು ಸಿಐಟಿಯು(CITU) ಮುಖಂಡರು ಆಗ್ರಹಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸಿಐಟಿಯು ವತಿಯಿಂದ ಭಾನುವಾರ ನಡೆದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ 6ನೇ ಜಿಲ್ಲಾ ಸಮ್ಮೇಳನದಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸಿದ್ದಗಂಗಪ್ಪ, ಅಂಗನವಾಡಿ ನೌಕರರ ಸಂಘ ದೇಶದ ಪ್ರಬಲ ಸಂಘಟನೆಗಳಲ್ಲಿ ಒಂದಾಗಿದೆ. ಸರ್ಕಾರಗಳು ನೌಕರರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿದ್ದು, ಅಂಗನವಾಡಿಗಳ ಖಾಸಗೀಕರಣ ನಿಲ್ಲಿಸಬೇಕು. ಇಎಸ್‌ಐ, ಪಿಂಚಣಿ ಸೇರಿದಂತೆ ಅಗತ್ಯ ಸೌಲಭ್ಯ ಗಳನ್ನು ಕಲ್ಪಿಸಬೇಕು. ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: CITU: ಸಾವಿರಾರು ನೌಕರರ ಪ್ರತಿಭಟನೆ; ಸಮಾನ ವೇತನ, ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಮನವಿ

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದಾ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳು ಐಸಿಡಿಎಸ್ ಯೋಜನೆ(ICDC Scheme)ಗೆ ಅನುದಾನ ಕಡಿತಗೊಳಿಸುವ ಮೂಲಕ ಖಾಸಗೀಕರಣಕ್ಕೆ ಮುಂದಾಗಿವೆ ಎಂದು ಆರೋಪಿಸಿದರು. ಕನಿಷ್ಠ ವೇತನ ಜಾರಿ(Implementation of Minimum Wage)ಗೊಳಿಸುವಂತೆ ಒತ್ತಾಯಿಸಿ ನವೆಂಬರ್ 4ರಂದು ರಾಜ್ಯದಾದ್ಯಂತ ಸಂಸದರ ಮನೆಗಳ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಡಿಸೆಂಬರ್ 1ರಿಂದ 3ರವರೆಗೆ ದೆಹಲಿ ಚಲೋ ಹಮ್ಮಿಕೊಳ್ಳಲಾಗುವುದು ಎಂದರು.

ಸರ್ಕಾರ ಘೋಷಿಸಿದ ಗೌರವಧನಕ್ಕಿಂತ ಕಡಿಮೆ ಮೊತ್ತ ನೀಡಲಾಗುತ್ತಿದೆ. ಮಕ್ಕಳಿಗೆ ಪೂರ್ವಶಿಕ್ಷಣ, ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ, ಗರ್ಭಿಣಿ ಮತ್ತು ಬಾಣಂತಿಯರ ಆರೈಕೆ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರೂ ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ ಹಾಗೂ ಸಾಮಾಜಿಕ ಭದ್ರತೆ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಉಪಾಧ್ಯಕ್ಷೆ ಹಾಗೂ ಜಿಲ್ಲಾಧ್ಯಕ್ಷೆ ಲಕ್ಷ್ಮಿದೇವಮ್ಮ ಮಾತನಾಡಿ, ಕೋವಿಡ್(Covid) ಸಂದರ್ಭ ದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿದರೂ ಅಂಗನವಾಡಿ ನೌಕರರನ್ನು ಖಾಯಂ ನೌಕರ ರನ್ನಾಗಿ ಪರಿಗಣಿಸಿಲ್ಲ. ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಸರ್ಕಾರಗಳು ನೌಕರರ ಬದುಕಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರತ್ನಮ್ಮ, ಖಜಾಂಚಿ ವೆಂಕಟಲಕ್ಷ್ಮೀ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ಪದಾಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿ ದ್ದರು.