ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Nirmala Sitharaman: ವಿಕಸಿತ ಭಾರತ ಸಂಕಲ್ಪ: ನಿರ್ಮಲಾ ಸೀತಾರಾಮನ್

ಡಿಜಿಟಲ್ ಪಾವತಿ ವ್ಯವಸ್ಥೆ(Digital Payment System), ದೇಶಾದ್ಯಂತ ಸಾರ್ವಜನಿಕ ಮೂಲ ಸೌಕರ್ಯ ಕ್ಷೇತ್ರದಲ್ಲಿ ಮಹತ್ವದ ಅಭಿವೃದ್ಧಿ ಹಾಗೂ ವಾಯುಕ್ಷೇತ್ರದ ಸಂಪರ್ಕದಲ್ಲಿನ ಕ್ರಾಂತಿ- ಇವು ನರೇಂದ್ರ ಮೋದಿಜೀ(Narendra Modi) ಸರಕಾರದ ಪ್ರಮುಖ ಕ್ರಾಂತಿಕಾರಿ ಸಾಧನೆಗಳು ಎಂದು ವಿಶ್ಲೇಷಿಸಿದರು. ಅಮೆರಿಕವು ಬಡ್ಡಿ ದರ ಕಡಿಮೆ ಮಾಡುವುದು, ಅಮೆರಿಕದ ಹಣಕಾಸು ಕ್ಷೇತ್ರದ ಕ್ರಮಗಳು ಕೂಡ ರೂಪಾಯಿಯ ವಿನಿಮಯ ದರ ಏರುಪೇರಿಗೆ ಕಾರಣವಾಗಿದೆ.

ವಿಕಸಿತ ಭಾರತ ಸಂಕಲ್ಪ: ನಿರ್ಮಲಾ ಸೀತಾರಾಮನ್

-

Profile
Ashok Nayak Jun 14, 2026 11:31 PM

ಚಿಕ್ಕಬಳ್ಳಾಪುರ: ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್(Sab Ka Saath, Sab ka Vikas, Sab ka Prayas) ಜೊತೆಗೆ 2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸಲು ದೇಶ ಸಜ್ಜಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ತಿಳಿಸಿದ್ದಾರೆ.

ದೇವನಹಳ್ಳಿ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಡಿಜಿಟಲ್ ಪಾವತಿ ವ್ಯವಸ್ಥೆ(Digital Payment System), ದೇಶಾದ್ಯಂತ ಸಾರ್ವಜನಿಕ ಮೂಲ ಸೌಕರ್ಯ ಕ್ಷೇತ್ರದಲ್ಲಿ ಮಹತ್ವದ ಅಭಿವೃದ್ಧಿ ಹಾಗೂ ವಾಯುಕ್ಷೇತ್ರದ ಸಂಪರ್ಕದಲ್ಲಿನ ಕ್ರಾಂತಿ- ಇವು ನರೇಂದ್ರ ಮೋದಿಜೀ(Narendra Modi) ಸರಕಾರದ ಪ್ರಮುಖ ಕ್ರಾಂತಿಕಾರಿ ಸಾಧನೆಗಳು ಎಂದು ವಿಶ್ಲೇಷಿಸಿದರು. ಅಮೆರಿಕವು ಬಡ್ಡಿ ದರ ಕಡಿಮೆ ಮಾಡುವುದು, ಅಮೆರಿಕದ ಹಣಕಾಸು ಕ್ಷೇತ್ರದ ಕ್ರಮಗಳು ಕೂಡ ರೂಪಾಯಿಯ ವಿನಿಮಯ ದರ ಏರುಪೇರಿಗೆ ಕಾರಣವಾಗಿದೆ. ಜಪಾನ್ ಯೆನ್ ಕೂಡ ಡಾಲರ್ ಎದುರು ಮೌಲ್ಯ ಕಳೆದುಕೊಂಡಿದೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು.

ಇದನ್ನೂ ಓದಿ: Nirmala sitharaman: ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಹೆಚ್ಚು ಅನುದಾನ ಚಿಂತನೆ ಸರಿಯಲ್ಲ: ನಿರ್ಮಲಾ ಸೀತಾರಾಮನ್

ನಾವು ಕಚ್ಚಾ ತೈಲ, ಗ್ಯಾನ್ ಅನ್ನು ಹೊರಗಿನಿಂದ ತರಿಸಿಕೊಳ್ಳಬೇಕಿದೆ. ಈ ವಿಚಾರದಲ್ಲಿ ನಾವು ಸ್ವಾವಲಂಬಿಗಳಲ್ಲ. ಇದಕ್ಕೆ ಪಾವತಿಯನ್ನು ಡಾಲರ್‍ನಲ್ಲೇ ಮಾಡಬೇಕಿದೆ. ಎರಡನೇಯದಾಗಿ ಗರಿಷ್ಠ ಪ್ರಮಾಣದ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುತ್ತೇವೆ. ರಸಗೊಬ್ಬರದ ಆಮದು ವೆಚ್ಚ ಹೆಚ್ಚಾಗುತ್ತಿದೆ. ಕೋವಿಡ್ ಅವಧಿಯಲ್ಲಿ ನಾವು ರಸಗೊಬ್ಬರದ ಬ್ಯಾಗ್‍ಗೆ ಸುಮಾರು 300 ರೂ. ದರ ನಿಗದಿಪಡಿಸಿದ್ದೇವೆ. ಅದೇ ಬ್ಯಾಗ್ ಆಮದು ದರ 3 ಸಾವಿರಕ್ಕೆ ಏರಿದೆ. ಇದರಿಂದ 2700 ರೂ. ಸಬ್ಸಿಡಿಯನ್ನು ಕೇಂದ್ರವು ನೀಡಬೇಕಿದೆ ಎಂದು ವಿವರಿಸಿದರು.

ಇದಲ್ಲದೇ, ಚಿನ್ನದ ಆಮದು(Import Gold) ಮಾಡಿಕೊಂಡು ಡಾಲರ್‍ನಲ್ಲಿ ಪಾವತಿ ನಡೆಯುತ್ತಿದೆ. ಚಿನ್ನದ ಪ್ರತಿ ಔನ್ಸ್ ದರ ರಾಕೆಟ್‍ನಂತೆ ತೀವ್ರವಾಗಿ ಏರುತ್ತಿದೆ. ಇದೇ ಕಾರಣಕ್ಕೆ ಪ್ರಧಾನಿಯವರು ಕಾರ್ ಪೂಲಿಂಗ್‍ ನಂಥ ಕ್ರಮಕ್ಕೆ ಮುಂದಾಗಲು ಮನವಿ ಮಾಡಿದ್ದಾಗಿ ವಿವರ ನೀಡಿದರು.

IMG-20260614-WA0370 ok

ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನಲ್ಲಿ ಸಂಗ್ರಹವಾದ ತೆರಿಗೆಯನ್ನೆಲ್ಲ ಬೆಂಗಳೂರಿಗೇ ಬಳಸ ಬೇಕೆಂದು ಭಾವಿಸಿದರೆ, ಯಾದಗಿರಿ, ಕಲಬುರ್ಗಿ ಅಭಿವೃದ್ಧಿಗೆ ಕರ್ನಾಟಕ ಸರಕಾರ ಎಲ್ಲಿಂದ ಅನುದಾನ ಕೊಡಬೇಕು? ಎಂದು ಪ್ರಶ್ನಿಸಿದ ಅವರು, ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ ಎಂದು ಹೇಳಿದರು. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ. ಕರ್ನಾಟಕದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕರು ಇದೆಲ್ಲವನ್ನೂ ತಿಳಿದಿದ್ದಾರೆ. ಆದರೂ, ಅವರು ಸದ್ದುಗದ್ದಲ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿ ದರು.

ಮನೆಗಳ ನಿರ್ಮಾಣ, ಶೌಚಾಲಯ ನಿರ್ಮಾಣ, ಮನೆಮನೆಗೆ ನಳ್ಳಿ ನೀರು ಮೊದಲಾದ ಯೋಜನೆ ಗಳ ಮೂಲಕ ಜನಸಾಮಾನ್ಯರಿಗೆ ಕೇಂದ್ರವು ನೆರವಾಗುತ್ತಿದೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು. 

ಅಣ್ಣಾಮಲೈ ಅವರು ಪಕ್ಷ ತೊರೆದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಕೇಡರ್ ಆಧರಿತ ಪಕ್ಷ. ಜನಸಂಘದ ಸ್ಥಾಪಕರಾದ ಬಾಲರಾಜ ಮಧೋಕ್ ಅವರು ಕೆಲಸಮಯದ ಬಳಿಕ ಪಕ್ಷ ತೊರೆದಿದ್ದರು. ಕಲ್ಯಾಣ್ ಸಿಂಗ್(Kalyan Singh) ಅವರೂ ಪಕ್ಷ ತೊರೆದು ಕೆಲಸಮಯದ ಬಳಿಕ ಪಕ್ಷಕ್ಕೆ ಮರಳಿದ್ದಾರೆ. ಉಮಾಭಾರತಿ(Uma Bharti)ಯವರು, ಯಡಿಯೂರಪ್ಪ(B S Yediyurappa) ನವರು ಒಂದು ಸಂದರ್ಭದಲ್ಲಿ ಪಕ್ಷ ತೊರೆದಿದ್ದರು. ಆದರೆ, ಪಕ್ಷ ಮುಂದು ವರೆಯಿತು. ಯಡಿಯೂರಪ್ಪನವರು ಪಕ್ಷಕ್ಕೆ ಮರಳಿದಾಗ ನಾವು ಸಂತಸ ಪಟ್ಟೆವು ಎಂದು ವಿಶ್ಲೇಷಿಸಿದರು.

ಮೋದಿಜೀ ಅವರ ನೇತೃತ್ವದ 12 ಪೂರ್ಣ ವರ್ಷಗಳ ಕಾರ್ಯನಿರ್ವಹಣೆಯು ದಾಖಲೆಗಳ ಅವಧಿ ಎಂದು ತಿಳಿಸಿದರು. ಪ್ರಧಾನಿಯಾಗಿ 4,399 ದಿನಗಳ ಆಡಳಿತದ ಗರಿಷ್ಠ ದಾಖಲೆಯನ್ನೂ ಮೋದಿ ಯವರು ಮಾಡಿದ್ದಾರೆ ಎಂದು ತಿಳಿಸಿದರು. ಈ ಮೂಲಕ ನೆಹರೂ ಅವರ ಚುನಾಯಿತ ಪ್ರಧಾನಿ ಯಾಗಿ ಅವಧಿಯ ದಾಖಲೆಯನ್ನು ಮುರಿದಿದ್ದಾರೆ ಎಂದರು.

ಕರ್ನಾಟಕದಲ್ಲಿ ಶೇ.96ರಷ್ಟು ವಿದ್ಯುದೀಕೃತ ರೈಲ್ವೆ ವ್ಯವಸ್ಥೆ ಈಗ ಸಾಧ್ಯವಾಗಿದೆ. ಹೊಸ ವಂದೇ ಭಾರತ್ ಎಕ್ಸ್‍ಪ್ರೆಸ್‍ಗಳನ್ನು ಆರಂಭಿಸಲಾಗಿದೆ. ಏಮ್ಸ್, ಐಐಟಿ(AIIMS, IIT)ಗಳನ್ನು ದೇಶಾದ್ಯಂತ ಆರಂಭಿಸಿ ದ್ದೇವೆ ಎಂದು ಅವರು ಮೋದಿಯವರ ಸರಕಾರದ ಕ್ರಾಂತಿಕಾರಿ ಸಾಧನೆಗಳ ವಿವರ ನೀಡಿದರು.

ಆದಾಯ ತೆರಿಗೆ ಮಿತಿ 2014ರಲ್ಲಿ 2.5 ಲಕ್ಷ ಆಗಿತ್ತು. ಅದನ್ನು ಈಗ 12.75 ಲಕ್ಷಕ್ಕೆ ಏರಿಸಿದ್ದೇವೆ. ಇದು ಮಧ್ಯಮ ವರ್ಗದವರಿಗೆ ಕೊಟ್ಟ ಕೊಡುಗೆ ಎಂದು ತಿಳಿಸಿದರು. ಜಿಎಸ್‍ಟಿ(GST)ಯಿಂದಾಗಿ ತೆರಿಗೆ ವ್ಯವಸ್ಥೆಯ ಸುಧಾರಣೆ ಎಂದು ಅವರು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ(B Y Vijayendra), ಸಂಸದ ಡಾ.ಕೆ.ಸುಧಾಕರ್(MP Dr K Sudhakar), ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಮಾಜಿ ಶಾಸಕ ಚಂದ್ರಣ್ಣ(Former MLA Chandranna), ಮಂಡಲದ ಅಂಬರೀಷ್ ಗೌಡ, ವಿಭಾಗ ಪ್ರಭಾರಿ ಬ್ಯಾಟರಂಗೇಗೌಡ, ವಿಧಾನಪರಿಷತ್ ಸದಸ್ಯ ಎಸ್.ಕೇಶವ ಪ್ರಸಾದ್(Legislative Council Member S. Keshav Prasad), ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಪ್ರಮುಖರು ಇದ್ದರು.