ಚಿಂತಾಮಣಿಯಲ್ಲಿ ಸುಸಜ್ಜಿತ ನೂತನ ಟೌನ್‌ಶಿಪ್ ಅಭಿವೃದ್ಧಿ: ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಡಾ.ಎಂ.ಸಿ. ಸುಧಾಕರ್ ಸಮಾಲೋಚನೆ
ಯೋಜನೆಯನ್ನು ಅಚ್ಚುಕಟ್ಟಾಗಿ ರೂಪಿಸಲು ಮತ್ತು ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕೇವಲ ವಸತಿ ಮಾತ್ರವಲ್ಲದೆ, ಪಾರ್ಕ್, ರಸ್ತೆ, ಚರಂಡಿ ಮತ್ತು ವಿದ್ಯುತ್ ಸೌಲಭ್ಯಗಳನ್ನೊಳಗೊಂಡ ಆಧುನಿಕ ಮಾದರಿ ಯ ಟೌನ್‌ಶಿಪ್ ನಿರ್ಮಾಣದ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸ ಲಾಯಿತು.
-
ಚಿಂತಾಮಣಿ: ತಾಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ಹೆಚ್ಚುತ್ತಿರುವ ವಸತಿ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ, ತಾಲೂಕಿನಲ್ಲಿ ನೂತನವಾಗಿ ಸುಸಜ್ಜಿತ ಟೌನ್‌ಶಿಪ್ ನಿರ್ಮಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ (Revenue Minister Krishna Bhairegowda) ಹಾಗೂ ಉನ್ನತ ಶಿಕ್ಷಣ ಸಚಿವರು ಮತ್ತು ಚಿಂತಾಮಣಿ ಕ್ಷೇತ್ರದ ಶಾಸಕರಾದ ಡಾ.ಎಂ.ಸಿ.ಸುಧಾಕರ್(Dr. M.C. Sudhakar) ಅವರು ಜಿಲ್ಲಾಧಿ ಕಾರಿ ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು.
ಸಭೆಯಲ್ಲಿ ಟೌನ್‌ಶಿಪ್‌ಗಾಗಿ ಗುರುತಿಸಲಾಗಿರುವ ಭೂಮಿ ಹಾಗೂ ಅದರ ನೀಲನಕ್ಷೆಯನ್ನು ಸಚಿವರು ಕೂಲಂಕಷವಾಗಿ ಪರಿಶೀಲಿಸಿದರು.
ಯೋಜನೆಯನ್ನು ಅಚ್ಚುಕಟ್ಟಾಗಿ ರೂಪಿಸಲು ಮತ್ತು ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೇವಲ ವಸತಿ ಮಾತ್ರವಲ್ಲದೆ, ಪಾರ್ಕ್, ರಸ್ತೆ, ಚರಂಡಿ ಮತ್ತು ವಿದ್ಯುತ್ ಸೌಲಭ್ಯಗಳನ್ನೊಳಗೊಂಡ ಆಧುನಿಕ ಮಾದರಿಯ ಟೌನ್‌ಶಿಪ್ ನಿರ್ಮಾಣದ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸ ಲಾಯಿತು.
ಚಿಂತಾಮಣಿ ತಾಲೂಕಿನ ಭವಿಷ್ಯದ ದೃಷ್ಟಿಯಿಂದ ಈ ಟೌನ್‌ಶಿಪ್ ಅತ್ಯಂತ ಸಹಕಾರಿಯಾಗ ಲಿದ್ದು, ಜನಸಾಮಾನ್ಯರಿಗೆ ಸಕಲ ಸೌಲಭ್ಯವುಳ್ಳ ವಸತಿ ಪ್ರದೇಶವನ್ನು ಕಲ್ಪಿಸುವುದು ಸರ್ಕಾರದ ಗುರಿಯಾಗಿದೆ ಎಂದು ಈ ಸಂದರ್ಭದಲ್ಲಿ ಸಚಿವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.