ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chikkaballapur News: 25 ಸಾವಿರ ಫಲಾನುಭವಿಗಳಿಗೆ ಕಂದಾಯ ಸವಲತ್ತುಗಳ ವಿತರಣೆ: ಜಿಲ್ಲಾಧಿಕಾರಿ ಜಿ.ಪ್ರಭು

ಜಿಲ್ಲೆಯ 8 ತಾಲೂಕುಗಳಿಂದ 18 ರಿಂದ 20 ಸಾವಿರ ಫಲಾನುಭವಿಗಳು ಹಾಗೂ ಜಿಲ್ಲೆಯ ನಾಗರಿಕರು ಆಗಮಿಸುವ ನಿರೀಕ್ಷೆ ಇದೆ. ತಾಲ್ಲೂಕುವಾರು ಬಸ್ ವ್ಯವಸ್ಥೆ ಮಾಡಿದ್ದು ಅಲ್ಲಿಂದ ಲೇ ಅವರನ್ನು ಕರೆ ತಂದು ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿ ವಾಪಸ್ಸು ಕರೆದುಕೊಂಡು ಹೋಗುವ ಅನುಕೂಲ ಮಾಡಲಾಗಿದೆ

25 ಸಾವಿರ ಫಲಾನುಭವಿಗಳಿಗೆ ಕಂದಾಯ ಸವಲತ್ತುಗಳ ವಿತರಣೆ

ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶಕ್ಕೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಮನವಿ ಮಾಡಿದರು. -

Ashok Nayak
Ashok Nayak Feb 27, 2026 12:03 AM

ಚಿಕ್ಕಬಳ್ಳಾಪುರ: ಇಂದು ನಡೆಯಲಿರುವ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶಕ್ಕೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ನಗರದ ಹೊರವಲಯ ಚೊಕ್ಕಹಳ್ಳಿ ಬಳಿ “ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶದ” ವೇದಿಕೆ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಪೂರ್ವಸಿದ್ದತೆಗಳನ್ನು ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಫೌತಿ ಖಾತೆ, ದರಖಾಸ್ತು ಪೋಡಿ, ಮಾಸಾಶನ ಹಾಗೂ ಕಂದಾಯ ಗ್ರಾಮದ ಹಕ್ಕು ಪತ್ರಗಳ ವಿತರಣೆ ಸೇರಿದಂತೆ ಒಟ್ಟು 25000 ಫಲಾನುಭವಿಗಳಿಗೆ ಕಂದಾಯ ಸವಲತ್ತುಗಳನ್ನು ಜಿಲ್ಲಾ ಕೇಂದ್ರದಲ್ಲಿ ವಿತರಿಸಲು ಕ್ರಮವಹಿಸಲಾಗಿದೆ.

ಇದನ್ನೂ ಓದಿ: Chikkaballapur News: ಮುಖ್ಯಮಂತ್ರಿಗಳು, ಬಾಕಿ ಬಿಡುಗಡೆಗೆ ಶೀಘ್ರವೇ ಅಧಿಕಾರಿಗಳು, ಗುತ್ತಿಗೆದಾರರ ಸಭೆ ಕರೆಯಲಿ : ಆರ್.ಮಂಜುನಾಥ್ ಆಗ್ರಹ

ಜಿಲ್ಲೆಯ 8 ತಾಲೂಕುಗಳಿಂದ 18 ರಿಂದ 20 ಸಾವಿರ ಫಲಾನುಭವಿಗಳು ಹಾಗೂ ಜಿಲ್ಲೆಯ ನಾಗರಿಕರು ಆಗಮಿಸುವ ನಿರೀಕ್ಷೆ ಇದೆ. ತಾಲ್ಲೂಕುವಾರು ಬಸ್ ವ್ಯವಸ್ಥೆ ಮಾಡಿದ್ದು ಅಲ್ಲಿಂದಲೇ ಅವರನ್ನು ಕರೆ ತಂದು ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿ ವಾಪಸ್ಸು ಕರೆದುಕೊಂಡು ಹೋಗುವ ಅನುಕೂಲ ಮಾಡಲಾಗಿದೆ. ಶಿಷ್ಟಾಚಾರದ ರೀತಿಯಲ್ಲಿಯೇ ಜನಪ್ರತಿನಿಧಿಗಳನ್ನು, ಅಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಈ ಸಮರ್ಪಣಾ ಸಮಾವೇಶದ ಕುರಿತು ಸಭೆಗಳನ್ನು ಮಾಡಿ ನಿರ್ದೇಶನ ನೀಡಿದ್ದಾರೆ. ಗುರುವಾರ ಸಂಜೆ ವೇದಿಕೆ ಸ್ಥಳಕ್ಕೆ ಸಚಿವರು ಭೇಟಿ ಕೊಟ್ಟು ಪರಿಶೀಲಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವರ ಸಹಕಾರ ದಿಂದ ಚಿಕ್ಕಬಳ್ಳಾಪುರ ಜಿಲ್ಲೆ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿ ಭೂತವಾಗುತ್ತಿದೆ.

ಈ ರೀತಿಯ ಇನ್ನಷ್ಟು ಜನಸ್ನೇಹಿ ಕಾರ್ಯಗಳನ್ನು ಜಿಲ್ಲಾಡಳಿತ ಕೈಗೊಳ್ಳಲು  ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ನಾಗರಿಕರು ಆಗಮಿಸಿ ನಮಗೆ ಪ್ರೇರಣೆ ನೀಡಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿ ಆಹ್ವಾನ ನೀಡಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ವಿವಿಧ ಇಲಾಖೆಗಳ ಅಧಿಕಾರಿ ಗಳು ಹಾಜರಿದ್ದರು.