ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮೂರುವರೆ ವರ್ಷದ ಬಾಲಕಿಗೆ ಹೊಸ ಜನ್ಮ ನೀಡಿದ ವೈದ್ಯರು

ಛತ್ತೀಸ್‌ಗಢ ಮೂಲದ ಬಾಲಕಿ ಶಿವಾಂಗಿ ಶರ್ಮಾ 2025ರಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ದ್ದಳು. ಶಸ್ತ್ರಚಿಕಿತ್ಸೆಯ ನಂತರ ಉಂಟಾದ ತೊಂದರೆಗಳಿAದಾಗಿ ಆಕೆಗೆ ದೀರ್ಘಕಾಲ ಉಸಿರಾಟದ ಟ್ಯೂಬ್ ಅಳವಡಿಸಬೇಕಾಯಿತು. ಇದರ ಪರಿಣಾಮವಾಗಿ ‘ಸಬ್‌ಗ್ಲೋಟಿಕ್ ಸ್ಟೆನೋಸಿಸ್’ (ಉಸಿರಾಟದ ನಾಳ ಕಿರಿದಾಗಿ ಬಹುತೇಕ ಮುಚ್ಚಿ ಹೋಗುವ ಸ್ಥಿತಿ) ಎಂಬ ಗಂಭೀರ ಸಮಸ್ಯೆ ಕಾಣಿಸಿಕೊಂಡು, ಉಸಿರಾಟದ ನಾಳ ಕಿರಿದಾಗಿ ಸಂಪೂರ್ಣ ಮುಚ್ಚಿಕೊಂಡಿತ್ತು. ಪರಿಣಾಮ, ಬಾಲಕಿಗೆ ಸಹಜವಾಗಿ ಉಸಿರಾಡುವುದೇ ಕಷ್ಟಕರವಾಗಿತ್ತು.

ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಅಪರೂಪದ ಉಚಿತ ಶಸ್ತ್ರಚಿಕಿತ್ಸೆ

ಬಾಲಕಿ ಶಿವಾಂಗಿ ಶರ್ಮಾ -

Profile
Ashok Nayak May 20, 2026 9:06 PM

ಚಿಕ್ಕಬಳ್ಳಾಪುರ: ಜನ್ಮಜಾತ ಹೃದಯ ಕಾಯಿಲೆಯ ಶಸ್ತ್ರಚಿಕಿತ್ಸೆಗೊಳಗಾದ ಬಳಿಕ ಗಂಭೀರ ಉಸಿರಾಟ ಸಮಸ್ಯೆಯಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮೂರುವರೆ ವರ್ಷದ ಬಾಲಕಿಗೆ ಮುದ್ದೇನಹಳ್ಳಿಯ ಶ್ರೀ ಮಧುಸೂದನ ಸಾಯಿ ಆಸ್ಪತ್ರೆಯ ವೈದ್ಯರು ಹೊಸ ಬದುಕು ನೀಡಿದ್ದಾರೆ. ಸಂಪೂರ್ಣವಾಗಿ ಮುಚ್ಚಿಕೊಂಡಿದ್ದ ಉಸಿರಾಟದ ನಾಳವನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಯಶಸ್ವಿಯಾಗಿ ಮರುನಿರ್ಮಿಸಿ, ಅಪರೂಪದ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ನಡೆಸಿದ್ದಾರೆ. ಇದನ್ನು ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಎಂದು ಪರಿಗಣಿಸಲಾಗಿದೆ.

ಛತ್ತೀಸ್‌ಗಢ ಮೂಲದ ಬಾಲಕಿ ಶಿವಾಂಗಿ ಶರ್ಮಾ 2025ರಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ದ್ದಳು. ಶಸ್ತ್ರಚಿಕಿತ್ಸೆಯ ನಂತರ ಉಂಟಾದ ತೊಂದರೆಗಳಿAದಾಗಿ ಆಕೆಗೆ ದೀರ್ಘಕಾಲ ಉಸಿರಾಟದ ಟ್ಯೂಬ್ ಅಳವಡಿಸಬೇಕಾಯಿತು. ಇದರ ಪರಿಣಾಮವಾಗಿ ‘ಸಬ್‌ಗ್ಲೋಟಿಕ್ ಸ್ಟೆನೋಸಿಸ್’ (ಉಸಿರಾಟ ದ ನಾಳ ಕಿರಿದಾಗಿ ಬಹುತೇಕ ಮುಚ್ಚಿ ಹೋಗುವ ಸ್ಥಿತಿ) ಎಂಬ ಗಂಭೀರ ಸಮಸ್ಯೆ ಕಾಣಿಸಿಕೊಂಡು, ಉಸಿರಾಟದ ನಾಳ ಕಿರಿದಾಗಿ ಸಂಪೂರ್ಣ ಮುಚ್ಚಿಕೊಂಡಿತ್ತು. ಪರಿಣಾಮ, ಬಾಲಕಿಗೆ ಸಹಜವಾಗಿ ಉಸಿರಾಡುವುದೇ ಕಷ್ಟಕರವಾಗಿತ್ತು.

ಚಿಕಿತ್ಸೆಗಾಗಿ ಛತ್ತೀಸ್‌ಗಢದ ಏಮ್ಸ್ ಸೇರಿದಂತೆ ಹಲವು ಆಸ್ಪತ್ರೆಗಳನ್ನು ಸಂಪರ್ಕಿಸಿದರೂ, ಪ್ರಕರಣದ ಜಟಿಲತೆ ಹಿನ್ನೆಲೆಯಲ್ಲಿ, ಶಸ್ತ್ರಚಿಕಿತ್ಸೆಗೆ ವೈದ್ಯರು ಹಿಂದೇಟು ಹಾಕಿದ್ದರು. ಅಲ್ಲದೇ ಆರ್ಥಿಕವಾಗಿ ದುರ್ಬಲ ಕುಟುಂಬವಾಗಿದ್ದರಿAದ ದುಬಾರಿ ಚಿಕಿತ್ಸೆ ಭರಿಸುವುದೂ ಅವರಿಗೆ ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: Chikkaballapur News: ಅಂಗಡಿಗಳ ಮೇಲೆ ದಾಳಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ 3100 ರೂ.ಗಳ ದಂಡ ಸಂಗ್ರಹ : ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್

ಕೊನೆಯ ಪ್ರಯತ್ನವಾಗಿ ಬಾಲಕಿಯನ್ನು ಮುದ್ದೇನಹಳ್ಳಿಯ ಶ್ರೀ ಮಧುಸೂದನ ಸಾಯಿ ವೈದ್ಯ ಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ದಾಖಲಿಸಲಾಯಿತು. ಇಲ್ಲಿನ ತಜ್ಞ ವೈದ್ಯರ ತಂಡ ಈ ಸವಾಲನ್ನು ಸ್ವೀಕರಿಸಿ ಹಂತ ಹಂತವಾಗಿ ಚಿಕಿತ್ಸೆ ನೀಡಿತು. ಲೇಸರ್, ಕೋಬ್ಲೇಷನ್, ಬಲೂನ್ ಡೈಲೇಷನ್ ಹಾಗೂ ಸ್ಟೆಂಟ್ ಅಳವಡಿಕೆ ಸೇರಿದಂತೆ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ಉಸಿರಾಟದ ನಾಳವನ್ನು ಪುನರ್‌ನಿರ್ಮಿಸಲಾಯಿತು.

ಮೇ 11ರಂದು ಸ್ಟೆಂಟ್ ತೆಗೆದುಹಾಕಲಾಗಿದ್ದು, ನಂತರ ಹಂತ ಹಂತವಾಗಿ ಚಿಕಿತ್ಸೆ ನೀಡುವ ಮೂಲಕ ಕೊನೆಗೆ ಮೇ 18ರಂದು ಟ್ರೇಕಿಯೊಸ್ಟಮಿ ಟ್ಯೂಬ್ ಅನ್ನು ಸಂಪೂರ್ಣವಾಗಿ ತೆಗೆದು ಹಾಕಲಾಯಿತು. ಇದರಿಂದ ಬಾಲಕಿಗೆ ಸಹಜವಾಗಿ ಉಸಿರಾಡಲು ಮತ್ತು ಮಾತನಾಡಲು ಸಾಧ್ಯ ವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಬಾಲಕಿಯ ತಂದೆ ಗೌರವ್ ಶರ್ಮಾ, “ಮುದ್ದೇನಹಳ್ಳಿ ಆಸ್ಪತ್ರೆ ದೇವಾಲಯ ಇದ್ದ ಹಾಗೆ. ಯಾವ ಆಸ್ಪತ್ರೆಯಲ್ಲೂ ಸಿಗದ ವೈದ್ಯಕೀಯ ಸೌಲಭ್ಯ ಮತ್ತು ಪ್ರೀತಿ ಯನ್ನು ಇಲ್ಲಿ ನೀಡುತ್ತಾರೆ. ನನ್ನ ಮಗಳಿಗೆ ಬದುಕು ಕೊಟ್ಟ ವೈದ್ಯರಿಗೆ ಆಭಾರಿ. ನಮ್ಮಂತ ಬಡವರ ಬದುಕಿಗೆ ಇದು ಆಶಾಕಿರಣ" ಎಂದು ಹೇಳುತ್ತಾರೆ.

ಬಾಲರೋಗಿಗಳಲ್ಲಿ ಸಂಪೂರ್ಣವಾಗಿ ಮುಚ್ಚಿಕೊಂಡ ಉಸಿರಾಟದ ನಾಳವನ್ನು ಎಂಡೋ ಸ್ಕೋಪಿಕ್ ತಂತ್ರಜ್ಞಾನ ಬಳಸಿ ಮರು ನಿರ್ಮಿಸುವುದು ಅತ್ಯಂತ ಅಪರೂಪದ ಸಾಧನೆ. ಈ ಬಾಲಕಿಗೆ ನಾವು ಅತ್ಯಂತ ಸಂಕೀರ್ಣವಾದ ಐದು ಶಸ್ತ್ರಚಿಕಿತ್ಸೆ ಮಾಡಿದ್ದೇವೆ.  ಜಗತ್ತಿನ ಕೆಲವೇ ಆಸ್ಪತ್ರೆಗಳಲ್ಲಿ ಇಂತಹ ಜಟಿಲ ಶಸ್ತ್ರಚಿಕಿತ್ಸೆ ನಡೆಸುವ ಪರಿಣತಿ ಮತ್ತು ಸೌಲಭ್ಯಗಳಿವೆ. ಅದರಲ್ಲೂ ಯಶಸ್ಸಿನ ಪ್ರಮಾಣ ಬಹಳ ಕಡಿಮೆ ಇರುತ್ತದೆ. ನಾವು ಈ ಮಗುವಿಗೆ ಮರುಜನ್ಮ ನೀಡುವಲ್ಲಿ ಯಶ ಕಂಡಿದ್ದೇವೆ ಎಂದು ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ.ಕೆ.ಬಿ.ಬಾಲಿ ಹೇಳಿದರು.

ಸುಮಾರು 30 ಲಕ್ಷ ರೂಪಾಯಿ ವೆಚ್ಚವಾಗಬಹುದಾದ ಈ ಚಿಕಿತ್ಸೆಯನ್ನು ಆಸ್ಪತ್ರೆ ಉಚಿತವಾಗಿ ನೀಡಿರುವುದು ಮಾನವೀಯ ವೈದ್ಯಕೀಯ ಸೇವೆಯ ಉದಾಹರಣೆಯಾಗಿದೆ. ಚಿಕಿತ್ಸೆ ಬಳಿಕ ಬಾಲಕಿ ಸಂಪೂರ್ಣ ಚೇತರಿಸಿಕೊಂಡಿದ್ದು, ಇದು ಚಿಕಿತ್ಸೆಯ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. ಈ ಆಸ್ಪತ್ರೆಯು 'ಒನ್ ವರ್ಲ್ಡ್ ಒನ್ ಫ್ಯಾಮಿಲಿ' ಮಿಷನ್ ಅಡಿಯಲ್ಲಿ ತನ್ನ ಉಚಿತ ವೈದ್ಯಕೀಯ ಸೇವಾ ಚಟುವಟಿಕೆಗಳನ್ನು ನಡೆಸುತ್ತದೆ.