Bagepally News: ದೇಶದ ಮಾನವ ಸಂಪನ್ಮೂಲ ಹಾಳಾಗಲು ಅಮಲು ಪದಾರ್ಥ ಸೇವನೆ ಕಾರಣ : ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ
ಸಮಾನವಾಗಿ ಹಲವು ಜನೋಪಯೋಗಿ ಕಾರ್ಯಗಳ ಮೂಲಕ ಸಮಾಜದ ಪ್ರಗತಿಗೆ ಕೊಡುಗೆ ನೀಡು ತ್ತಿದೆ. ಮದ್ಯವರ್ಜನ ಶಿಬಿರಗಳಿಂದ ಸಾಕಷ್ಟು ಕುಟುಂಬಗಳು ಇಂದು ನೆಮ್ಮದಿಯ ಜೀವನ ನಡೆಸುತ್ತಿವೆ. ದುಶ್ಚಟಗಳಿಗೆ ದಾಸರಾಗುತ್ತಿರುವ ಯುವ ಸಮೂಹವನ್ನು ಸನ್ಮಾರ್ಗದತ್ತ ಕರೆದೊಯ್ಯುವ ಕಾರ್ಯ ನಡೆಸಿರುವ ಸಂಘ ಜನರನ್ನು ಸಾಮಾಜಿಕ, ಆರ್ಥಿಕ ಹಾಗೂ ಕೌಟುಂಬಿಕವಾಗಿ ಸದೃಢಗೊಳಿಸಲು ಶ್ರಮಿಸುತ್ತಿದೆ. ಧಾರ್ಮಿಕ ತಳಹದಿಯಲ್ಲಿ ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡಲು ಆರ್ಥಿಕ ಸೌಲಭ್ಯ, ಕೆರೆಗಳ ಅಭಿವೃದ್ಧಿ ಸೇರಿ ಹಲವು ಕಾರ್ಯಕ್ರಮ ನಡೆಸಿದೆ

ದೇಶದ ಮಾನವ ಸಂಪನ್ಮೂಲ ಹಾಳಾಗಲು ಅಮಲು ಪದಾರ್ಥ ಸೇವನೆಯೊಂದೇ ಸಾಕು, ಬೇರಾವುದೇ ಕ್ಷಿಪಣಿ, ಬಾಂಬಿನ ಅಗತ್ಯವಿಲ್ಲ ಎಂದು ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ ಹೇಳಿದರು. -

ಬಾಗೇಪಲ್ಲಿ: ದೇಶದ ಮಾನವ ಸಂಪನ್ಮೂಲ ಹಾಳಾಗಲು ಅಮಲು ಪದಾರ್ಥ ಸೇವನೆಯೊಂದೇ ಸಾಕು, ಬೇರಾವುದೇ ಕ್ಷಿಪಣಿ, ಬಾಂಬಿನ ಅಗತ್ಯವಿಲ್ಲ ಎಂದು ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ ಹೇಳಿದರು.
ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ಬಿ.ಸಿ. ಟ್ರಸ್ಟ್ ಬಾಗೇಪಲ್ಲಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಾಗೇಪಲ್ಲಿ ತಾಲೂಕು ಆಶ್ರಯದಲ್ಲಿ ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ ನಡೆದ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸನ್ಮಾನಿಸಿ ಮಾತನಾಡಿದರು.
ಸರ್ವ ಮತೀಯ ಐಕ್ಯತೆಗೆ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಹೊಸ ಭಾಷ್ಯ ಬರೆದಿದ್ದು ಸರ್ವಧರ್ಮಿಯರನ್ನು ಸೇರಿಸಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಜನಜಾಗೃತಿ ವೇದಿಕೆ ಸರ್ವಧರ್ಮ ಸಮ್ಮೇಳನನ್ನು ನಿತ್ಯ ನಿರಂತರ ನಡೆಸಿಕೊಂಡು ಬರುತ್ತಿದೆ. ಮಹತ್ಮ ಗಾಂಧೀಜಿಯವರ ಆದರ್ಶ, ಸಿದ್ದಾಂತವನ್ನು ಕೇವಲ ಗಾಂಧಿ ಜಯಂತಿಯಂದು ಮಾತ್ರ ವಲ್ಲದೆ ಪ್ರತಿದಿನ ನೆನೆಪಿಸಿಕೊಂಡು ಕೆಲಸ ನಿರ್ವಹಿಸುವ ಸಂಘಟನೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಪ್ರಸ್ತುತ ದಿನದಲ್ಲಿ ಮಾದಕ ವಸ್ತುಗಳ ಜಾಲ ಪ್ರಬಲವಾಗಿದೆ. ಬಾಗೇ ಪಲ್ಲಿ ತಾಲ್ಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬಿ.ಸಿ.ಟ್ರಸ್ಟ್, ಸೇವೆ ಅನನ್ಯ. ಸರ್ಕಾರ ಮಾಡಲಾಗದಂತಹ ಉತ್ತಮ ಕೆಲಸಗಳನ್ನು ಸಂಸ್ಥೆ ಮಾಡುವ ಮೂಲಕ ಸಮಾಜಕ್ಕೆ ಮಾದರಿ ಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ: Chikkaballapur News: ಹೃದಯವಂತನ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರ!
ರಾಜ್ಯದಲ್ಲಿ ಬಡಜನರು, ನಿರ್ಗತಿಕರು, ದುರ್ಬಲ ವರ್ಗದವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಆರ್ಥಿಕ ನೆರವು ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಟಿಎಚ್‌ಒ ಡಾ,,ಸಿ.ಎನ್. ಸತ್ಯನಾರಾಯಣರೆಡ್ಡಿರವರು ಮಾತನಾಡಿ, ಸಮಾನವಾಗಿ ಹಲವು ಜನೋಪಯೋಗಿ ಕಾರ್ಯಗಳ ಮೂಲಕ ಸಮಾಜದ ಪ್ರಗತಿಗೆ ಕೊಡುಗೆ ನೀಡುತ್ತಿದೆ. ಮದ್ಯವರ್ಜನ ಶಿಬಿರಗಳಿಂದ ಸಾಕಷ್ಟು ಕುಟುಂಬಗಳು ಇಂದು ನೆಮ್ಮದಿಯ ಜೀವನ ನಡೆಸುತ್ತಿವೆ. ದುಶ್ಚಟಗಳಿಗೆ ದಾಸರಾಗುತ್ತಿರುವ ಯುವ ಸಮೂಹವನ್ನು ಸನ್ಮಾರ್ಗದತ್ತ ಕರೆದೊಯ್ಯುವ ಕಾರ್ಯ ನಡೆಸಿರುವ ಸಂಘ ಜನರನ್ನು ಸಾಮಾಜಿಕ, ಆರ್ಥಿಕ ಹಾಗೂ ಕೌಟುಂಬಿಕವಾಗಿ ಸದೃಢಗೊಳಿಸಲು ಶ್ರಮಿಸುತ್ತಿದೆ. ಧಾರ್ಮಿಕ ತಳಹದಿಯಲ್ಲಿ ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡಲು ಆರ್ಥಿಕ ಸೌಲಭ್ಯ, ಕೆರೆಗಳ ಅಭಿವೃದ್ಧಿ ಸೇರಿ ಹಲವು ಕಾರ್ಯಕ್ರಮ ನಡೆಸಿದೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲಾ ನಿರ್ದೇಶಕ ಪ್ರಶಾಂತ್ ಸಿ.ಎನ್ ರಾಜ್ಯದಲ್ಲಿ ಮದ್ಯವರ್ಜನ ಶಿಬಿರದಿಂದಾಗಿ ಹಲವಾರು ಮಂದಿಯ ಬದುಕಿನ ಕತ್ತಲೆ ದೂರವಾಗಿದೆ. ಗಾಂಧೀಜಿಯವರ ತತ್ವಾದರ್ಶದಂತೆ ನಡೆದುಕೊಳ್ಳುತ್ತಿರುವ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಮದ್ಯಮುಕ್ತ ಸಮಾಜದ ಕಲ್ಪನೆಗೆ ಒತ್ತು ಕೊಟ್ಟಿದ್ದಾರೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಜನಜಾಗೃತಿ ಸದಸ್ಯರಾದ ಬಾಬಾಜಾನ್ ಮಾತನಾಡಿ ಮದ್ಯಪಾನ ಮತ್ತು ಧೂಮಪಾನ ಚಟದಿಂದ ನಮ್ಮ ಆರೋಗ್ಯ ಕೆಡುತ್ತದೆ. ಈ ಪಿಡುಗನ್ನು ನಮ್ಮ ಸಮಾಜದಿಂದ ದೂರಮಾಡಲು ಸಾವಿರಕ್ಕೂ ಅಧಿಕ ಮದ್ಯವರ್ಜನ ಶಿಬಿರಗಳನ್ನು ನಡೆಸಿ ಮದ್ಯಪಾನ ಚಟಕ್ಕೆ ದಾಸರಾದ ಜನರನ್ನು ಮದ್ಯಪಾನ ವಿಮುಕ್ತರನ್ನಾಗಿ ಮಾಡುವ ಮೂಲಕ ಧರ್ಮಸ್ಥಳದ ಧರ್ಮಾ ಧಿಕಾರಿ ವೀರೇಂದ್ರ ಹೆಗ್ಡೆಯವರ ನೇತೃತ್ವದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಮುಖಿಯಾದ ಕೆಲಸವನ್ನು ಮಾಡುತ್ತಿದೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ವ್ಯಸನ ಮುಕ್ತ ಸದಸ್ಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲ್ಲೂಕು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬಿ.ಸಿ.ಟ್ರಸ್ಟ್ ಯೋಜನಾಧಿಕರಗಳಾದ ಪ್ರವೀಣ್, ಬಿಳ್ಳೂರು ಆಂಜನೇಯ ಸ್ವಾಮಿ ಟ್ರಸ್ಟಿನ ಅಧ್ಯಕ್ಷ ನಾಗರಾಜ್, ಜನಜಾಗೃತಿ ವೇದಿಕೆ ಸದಸ್ಯರಾದ ರಾಮಲಕ್ಷ್ಮಮ್ಮ, ನಾರಾಯಣಸ್ವಾಮಿ, ಹಾಗೂ ಸಂಸ್ಥೆಯ ಸಿಬ್ಬಂದಿ ಹಾಜರಿದ್ದರು.