ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bagepally News: ಸರ್ಕಾರಿ ಘಂಟಂವಾರಿಪಲ್ಲಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಹಾಗೂ ಆಪ್ತ ಸಮಾಲೋಚನೆ ಕಾರ್ಯಕ್ರಮ

ಗ್ರಾಮೀಣ ಪ್ರದೇಶ ದಲ್ಲಿ ಎಸ್‌ಎಸ್‌ಎಲ್‌ಸಿ ನಂತರ ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳುವ ಗೊಂದಲ ದಲ್ಲಿರುತ್ತಾರೆ. ಎಸ್‌ಎಸ್‌ಎಲ್‌ಸಿ ನಂತರ ರಕ್ಷಣಾ ಕ್ಷೇತ್ರದಲ್ಲಿನ ಆರ್ಮಿ, ನೇವಿ, ಏರ್‌ ಪೋರ್ಸ್ಗಳಲ್ಲಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ವಿವಿಧ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಹಾಗೂ ವೃತ್ತಿಪರ ಕೋರ್ಸ್ಗಳಲ್ಲಿ ಸಾಕಷ್ಟು ಅವಕಾಶಗಳಿದ್ದು, ನಿತ್ಯ ಪತ್ರಿಕೆಗಳನ್ನು ಓದುವ ಮೂಲಕ ಹೆಚ್ಚಿನ ವಿಷಯ ಅರಿಯಬೇಕು.

ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಹಾಗೂ ಆಪ್ತ ಸಮಾಲೋಚನೆ

ತಾಲೂಕಿನ ಕಸಬಾ  ಹೋಬಳಿ ಘಂಟಂವಾರಿಪಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಮತ್ತು ಆಪ್ತ ಸಮಾಲೋಚನೆ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು? ಎಂಬ ಬಗ್ಗೆ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. -

Ashok Nayak
Ashok Nayak Mar 4, 2026 10:15 PM

ಬಾಗೇಪಲ್ಲಿ: ತಾಲೂಕಿನ ಕಸಬಾ  ಹೋಬಳಿ ಘಂಟಂವಾರಿಪಲ್ಲಿ ಸರಕಾರಿ ಪ್ರೌಢಶಾಲೆ ಯಲ್ಲಿ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಮತ್ತು ಆಪ್ತ ಸಮಾಲೋಚನೆ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು? ಎಂಬ ಬಗ್ಗೆ ಮಾಹಿತಿ ಕಾರ್ಯ ಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಮಿಟ್ಟೇಮರಿ ಸಿ.ಆರ್.ಪಿ. ಡಾ.ಶಿವಪ್ಪ ಮಾತನಾಡಿ, ಗ್ರಾಮೀಣ ಪ್ರದೇಶ ದಲ್ಲಿ ಎಸ್‌ಎಸ್‌ಎಲ್‌ಸಿ ನಂತರ ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳುವ ಗೊಂದಲ ದಲ್ಲಿರುತ್ತಾರೆ. ಎಸ್‌ಎಸ್‌ಎಲ್‌ಸಿ ನಂತರ ರಕ್ಷಣಾ ಕ್ಷೇತ್ರದಲ್ಲಿನ ಆರ್ಮಿ, ನೇವಿ, ಏರ್‌ ಪೋರ್ಸ್ಗಳಲ್ಲಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ವಿವಿಧ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಹಾಗೂ ವೃತ್ತಿಪರ ಕೋರ್ಸ್ಗಳಲ್ಲಿ ಸಾಕಷ್ಟು ಅವಕಾಶಗಳಿದ್ದು, ನಿತ್ಯ ಪತ್ರಿಕೆಗಳನ್ನು ಓದುವ ಮೂಲಕ ಹೆಚ್ಚಿನ ವಿಷಯ ಅರಿಯಬೇಕು. ಜೀವನದಲ್ಲಿ ಪರಿಪೂರ್ಣತೆಯನ್ನು ಪಡೆಯಲು ಶಾಲಾ ಹಂತದಲ್ಲಿಯೇ ವೌಲ್ಯಗಳನ್ನು ರೂಢಿಸಿಕೊಳ್ಳ ಬೇಕೆಂದು ತಿಳಿಸಿದರು.

ಇದನ್ನೂ ಓದಿ: Bagepally News: ಎಸ್.ಎನ್.ಸುಬ್ಬಾರೆಡ್ಡಿ ಬಗ್ಗೆ ಹಗುರ ಮಾತು ಅಪಪ್ರಚಾರ ನಿಲ್ಲಿಸಿ; ದಾಖಲೆಗಳೊಂದಿಗೆ ಚರ್ಚೆಗೆ ಬನ್ನಿ: ದಲಿತ ಸಂಘರ್ಷ ಸಮಿತಿ ಆಗ್ರಹ

ವಿದ್ಯಾರ್ಥಿಗಳಿಗೆ ಅನೇಕ ಚಟುವಟಿಕೆಗಳನ್ನು ನೀಡಿ ಇದರ ಮೂಲಕ ಜೀವನದಲ್ಲಿ ಧ್ಯೇಯ ಮತ್ತು ಗುರಿಯನ್ನು ನಿಗದಿಪಡಿಸಿಕೊಂಡು ಗುರುಗಳ ಮಾರ್ಗದರ್ಶನ ಮತ್ತು ಸಲಹೆಗಳನ್ನು ಪಡೆದುಕೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದರು.

ಶಾಲೆಯ ಮುಖ್ಯ ಶಿಕ್ಷಕರಾದ ಜಿ.ರಾಮಸುಬ್ಬಮ್ಮ ಪ್ರಾಸ್ತಾವಿಕವಾಗಿ ಮಾಡುತ್ತಾ ವಿದ್ಯಾರ್ಥಿ ಗಳು ದೇಶ ಮತ್ತು ಸಮುದಾಯದ ಭವಿಷ್ಯದ ಅಮೂಲ್ಯ ಆಸ್ತಿಯಾಗಿದ್ದಾರೆ. ಅವರ ಸರಿಯಾದ ಶಿಕ್ಷಣ ಮತ್ತು ತರಬೇತಿಯಿಂದ ಮಾತ್ರ ಸಮಾಜದ ಕಲ್ಯಾಣ ಸಾಧ್ಯ. ವಿದ್ಯಾರ್ಥಿ ಗಳು ತಮ್ಮ ಬದುಕಿಗೊಂದು ಸ್ಪಷ್ಟ ಉದ್ದೇಶವನ್ನು ಇಟ್ಟುಕೊಂಡು ವ್ಯರ್ಥ ಕೆಲಸಗಳಲ್ಲಿ ತಮ್ಮ ಅಮೂಲ್ಯ ಸಮಯವನ್ನು ಹಾಳು ಮಾಡಿಕೊಳ್ಳದೆ ಮುನ್ನಡೆಯ ಬೇಕು. ವಿದ್ಯಾರ್ಥಿ ಗಳ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರ ಪಾತ್ರ ಕೂಡ ಪ್ರಧಾನವಾದುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎನ್.ಎನ್.ಸಂಧ್ಯಾ,ಕೆ.ಬಿ.ಆಂಜನೇಯ ರೆಡ್ಡಿ, ಜಿ.ಲಕ್ಷ್ಮೀದೇವಮ್ಮ, ಸಿ.ನಾರಾಯಣ ಸ್ವಾಮಿ, ಎಸ್. ವರಲಕ್ಷ್ಮೀ,ಹೆಚ್.ಆರ್.ರಘುನಾಥ್ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.