ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gudibande News: ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಂದ ಸ್ವಾವಲಂಬನೆಗೆ ಪ್ರೋತ್ಸಾಹ: ವಿನಾಯಕ ಪೈ

ತಾಲೂಕಿನ ಬೀಚಗಾನಹಳ್ಳಿ ಗ್ರಾಮದ ಸಾಂಸ್ಕೃತಿಕ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ವಲಯ ಮಟ್ಟದ ಮಂಗಳ ಗೌರಿ ಪೂಜೆ ಹಾಗೂ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಸಮುದಾಯ ಅಭಿವೃದ್ಧಿಯ ಜತೆಗೆ ಕೃಷಿ, ಆರೋಗ್ಯ ರಕ್ಷಣೆ, ಧಾರ್ಮಿಕ ಚಟುವಟಿಕೆ ಹಾಗೂ ಜ್ಞಾನವಿಕಾಸಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಂದ ಸ್ವಾವಲಂಬನೆಗೆ ಪ್ರೋತ್ಸಾಹ

-

Profile
Ashok Nayak Sep 8, 2026 11:07 PM

ಗುಡಿಬಂಡೆ: ಧಾರ್ಮಿಕ, ಸಾಮಾಜಿಕ ಹಾಗೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಸದಸ್ಯರಲ್ಲಿ ಧಾರ್ಮಿಕ ಪ್ರಜ್ಞೆ, ಸಾಮಾಜಿಕ ಜಾಗೃತಿ ಹಾಗೂ ಸ್ವಾವಲಂಬನೆಯ ಮನೋ ಭಾವ ಬೆಳೆಸಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(Sri Kshetra Dharmasthala Rural Development Scheme)ಯ ತಾಲೂಕು ಯೋಜನಾಧಿಕಾರಿ ವಿನಾಯಕ ಪೈ ತಿಳಿಸಿದರು.

ತಾಲೂಕಿನ ಬೀಚಗಾನಹಳ್ಳಿ ಗ್ರಾಮದ ಸಾಂಸ್ಕೃತಿಕ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ವಲಯ ಮಟ್ಟದ ಮಂಗಳ ಗೌರಿ ಪೂಜೆ ಹಾಗೂ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಸಮುದಾಯ ಅಭಿವೃದ್ಧಿಯ ಜತೆಗೆ ಕೃಷಿ, ಆರೋಗ್ಯ ರಕ್ಷಣೆ, ಧಾರ್ಮಿಕ ಚಟುವಟಿಕೆ ಹಾಗೂ ಜ್ಞಾನವಿಕಾಸಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರಿಂದ ಸದಸ್ಯರಿಗೆ ಹಲವು ರೀತಿಯ ಅನುಕೂಲವಾಗುವು ದರೊಂದಿಗೆ ಸಮಾಜದ ಅಭಿವೃದ್ಧಿಗೂ ಕೊಡುಗೆ ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ: Sri Krishna Janmashtami in Gudibande: ಶ್ರೀ ಕೃಷ್ಣನ ಜೀವನಾದರ್ಶಗಳನ್ನು ಯುವಜನತೆ ಅಳವಡಿಸಿಕೊಳ್ಳಲಿ

ಜನಜಾಗೃತಿ ವೇದಿಕೆ ಸದಸ್ಯೆ ಪರಿಮಳ ಡಿ.ಎಲ್. ಮಾತನಾಡಿ, ಶ್ರಾವಣ ಮಾಸದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಸಂತಸದ ಸಂಗತಿ. ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಯೋಜನೆಯ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದ್ದು, ಸಾಮಾಜಿಕ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿ ಕೊಳ್ಳಬೇಕು ಎಂದರು.

ಮುಖಂಡ ಕೃಷ್ಣೇಗೌಡ ಮಾತನಾಡಿ, ಡಾ.ಡಿ.ವೀರೇಂದ್ರ ಹೆಗ್ಗಡೆ(Dr.D.Veerendra Heggade) ಯವರ ಮಾರ್ಗದರ್ಶನದಲ್ಲಿ ಯೋಜನೆಯು ಧಾರ್ಮಿಕ ಪ್ರಜ್ಞೆ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಇಂತಹ ಕಾರ್ಯಕ್ರಮಗಳು ಅಗತ್ಯ ಎಂದರು.

ಸಬ್ ಇನ್ಸ್‌ಪೆಕ್ಟರ್ ಮುತ್ತುರಾಜ್, ಚಂದ್ರಕಲಾ, ಮಂಜುಳಾ, ಹೇಮಂತ್, ವೆಂಕಟ ನರಸಪ್ಪ, ಕಿರಣ್ ಕುಮಾರ್, ಪವಿತ್ರಮ್ಮ, ಚಿಕ್ಕಮ್ಮ, ಸರಸ್ವತಮ್ಮ ಸೇರಿದಂತೆ ಸೇವಾಪ್ರತಿನಿಧಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.