SIR: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಭಾಗವಹಿಸಿ: ನಾಗಮಣಿ ಎಂ.
ಜೂನ್ 30ರಿಂದ ಆರಂಭಗೊಂಡಿರುವ ಎಸ್‌ಐಆರ್ ಪ್ರಕ್ರಿಯೆಯು ಜು.29ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಹೊಸ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಹೆಸರು ಕೈಬಿಡುವಿಕೆ ಸೇರಿದಂತೆ ವಿವಿಧ ಸೇವೆಗಳಿಗೆ ಮತದಾರರು ಬಿಎಲ್ಒಗಳ ಮೂಲಕ ಮೂಲಕ ಅರ್ಜಿ ಸಲ್ಲಿಸಬಹುದು
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ವಿಶೇಷ ಸಮಗ್ರ ಪರಿಷ್ಕರಣೆ-2026 ಜಾಗೃತಿ ಬೈಕ್ ಜಾಥಾ ಕಾರ್ಯಕ್ರಮ ನಡೆಯಿತು. -
ಗುಡಿಬಂಡೆ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಭಾಗವಹಿಸಿ ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು ಎಂದು ಗುಡಿಬಂಡೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ನಾಗಮಣಿ ಎಂ. ಕರೆ ನೀಡಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಎಸ್‌ವೀಪ್ ಸಮಿತಿ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಜಾಗೃತಿ ಬೈಕ್ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯ ನಡೆಯುತ್ತಿದ್ದು, ಸಾರ್ವಜನಿಕರು ಈ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Gudibande News: ನೈಜ ಚುನಾವಣೆಯ ಅನುಭವ ಪಡೆದ ವಿದ್ಯಾರ್ಥಿಗಳು; ಪ್ರಜಾಪ್ರಭುತ್ವ ಮೌಲ್ಯಗಳ ಅರಿವು
ಜೂನ್ 30ರಿಂದ ಆರಂಭಗೊಂಡಿರುವ ಎಸ್‌ಐಆರ್ ಪ್ರಕ್ರಿಯೆಯು ಜು.29ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಹೊಸ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಹೆಸರು ಕೈಬಿಡುವಿಕೆ ಸೇರಿದಂತೆ ವಿವಿಧ ಸೇವೆಗಳಿಗೆ ಮತದಾರರು ಬಿಎಲ್ಒಗಳ ಮೂಲಕ ಮೂಲಕ ಅರ್ಜಿ ಸಲ್ಲಿಸಬಹುದು. ಮನೆಗಳಿಗೆ ಭೇಟಿ ನೀಡುವ ಬಿಎಲ್ಒಗಳು ಮತದಾರರಿಗೆ ಎನ್ಯುಮರೇಷನ್ ಫಾರ್ಮ್‌ಗಳ ಎರಡು ಪ್ರತಿಗಳನ್ನು ನೀಡುತ್ತಾರೆ.
ಮತದಾರರು ಎರಡನ್ನೂ ಭರ್ತಿ ಮಾಡಿ ಸಹಿ ಮಾಡಿದ ಬಳಿಕ, ಬಿಎಲ್ಒ ಸಹ ಸಹಿ ಮಾಡಿ ಒಂದು ಪ್ರತಿಯನ್ನು ಸ್ವೀಕೃತಿ ಪತ್ರವಾಗಿ ಮತದಾರರಿಗೆ ಹಿಂತಿರುಗಿಸುತ್ತಾರೆ. ಮತ್ತೊಂದು ಪ್ರತಿಯನ್ನು ಅಧಿಕಾರಿಗಳು ಪಡೆದು ಡಿಜಿಟಲ್ ದಾಖಲಾತಿಗಾಗಿ ಸ್ಕ್ಯಾನ್ ಮಾಡಲಾಗುತ್ತದೆ ಎಂದು ವಿವರಿಸಿದರು.
ಇನ್ನೂ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಹೊಸ ಅರ್ಹ ಮತದಾರರ ಹೆಸರು ಸೇರ್ಪಡೆ, ನಿಧನರಾದವರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವುದು, ಎರಡು ಕಡೆ ಹೆಸರು ಇದ್ದರೆ ಒಂದೇ ಕಡೆ ಉಳಿಸುವುದು ಹಾಗೂ ಗುರುತಿನ ಚೀಟಿಯಲ್ಲಿರುವ ದೋಷ ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಶ್ರೀನಿವಾಸ ಎ.ಆರ್., ತಾಲ್ಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ರಾಮಾಂಜಿನಪ್ಪ, ಪಪಂ ಮುಖ್ಯಾಧಿಕಾರಿ ಆರತಿ, ಸರ್ಕಾರಿ ನೌಕರರ ಸಂಘದ ಮುನಿಕೃಷ್ಣಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.