Chinthamani News: ಜಮೀನು ಮಂಜೂರಾಗದೆ ನೊಂದ ಮಾಜಿ ಸೈನಿಕನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಜೆ.ಕೆ. ಕೃಷ್ಣಾರೆಡ್ಡಿ
ಸರ್ಕಾರಿ ಜಮೀನು ಮಂಜೂರಾಗದ ಹಿನ್ನೆಲೆಯಲ್ಲಿ ನೊಂದ ಮಾಜಿ ಸೈನಿಕ ಶಿವಾ ನಂದರೆಡ್ಡಿ ಕೀಟ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
-
ಚಿಂತಾಮಣಿ: ಸರ್ಕಾರಿ ಜಮೀನು ಮಂಜೂರಾಗದ ಹಿನ್ನೆಲೆಯಲ್ಲಿ ನೊಂದ ಮಾಜಿ ಸೈನಿಕ ಶಿವಾ ನಂದರೆಡ್ಡಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಚಿಂತಾಮಣಿ ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ರಾಯಪ್ಪಲ್ಲಿ ಗ್ರಾಮದ ಶಿವಾನಂದರೆಡ್ಡಿ ಅವರು ಕಳೆದ 26 ವರ್ಷಗಳಿಂದ ಸರ್ಕಾರಿ ಜಮೀನು ಮಂಜೂರು ಮಾಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದರು.
ಇದನ್ನೂ ಓದಿ: Chinthamani News: ಸರ್ಕಾರಿ ಭೂಗಳ್ಳರ ವಿರುದ್ಧ ಹೋರಾಟ, ಸಮುದಾಯದ ವಿರುದ್ಧವಲ್ಲ: ಜೆ.ಕೆ.ಕೃಷ್ಣಾರೆಡ್ಡಿ
ಇತ್ತೀಚೆಗೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ, ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಟ್ರಸ್ಟ್ ಗಳಿಗೆ ಜಮೀನು ನೀಡಲು ಅವಕಾಶವಿದ್ದರೂ ದೇಶ ಸೇವೆ ಸಲ್ಲಿಸಿದ ತನಗೆ ಜಮೀನು ಮಂಜೂರು ಮಾಡಲಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಬಳಿಕ ಅಲ್ಲಿಯೇ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಸ್ಥಳೀಯರು ಹಾಗೂ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿತ್ತು. ಆಸ್ಪತ್ರೆಗೆ ಭೇಟಿ ನೀಡಿದ ಜೆ.ಕೆ. ಕೃಷ್ಣಾರೆಡ್ಡಿ ಅವರು ವೈದ್ಯ ರಿಂದ ಚಿಕಿತ್ಸೆಯ ಕುರಿತು ಮಾಹಿತಿ ಪಡೆದು, ಶಿವಾನಂದರೆಡ್ಡಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಮನವಿ ಮಾಡಿದರು.