ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಏ.30ರಿಂದ ಮೇ.13ರ ತನಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ: 5,353 ನೋಂದಣಿ

ಏ.30ರಿಂದ ಮೇ 13 ರವರೆಗೆ ನಡೆಯುವ ದ್ವಿತೀಯ ಪಿಯುಸಿಯ ಪರೀಕ್ಷೆ-2ಗಾಗಿ ಜಿಲ್ಲೆಯಲ್ಲಿ ಒಟ್ಟು 15 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು, ಶಿಡ್ಲಘಟ್ಟ ಮತ್ತು ಚಿಂತಾಮಣಿ ನಗರಗಳಲ್ಲಿ ತಲಾ 1 ರಂತೆ ಒಟ್ಟು 5 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ-2ನ್ನು ಬರೆಯಲು ಜಿಲ್ಲೆಯಲ್ಲಿ ಒಟ್ಟು 5353 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದಾರೆ.

30ರಿಂದ ಮೇ.13ರ ತನಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ

ಇದೇ ತಿಂಗಳ 30 ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿಯ ೨ನೇ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಯಾವುದೇ ಲೋಪಗಳು ಆಗದಂತೆ ಪಾರದರ್ಶಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಟ್ಟನಿಟ್ಟಿನ ಸೂಚನೆ ನೀಡಿದರು. -

Profile
Ashok Nayak Apr 27, 2026 11:52 PM

ಚಿಕ್ಕಬಳ್ಳಾಪುರ: ಇದೇ ತಿಂಗಳ 30ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿಯ 2ನೇ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಯಾವುದೇ ಲೋಪಗಳು ಆಗದಂತೆ ಪಾರದರ್ಶಕವಾಗಿ ನಡೆಸು ವಂತೆ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಟ್ಟನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ “ದ್ವಿತೀಯ ಪಿ.ಯು.ಸಿಯ ಪರೀಕ್ಷೆ-2” ಕುರಿತ ಪೂರ್ವಭಾವಿ ಸಿದ್ದತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಏ.30ರಿಂದ ಮೇ 13 ರವರೆಗೆ ನಡೆಯುವ ದ್ವಿತೀಯ ಪಿಯುಸಿಯ ಪರೀಕ್ಷೆ-2ಗಾಗಿ  ಜಿಲ್ಲೆ ಯಲ್ಲಿ ಒಟ್ಟು 15 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು, ಶಿಡ್ಲಘಟ್ಟ ಮತ್ತು ಚಿಂತಾಮಣಿ ನಗರಗಳಲ್ಲಿ ತಲಾ 1 ರಂತೆ ಒಟ್ಟು 5 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ-2ನ್ನು ಬರೆಯಲು ಜಿಲ್ಲೆಯಲ್ಲಿ ಒಟ್ಟು 5353 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದಾರೆ. ಪ್ರವೇಶ ಪತ್ರ ಗಳನ್ನು ಆನ್ಲೈನ್ ಮೂಲಕ ಎಲ್ಲ ಕಾಲೇಜುಗಳಿಗೆ ವಿತರಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Chikkaballapur News: ರಾಜ್ಯಕ್ಕೆ ಎರಡನೇ ರ‍್ಯಾಂಕ್‌ನ ಗರಿ ಮೂಡಿಸಿದ ಪ್ರಣತಿರಾಜ್‌ಗೆ ವಕೀಲರಿಂದ ಅಭಿನಂದನೆ

ಜಿಲ್ಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಸಂಪೂರ್ಣ ಜವಾಬ್ದಾರಿ ಹೊಂದಿದ್ದು, ನಿಯಮಗಳಂತೆ ಯಾವುದೇ ಸಮಸ್ಯೆಗಳು ಎದುರಾಗದಂತೆ ಪರೀಕ್ಷೆ ನಡೆಸ ಬೇಕು. ಪರೀಕ್ಷಾ ಮುಖ್ಯಸ್ಥರು ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಆಸನಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಹಾಗೂ ಪರೀಕ್ಷಾ ದಿನದಂದು ಆಸನ ಗಳ ವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ಕಾಲೇಜು ಆವರಣದಲ್ಲಿ ಸ್ಪಷ್ಟವಾಗಿ ಸೂಚನಾ ಫಲಕದಲ್ಲಿ ಪ್ರಕಟಿಸುವುದು ಎಂದು ಸೂಚನೆ ನೀಡಿದರು.

ಇನ್ ಸ್ಟಾಗ್ರಾಮ್, ವ್ಯಾಟ್ಸ್‌ʼಅಪ್ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಗಳಂತಹ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಕಿವಿಗೊಡಬಾರದು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಸಕಲ ಭದ್ರತೆಯಲ್ಲಿ ಜವಾಬ್ದಾರಿಯುತ ಅಧಿಕಾರಿಗಳ ವ್ಯಾಪ್ತಿಯಲ್ಲಿ ಇರುವುದರಿಂದ ಆಯಾ ಅಧಿಕಾರಿಗಳು ಹೆಚ್ಚಿನ ಜಾಗೃತಿವಹಿಸಿ ಕೆಲಸ ನಿರ್ವಹಿಸಲು ಸೂಚಿಸಿದರು.

1u

ಮಾರ್ಗಸೂಚಿಯಂತೆ ಪರೀಕ್ಷೆ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಸಲು ಹಾಗೂ ವೆಬ್ ಕಾಸ್ಟಿಂಗ್ ನಿರ್ವಹಣೆಗೆ ಸೂಚಿಸಲಾಗಿದೆ. ಪರೀಕ್ಷೆ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ರ್ಫೋನ್, ಮೈಕ್ರೋಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್ ಸಾಧನ ಅನುಮತಿಸಲಾಗುವುದಿಲ್ಲ. ವಿದ್ಯಾರ್ಥಿಗಳಾಗಲಿ, ಸಿಬ್ಬಂದಿ ಯಾಗಲಿ ಅಥವಾ ಯಾವುದೇ ಅನಧಿಕೃತ ವ್ಯಕ್ತಿಗಾಗಲಿ ಮೊಬೈಲ್ ಬಳಕೆಗೆ, ಫೋಟೋ ಗ್ರಾಫಿಗೆ ಸಂಪೂರ್ಣ ನಿಷೇಧಿಸಲಾಗಿದೆ. ಬೆಳಕಿನ ವ್ಯವಸ್ಥೆ, ಆಸನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಮಾಡಬೇಕು ಎಂದು ತಿಳಿಸಿದರು.

ಸುಸೂತ್ರ ಪರೀಕ್ಷೆಗೆ ಪೊಲೀಸ್ ಇಲಾಖೆ, ಖಜಾನೆ ಇಲಾಖೆ, ಸಂಬಂಧಿಸಿದ ಇಲಾಖೆಗಳ ಸಹಕಾರಕ್ಕೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ ಗಳನ್ನು ಪರೀಕ್ಷಾ ದಿನದಂದು ಮುಚ್ಚಿಸಬೇಕು. ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತು ಗಳನ್ನು ನಿಯಮಾನುಸಾರ ಠೇವಣಿ ಇರಿಸಿ ಸೂಚಿತ ನಿರ್ದೇಶನದಂತೆ ಸಂಬಂಧ ಪಟ್ಟವರು ವಿತರಿಸಬೇಕು. ಪರೀಕ್ಷೆ ಕೇಂದ್ರಗಳ ಹೊರಗೆ ಜನಸಂದಣಿ ಇರಕೂಡದು.

ಜನಸಂದಣಿ ಮೇಲೆ ನಿಗಾ ಇಡಬೇಕು. ಪರೀಕ್ಷೆ ಕೇಂದ್ರಗಳ ಸ್ವಚ್ಛತೆ, ಸಿಸಿಟಿವಿ ವ್ಯವಸ್ಥೆ, ಬಳಸುವ ವಾಹನಗಳು, ವೆಬ್ ಕಾಸ್ಟಿಂಗ್ ಸರಿಯಾಗಿರಬೇಕು. ನಿರಂತರ ವಿದ್ಯುತ್ ಸೌಲಭ್ಯ ಇರಬೇಕು. ಪರೀಕ್ಷಾ ಕೇಂದ್ರಕ್ಕೆ ಒಂದು ವೀಲ್ ಚೇರ್ ವ್ಯವಸ್ಥೆ ಮಾಡಬೇಕು. ಈ ಎಲ್ಲ ಸೌಲಭ್ಯಗಳಿಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ.ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಇರಲಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿನ ಸೂಚನೆಗಳನ್ನು ಓದಿಕೊಂಡು ಪರೀಕ್ಷಾ ನಿಯಮ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ದಿನದಂದು ಅರ್ಧ ಗಂಟೆ ಮುಂಚಿತವಾಗಿ ಹಾಜರಿರಬೇಕು. ಜಿಲ್ಲಾಡಳಿತವು ಪರೀಕ್ಷಾ ವಾತಾವರಣಕ್ಕೆ ಪೂರಕ ವಾದ ಸಕಲ ವ್ಯವಸ್ಥೆಯನ್ನು ಕಲ್ಪಿಸಿದ್ದು, ನಿರ್ಭಿತಿಯಿಂದ ಪರೀಕ್ಷೆಯನ್ನು ಎದುರಿಸಿ ಜಿಲ್ಲೆಗೆ ಉತ್ತಮ ಫಲಿತಾಂಶ ತರುವಂತೆ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಈ ವೇಳೆ ಶುಭ ಕೋರಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್. ಆದಿಶೇಷರಾವ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.