ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಬರದ ಹೊಡೆತಕ್ಕೆ ರೈತ ಸಂಘ ಆಕ್ರೋಶ; ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಎಕೆಆರ್‌ಎಸ್ ಆಗ್ರಹ

ಜಿಲ್ಲೆಯನ್ನು ಕೂಡಲೇ ಬರಪೀಡಿತ ಎಂದು ಘೋಷಿಸಿ, ರೈತರ ಎಲ್ಲ ರೀತಿಯ ಸಾಲ ಮನ್ನಾ ಹಾಗೂ ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ರೈತರು ಮಂಗಳವಾರ ಜಿಲ್ಲಾಡಳಿತ ಭವನದ ಎದುರು ಮೂರು ಗಂಟೆಗಳ ಕಾಲ ಧರಣಿ ನಡೆಸಿದರು.

ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಎಕೆಆರ್‌ಎಸ್ ಆಗ್ರಹ

ಜಿಲ್ಲೆಯನ್ನು ಕೂಡಲೇ ಬರಪೀಡಿತ ಎಂದು ಘೋಷಿಸಿ, ರೈತರ ಎಲ್ಲ ರೀತಿಯ ಸಾಲ ಮನ್ನಾ ಹಾಗೂ ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ರೈತರು ಮಂಗಳವಾರ ಜಿಲ್ಲಾಡಳಿತ ಭವನದ ಎದುರು ಮೂರು ಗಂಟೆಗಳ ಕಾಲ ಧರಣಿ ನಡೆಸಿದರು. -

Profile
Ashok Nayak Aug 19, 2026 9:40 AM

ಚಿಕ್ಕಬಳ್ಳಾಪುರ: ಜಿಲ್ಲೆಯನ್ನು ಕೂಡಲೇ ಬರಪೀಡಿತ ಎಂದು ಘೋಷಿಸಿ, ರೈತರ ಎಲ್ಲ ರೀತಿಯ ಸಾಲ ಮನ್ನಾ ಹಾಗೂ ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ರೈತರು ಮಂಗಳವಾರ ಜಿಲ್ಲಾಡಳಿತ ಭವನದ ಎದುರು ಮೂರು ಗಂಟೆಗಳ ಕಾಲ ಧರಣಿ ನಡೆಸಿದರು.

ನಗರ ಹೊರವಲಯ ಜಿಲ್ಲಾಡಳಿತ ಭವನದ ಎದುರು ಕೆಪಿಆರ್‌ಎಸ್ ಸಂಘಟನೆ ನೇತೃತ್ವದಲ್ಲಿ ನಡೆದ ಹೋರಾಟವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಮಂಜುನಾಥರೆಡ್ಡಿ  ಕಳೆದ ೪೦ ವರ್ಷಗಳಲ್ಲಿ ಕಂಡರಿಯದ ಬರ ಜಿಲ್ಲೆಯನ್ನು ಈ ಬಾರಿ ಆವರಿಸಿದೆ. ಆಗಸ್ಟ್ ಮುಗಿಯುತ್ತಾ ಬಂದರೂ ಶೇ.೮೦ರಷ್ಟು ರೈತರಿಗೆ ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬಿತ್ತನೆ ಮಾಡಿರುವ ರೈತರೂ ಮಳೆ ಕೊರತೆಯಿಂದ ಬೆಳೆ ಹಾನಿಯಾಗಿ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ವಿಳಂಬ ಮಾಡದೆ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ವಿಬಿಜಿ ರಾಮ್‌ಜಿ ಯೋಜನೆಯಡಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು. ಸಹಕಾರ ಸಂಘಗಳು, ವಾಣಿಜ್ಯ ಬ್ಯಾಂಕ್‌ಗಳು ಹಾಗೂ ಬಂಗಾರದ ಅಡಮಾನ ಸೇರಿದಂತೆ ರೈತರ ಎಲ್ಲ ರೀತಿಯ ಸಾಲಗಳನ್ನು ಮನ್ನಾ ಮಾಡಬೇಕು. ಬೆಳೆ ವಿಮೆ ವ್ಯಾಪ್ತಿಗೆ ಒಳಪಡದ ತರಕಾರಿ, ಸಿರಿಧಾನ್ಯ ಹಾಗೂ ತೋಟಗಾರಿಕಾ ಬೆಳೆಗಳಿಗೂ ಬರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: Chinthamani News: ಕೋಮು ಸೌಹಾರ್ದತೆಗೆ ಮಾದರಿಯಾಗಲಿ ಮುರುಗಮಲ್ಲ ಉರುಸ್: ಅಧಿಕಾರಿಗಳ ಸಮ್ಮುಖದಲ್ಲಿ ಶಾಂತಿ ಸಭೆ

ಬೆಲೆ ಏರಿಕೆಗೆ ಅನುಗುಣವಾಗಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ನಿಯಮಗಳನ್ನು ಪರಿಷ್ಕರಿಸಿ, ಪ್ರತಿ ಎಕರೆಗೆ ಕನಿಷ್ಠ 40 ಸಾವಿರದಿಂದ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು. ಬೆಳೆ ನಷ್ಟವನ್ನು ವೈಜ್ಞಾನಿಕವಾಗಿ ಅಂದಾಜಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ದರು.

ಮಳೆ ಅಭಾವದ ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ರೈತರು ಜೀವನ ನಡೆಸಲು ಪರದಾಡುತ್ತಿದ್ದಾರೆ. ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ ಯಲ್ಲಿ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಶಾಸಕರು ಸದನದಲ್ಲಿ ಸಮಗ್ರ ಚರ್ಚೆ ನಡೆಸಬೇಕು. ವಿರೋಧ ಪಕ್ಷಗಳ ಸದಸ್ಯರೂ ರೈತರ ಪರ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು.

ಸಹ ಸಂಚಾಲಕ ಲಕ್ಷ್ಮೀನಾರಾಯಣ ಮಾತನಾಡಿ, ರೈತರ ಸಮಸ್ಯೆಗಳನ್ನು ರಾಜಕೀಯದಿಂದ ಹೊರಗಿಟ್ಟು ಸರ್ಕಾರ ಪರಿಹರಿಸಬೇಕು. ರೈತಪರ ಆಡಳಿತಕ್ಕೆ ಆದ್ಯತೆ ನೀಡಿ ಎಲ್ಲ ರೀತಿಯ ಸಾಲ ಮನ್ನಾ ಮಾಡುವ ಮೂಲಕ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.

ಬಳಿಕ ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತರು ಎಚ್ಚರಿಸಿದರು. ಧರಣಿಯಲ್ಲಿ ರವಿಚಂದ್ರ ರೆಡ್ಡಿ, ಹೇಮಚಂದ್ರ, ಶ್ರೀನಿವಾಸ್, ನರಸಿಂಹಪ್ಪ, ಆಂಜನೇಯ ರೆಡ್ಡಿ, ಅಶ್ವತ್ಥಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.