ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೈಗಾರಿಕೆಗೆ ರೈತರ ಜಮೀನು ಸ್ವಾಧೀನ ಜಿಲ್ಲಾಡಳಿತ ಭವನದ ಎದುರು ರೈತರು ಪೊಲೀಸರ ನಡುವೆ ಜಟಾಪಟಿ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಭೂಮಿ ಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ಧಿಷ್ಟಾವಧಿಯ ಹೋರಾಟ 45ನೇ ದಿನಕ್ಕೆ ಕಾಲಿಟ್ಟಿದ್ದು ಬುಧವಾರ ತೀವ್ರ ಸ್ವರೂಪ ಪಡೆದುಕೊಂಡಿತು. ಜಾನುವಾರುಗಳೊಂದಿಗೆ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಮುಂದ ಸಿದ್ದತೆ ನಡೆಸುತ್ತಿದ್ದಂತೆ ಪೊಲೀಸರು ಬ್ಯಾರಿಕೇಡ್‌ ಗಳನ್ನು ಹಾಕಿ ಹೋರಾಟ ವಿಫಲಗೊಳಿಸಲು ಮುಂದಾದರು.

ರೈತನ ಕೊರಳಪಟ್ಟಿ ಹಿಡಿದು ಎಳೆದಾಡಿದ ಆರೋಪ

ಜಿಲ್ಲಾಡಳಿತ ಭವನಕ್ಕೆ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಲು ರೈತಸಂಘದ ಪದಾಧಿಕಾರಿಗಳು ಯತ್ನ.ರೈತರು ಪೊಲೀಸರ ನಡುವೆ ಭಾರಿ ಜಟಾಪಟಿ-ರೈತನ ಕೊರಳಪಟ್ಟಿ ಹಿಡಿದು ಎಳೆದಾಡಿದ ಆರೋಪ ಕೇಳಿ ಬಂದಿದೆ. -

Profile
Ashok Nayak Apr 29, 2026 11:52 PM

ಚಿಕ್ಕಬಳ್ಳಾಪುರ: ಕೆಐಎಡಿಬಿಗೆ ಭೂ ಸ್ವಾಧೀನ ವಿಚಾರದಲ್ಲಿ ರೈತ ಸಂಘಟನೆಗಳ ಮತ್ತು ಪೊಲೀಸರ ನಡುವೆ ಹೈಡ್ರಾಮಾವೇ ನಡೆದು ಹೋಯಿತು. ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆಗೆ ಬರುವ ಮಾಹಿತಿ ಪಡೆದ ರೈತ ಸಂಘದ ಒಂದು ಬಣ ಬೃಹತ್ ಸಂಖ್ಯೆಯಲ್ಲಿ ಜಮಾವಣೆಗೊಂಡು ಜಿಲ್ಲಾಡಳಿತ ಭವನಕ್ಕೆ ಪ್ರವೇಶಿಸಲು ಮುಂದಾದ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷವೇ ಏರ್ಪಟ್ಟು ಕೆಲ ರೈತರನ್ನು ಬಂಧಿಸಿದ ಘಟನೆಯೂ ನಡೆಯಿತು.

ಹೌದು. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಭೂಮಿ ಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಹೋರಾಟ 45ನೇ ದಿನಕ್ಕೆ ಕಾಲಿಟ್ಟಿದ್ದು ಬುಧವಾರ ತೀವ್ರ ಸ್ವರೂಪ ಪಡೆದುಕೊಂಡಿತು. ಜಾನುವಾರುಗಳೊಂದಿಗೆ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಮುಂದ ಸಿದ್ದತೆ ನಡೆಸುತ್ತಿದ್ದಂತೆ ಪೊಲೀಸರು ಬ್ಯಾರಿಕೇಡ್‌ ಗಳನ್ನು ಹಾಕಿ ಹೋರಾಟ ವಿಫಲಗೊಳಿಸಲು ಮುಂದಾದರು. ಈ ವೇಳೆ ಪೊಲೀಸರು ರೈತರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಈ ವೇಳೆ ಪೇದೆಯೊಬ್ಬ ರೈತನ ಕೊರಳ ಪಟ್ಟಿಗೆ ಕೈ ಹಾಕಿ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು ರೈತರನ್ನು ಕೆರಳಿಸಿದೆ.

ಇದನ್ನೂ ಓದಿ: Chikkaballapur News: ಶೇ.100ರಷ್ಟು ಲಸಿಕಾಕರಣ ಸಾಧಿಸಿ ಸಂಪೂರ್ಣವಾಗಿ ತಡೆಗಟ್ಟಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ಜಿ.ಪ್ರಭು

ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2300 ಎಕರೆ ಜಮೀನು ಸ್ವಾದೀನಕ್ಕೆ ಸರ್ಕಾರ ಮುಂದಾಗಿದೆ. ಇದನ್ನ ವಿರೋಧಿಸಿ ಜಿಲ್ಲಾಡಳಿತ ಭವನದ ಎದುರು ರೈತ ಸಂಘದ ನೇತೃತ್ವದಲ್ಲಿ ಕೆಲ ರೈತರು 45 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ. ಇದರ ನಡುವೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್ ಜಿಲ್ಲಾಡಳಿತ ಭವನಕ್ಕೆ ಕೆಡಿಪಿ ಸಭೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನಕ್ಕೆ ಜಾನುವಾರಗಳೊಂದಿಗೆ ಮುತ್ತಿಗೆ ಹಾಕಲು ರೈತರು ಮುಂದಾಗಿದ್ದರು.

ಆದರೆ ಮುತ್ತಿಗೆ ಹಾಕುವ ವಿಚಾರ ತಿಳಿದಿದ್ದ ಪೊಲೀಸರು ಪೊಲೀಸ್ ಇಲಾಖೆಯು ರೈತರನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪೊಲೀಸರು ಸರ್ಪಗಾವಲು ನಿರ್ಮಿಸಿದ್ದರು. ಇದನ್ನು ಲೆಕ್ಕಿಸದೇ ರೈತರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗುಲು ಮುಂದಾದಾಗ ರೈತರು ಹಾಗೂ ಪೊಲೀಸರ ನಡುವೆ ಭಾರೀ ಜಟಾಪಟಿಯಾಗಿ ತಳ್ಳಾಟ ನೂಕಾಟ ನಡೆಯಿತು.

2ha

ಈ ವೇಳೆ ವೇಳೆ ಪೊಲೀಸ್ ಪೇದೆಯೊಬ್ಬ ರೈತನ ಕೊರಳ ಪಟ್ಟಿಗೆ ಕೈ ಹಾಕಿ ದೌರ್ಜನ್ಯ ಎಸಗಿದ್ದು ಭರತ್ ಎಂಬಾತನನ್ನು ವಶಕ್ಕೆ ಪಡೆದರು. ಇದರಿಂದ ರೈತರು ಹಾಗೂ ಪೊಲೀಸರ ನಡುವೆ ಬಾರಿ ಗಲಾಟೆ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಈ ವೇಳೆ ಸುದ್ದಿಗಾರರೊಂದಿಗೆ ರೈತಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ, ರೈತರ ಹೋರಾಟ ೪೫ನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಬಂದಿಲ್ಲ, ರೈತರ ಕಷ್ಟ ಕೇಳಿಲ್ಲ, ಭರತ್ ಎಂಬ ರೈತನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ, ರೈತರ ಮೇಲೆ ದಾಳಿ ಮಾಡುವ ಅಧಿಕಾರವನ್ನು ಪೊಲೀಸರಿಗೆ ನೀಡಿದವರು ಯಾರು ಎಂದು ಪ್ರಶ್ನಿಸಿದರು.

dco

ರೈತರನ್ನು ಒಡೆಯಲು ಪೊಲೀಸರಿಗೆ ಆದೇಶ ನೀಡಿದವರು ಯಾರು? ಗೂಂಡಾಗಳ ರೀತಿ ಯಲ್ಲಿ ಪೊಲೀಸರು ವರ್ತಿಸುತ್ತಿದ್ದಾರೆ, ಪೊಲೀಸರ ವಿರುದ್ಧ ಮೊಕದ್ದಮೆ ದಾಖಲಿಸಲು ರೈತ ಸಂಘದಿಂದ ನಿರ್ಧರಿಸಲಾಗಿದೆ. ಹೊಸಹುಡ್ಯ ಭಾಗದಲ್ಲಿ ರೈತರನ್ನು ತಡೆಯಲು ಪೊಲೀಸರಿಗೆ ಅಧಿಕಾರ ಏನಿದೆ? ರೈತರ ಅನ್ನ ತಿಂದು, ರೈತರ ಹಾಲು ಕುಡಿದು ರೈತರ ಮೇಲೆ ಹಲ್ಲೆ ನಡೆಸುವ ಪೊಲೀಸರಿಗೆ ಮಾನವೀಯತೆ ಇಲ್ಲ, ಯಾರದೋ ಮುಲಾಜಿಗಾಗಿ ರೈತರ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವವರೆಗೂ ಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾರ್ಯದರ್ಶಿ ನೆಲಮಾಕನಹಳ್ಳಿ ಗೋಪಾಲ್, ಮುನಿನಂಜಪ್ಪ, ತಾದೂರು ಮಂಜುನಾಥ್, ರಾಮಾಂಜಿನಪ್ಪ, ಕೃಷ್ಣಪ್ಪ, ಅಶ್ವತ್ಥನಾರಾಯಣಗೌಡ, ನಂಜುಂಡಪ್ಪ, ಗೌರಮ್ಮ, ರತ್ನಮ್ಮ, ಅಂಬಿಕಾ, ರತ್ನಮ್ಮ, ಸೋಮಶೇಖರ್, ನಾರಾಯಣಸ್ವಾಮಿ, ಶ್ರೀರಾಮ, ರಾಜಣ್ಣ, ಮಂಜುನಾಥ, ರಾಘವೇಂದ್ರ, ಕುಮಾರ್, ದೇವರಾಜು, ಮೋಹನ್, ಹರೀಶ್ ಇದ್ದರು.