ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chinthamani News: ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರೈತರು ಸಂಕಷ್ಟಕ್ಕೆ: ಸೀಕಲ್ ರಾಮಚಂದ್ರಗೌಡ ಆಕ್ರೋಶ

ಮುಂಬರುವ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಸೀಕಲ್ ಗ್ರಾಮ ದಲ್ಲಿ ನಡೆದ ಸಭೆಯ ನಂತರ, ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಹಾಗೂ ದುರಾಡಳಿತದಿಂದಾಗಿ ಜನಸಾಮಾನ್ಯರು ಮತ್ತು ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರೈತರು ಸಂಕಷ್ಟಕ್ಕೆ

-

Profile
Ashok Nayak Oct 21, 2026 10:53 PM

ಚಿಂತಾಮಣಿ: ಮುಂಬರುವ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಸೀಕಲ್ ಗ್ರಾಮ ದಲ್ಲಿ ನಡೆದ ಸಭೆಯ ನಂತರ, ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಹಾಗೂ ದುರಾಡಳಿತದಿಂದಾಗಿ ಜನಸಾಮಾನ್ಯರು ಮತ್ತು ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ದುರಾಡಳಿತದಿಂದಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗದ ರೈತರಿಗೆ ಕುಡಿಯಲು ನೀರು ಸಿಗುತ್ತಿಲ್ಲ ಹಾಗೂ ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ದೊರೆಯದೆ ಕಂಗಾಲಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: Chikkaballapur News: ಬೂದುಗುಂಬಳ, ಹೂವು, ಹಣ್ಣು, ಸಿಹಿ ಖರೀದಿಗೆ ಮುಗಿಬಿದ್ದ ಜನತೆ; ಪ್ರಮುಖ ರಸ್ತೆಗಳಲ್ಲಿ ಹಬ್ಬದ ಕಳೆ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಸರಿಯಾದ ರೀತಿಯಲ್ಲಿ ಅನುಕೂಲವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಮದ್ಯದ ಪರವಾನಗಿಗಳನ್ನು ನೀಡುವ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಮತ್ತು ವ್ಯಸನಕ್ಕೆ ಸಿಲುಕಿಸಲಾಗುತ್ತಿದೆ ಎಂದು ತೀವ್ರವಾಗಿ ಖಂಡಿಸಿದ್ದಾರೆ.

ದೇಶವು ಸದೃಢವಾಗಿರಲು ಮತ್ತು ಉಳಿಯಲು ನರೇಂದ್ರ ಮೋದಿ ಅವರ ನೇತೃತ್ವದ ಎನ್.ಡಿ.ಎ.(NDA) ಸರ್ಕಾರ ಕೇಂದ್ರದಲ್ಲಿ ಮುಂದುವರಿಯುವುದು ಅತ್ಯಗತ್ಯ ಎಂದು ಸೀಕಲ್ ರಾಮಚಂದ್ರಗೌಡ ಅಭಿಪ್ರಾಯಪಟ್ಟಿದ್ದಾರೆ.

ಮುಂಬರುವ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಯಾದ ಕೆ.ಎನ್. ಸುರೇಶ್ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಅವರು ಸಭೆಯ ಮೂಲಕ ಸಾರ್ವಜನಿಕರಲ್ಲಿ ಮತ್ತು ಪದವೀಧರರಲ್ಲಿ ಮನವಿ ಮಾಡಿಕೊಂಡಿದ್ದಾರೆ.