ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chinthamani News: ರೈತರ ನಂಬಿಕೆ ಎಂದಿಗೂ ಹುಸಿಗೊಳಿಸುವುದಿಲ್ಲ: ಆವಲಪ್ಪ

ರೈತರ ಹಿತ ಕಾಯುವುದು ಹಾಗೂ ಹಾಲು ಒಕ್ಕೂಟವನ್ನು ಮತ್ತಷ್ಟು ಬಲಪಡಿಸು ವುದು ನಮ್ಮ ಪ್ರಮುಖ ಆದ್ಯತೆಯಾಗಿದ್ದು, ರೈತರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿ ಗೊಳಿಸುವುದಿಲ್ಲ ಎಂದು ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕ ಕೆ.ಎನ್.ಆವಲಪ್ಪ ಹೇಳಿದರು.

ರೈತರ ನಂಬಿಕೆ ಎಂದಿಗೂ ಹುಸಿಗೊಳಿಸುವುದಿಲ್ಲ: ಆವಲಪ್ಪ

-

Profile
Ashok Nayak Sep 21, 2026 11:21 PM

ಚಿಂತಾಮಣಿ: ರೈತರ ಹಿತ ಕಾಯುವುದು ಹಾಗೂ ಹಾಲು ಒಕ್ಕೂಟವನ್ನು ಮತ್ತಷ್ಟು ಬಲಪಡಿಸು ವುದು ನಮ್ಮ ಪ್ರಮುಖ ಆದ್ಯತೆಯಾಗಿದ್ದು, ರೈತರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕ ಕೆ.ಎನ್.ಆವಲಪ್ಪ ಹೇಳಿದರು.

ತಾಲ್ಲೂಕಿನ ವಿರೂಪಾಕ್ಷಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ: Chinthamani News: ಅಂಬೇಡ್ಕರ್ ಪ್ರತಿಮೆಗೆ ಪೂಜೆಗಿಂತ ಆಶಯಗಳ ಅಳವಡಿಕೆಯೇ ನಿಜವಾದ ಗೌರವ: ಇಒ ಆನಂದ್

ಸಂಘದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಹಾಲು ಉತ್ಪಾದಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಂಘ ಹಾಗೂ ಒಕ್ಕೂಟವನ್ನು ಬಲಪಡಿಸಲು ಅಗತ್ಯ ಸಹಕಾರ ನೀಡಲಾಗು ವುದು ಎಂದು ಭರವಸೆ ನೀಡಿದರು.

ಸಂಘದ ಅಧ್ಯಕ್ಷ ಆರ್.ಮುನಿರಾಜು ಅಧ್ಯಕ್ಷತೆ ವಹಿಸಿದ್ದರು. ವಿಸ್ತರಣಾಧಿಕಾರಿ ಗುಲಾಬ್ ಜಾನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ನಾರಾಯಣಸ್ವಾಮಿ, ಉಪಾಧ್ಯಕ್ಷ ಚಿಕ್ಕನಾರಾಯಣ ಸ್ವಾಮಿ, ನಿರ್ದೇಶಕರಾದ ಎಂ.ಮಂಜುನಾಥ್, ವಿ.ಎಂ.ಮಂಜುನಾಥ್, ವಿ.ಆರ್.ಮಂಜುನಾಥ್, ವಿ.ಎಂ.ನಾರಾಯಣಸ್ವಾಮಿ, ಎಂ.ನಾರಾಯಣಸ್ವಾಮಿ, ಭೀಮಣ್ಣ, ಕೆ.ರಮೇಶ್, ಅನುಸೂಯಮ್ಮ, ಮುನಿರತ್ನಮ್ಮ, ಸುಶೀಲಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.