ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Kaiwara News: ಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ

ಆಲಂಬಗಿರಿ ದೇವಾಲಯದಿಂದ ಸುಮಾರು 1 ಕಿ.ಮೀ ದೂರ ದಲ್ಲಿರುವ ಆಲಂಬಗಿರಿ ಬೆಟ್ಟದ ಪ್ರಕೃತಿಯ ತೊಪ್ಪಲಿನಲ್ಲಿ ಹುಣ್ಣಿಮೆ ಪ್ರಯುಕ್ತ ಸಂಕೀರ್ತನಾ ಗಿರಿಪ್ರದಕ್ಷಿಣೆ ಕಾರ್ಯಕ್ರಮ ನಡೆಯಿತು. ಹುಣ್ಣಿಮೆ ಗಿರಿಪ್ರದಕ್ಷಿಣೆಯಲ್ಲಿ ಕೈವಾರ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ|| ಎಂ.ಆರ್.ಜಯರಾಮ್ ರವರು ಭಾಗವಹಿಸಿದ್ದರು. ಅವರೊಂದಿಗೆ ಹಲವಾರು ಭಕ್ತರು ಗಿರಿಪ್ರದಕ್ಷಿಣೆ ಮಾಡಿದರು.

Kaiwara News: ಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ

-

Profile
Ashok Nayak Jan 3, 2026 10:50 PM

ಕೈವಾರ : ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿ ನಾರೇಯಣ ಮಠದಲ್ಲಿ ಹುಣ್ಣಿಮೆಯ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರೇಯಣಸ್ವಾಮಿ ಹಾಗೂ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ, ಮತ್ತು ಅಷ್ಟಾವಧಾನ ಸೇವೆಯನ್ನು ನೇರವೇರಿಸಿ, ಮಹಾಮಂಗಳಾರತಿಯನ್ನು ಬೆಳಗಲಾಯಿತು. ಇದೇ ವೇಳೆ ರಥೋತ್ಸವ ನಡೆಸಲಾಯಿತು.

ಭಕ್ತಾಧಿಗಳು ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು. ಶ್ರೀಯೋಗಿನಾರೇಯಣ ಸಂಕೀರ್ತನಾ ಯೋಜನೆ ಸಂಚಾಲಕರಾದ ವಿದ್ವಾನ್ ವಾನರಾಶಿ ಬಾಲಕೃಷ್ಣ ಭಾಗವತರ್ ರವರು ಉಪನ್ಯಾಸವನ್ನು ನಡೆಸಿ ಕೊಟ್ಟರು. ಹುಣ್ಣಿಮೆ ಪ್ರಯುಕ್ತ ನಾದಸುಧಾರಸ ವೇದಿಕೆಯಲ್ಲಿ ಅಖಂಡ ಸಂಕೀರ್ತನೆಯನ್ನು ಏರ್ಪಡಿಸಲಾಗಿತ್ತು. ಭಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: Chikkaballapur New: ಜಲಮೂಲಗಳಿಗೆ ಸಂಸ್ಕರಿಸದ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಎಚ್ಚರಿಕೆ

ಆಲಂಬಗಿರಿಯಲ್ಲಿ ಗಿರಿಪ್ರದಕ್ಷಿಣೆ: ಆಲಂಬಗಿರಿ ದೇವಾಲಯದಿಂದ ಸುಮಾರು 1 ಕಿ.ಮೀ ದೂರ ದಲ್ಲಿರುವ ಆಲಂಬಗಿರಿ ಬೆಟ್ಟದ ಪ್ರಕೃತಿಯ ತೊಪ್ಪಲಿನಲ್ಲಿ ಹುಣ್ಣಿಮೆ ಪ್ರಯುಕ್ತ ಸಂಕೀರ್ತನಾ ಗಿರಿಪ್ರದಕ್ಷಿಣೆ ಕಾರ್ಯಕ್ರಮ ನಡೆಯಿತು. ಹುಣ್ಣಿಮೆ ಗಿರಿಪ್ರದಕ್ಷಿಣೆಯಲ್ಲಿ ಕೈವಾರ ಕ್ಷೇತ್ರದ ಧರ್ಮಾಧಿ ಕಾರಿಗಳಾದ ಡಾ|| ಎಂ.ಆರ್.ಜಯರಾಮ್ ರವರು ಭಾಗವಹಿಸಿದ್ದರು. ಅವರೊಂದಿಗೆ ಹಲವಾರು ಭಕ್ತರು ಗಿರಿಪ್ರದಕ್ಷಿಣೆ ಮಾಡಿದರು. ಗಿರಿಪ್ರದಕ್ಷಣಿಯ ನಂತರ ಶಂಕು, ಚಕ್ರದ ವೇದಿಕೆಯಲ್ಲಿ ಸಾಮೂಹಿಕವಾಗಿ ನಾಮ ಸಂಕೀರ್ತನೆಯನ್ನು ಸಮರ್ಪಿಸಲಾಯಿತು. ನಂತರ ದೀಪೋತ್ಸವ ವನ್ನು ನೆರವೇರಿಸಲಾಯಿತು. ಭಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.