ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gas Cylinder Blast: ಗ್ಯಾಸ್ ಸಿಲಿಂಡರ್ ಸ್ಫೋಟ; ತಾಯಿ, ಮೂವರು ಮಕ್ಕಳಿಗೆ ಗಂಭೀರ ಗಾಯ

Gas Cylinder Blast: ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಪಲ್ಲಿಯಲ್ಲಿ ಭಾನುವಾರ ಬೆಳಗ್ಗೆ ಘಟನೆ ನಡೆದಿದೆ. ಗ್ಯಾಸ್ ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಗೃಹಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗ್ಯಾಸ್ ಸಿಲಿಂಡರ್ ಸ್ಫೋಟ; ತಾಯಿ, ಮೂವರು ಮಕ್ಕಳಿಗೆ ಗಂಭೀರ ಗಾಯ

Profile Prabhakara R May 11, 2025 2:38 PM

ಚಿಂತಾಮಣಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು, ತಾಯಿ, ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ (Gas Cylinder Blast) ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಪಲ್ಲಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ನಗರದ ಹೊರವಲಯದ ಕರಿಯಪಲ್ಲಿಯ ವೆಂಕಟೇಶ್ವರ ಶಾಲೆ ಸಮೀಪ ಲಕ್ಷ್ಮಿದೇವಮ್ಮ ಎಂಬುವರ ಮನೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಚಾವಣಿ ಹಾನಿಯಾಗಿ, ಮನೆಯಲ್ಲಿದ್ದ ತಾಯಿ ಲಕ್ಷ್ಮೀದೇವಿ (32), ಮಕ್ಕಳಾದ ಹರ್ಷವರ್ಧನ್ (14), ಸಂಜಯ್ (13) ಹರಿಪ್ರಿಯ (11) ಗಾಯಗೊಂಡಿದ್ದು, ಇವರನ್ನು ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Gas Cylinder Blast 1

ತಾಯಿ ಲಕ್ಷ್ಮೀದೇವಿ ಹಾಗೂ ಮಗ ಹರ್ಷವರ್ಧನ್ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಇಬರು ಮಕ್ಕಳು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ಯಾಸ್ ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಗೃಹಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬೀದಿನಾಯಿಗಳ ದಾಳಿಗೆ ಗಜೇಂದ್ರಗಡದಲ್ಲಿ ಮಹಿಳೆ ಬಲಿ

ಗದಗ: ಬೀದಿ ನಾಯಿಗಳ ದಾಳಿಗೆ (Street dog attack) ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಗಜೇಂದ್ರಗಡ ಪಟ್ಟಣದಲ್ಲಿ ಬೀದಿ ನಾಯಿಗಳು ಅಟ್ಯಾಕ್‌ ಮಾಡಿ ಮಹಿಳೆಯೊಬ್ಬರನ್ನು ಬಲಿ (Woman death) ಪಡೆದಿವೆ. ಪ್ರೇಮವ್ವ ಚೋಳಿನ (52) ಸಾವನ್ನಪ್ಪಿರುವ ಮಹಿಳೆ ಎಂದು ಗುರುತಿಸಲಾಗಿದೆ. ಹೂವು ತರಲು ಹೋಗಿದ್ದಾಗ ಪ್ರೇಮವ್ವ ಮೇಲೆ ಬೀದಿನಾಯಿಗಳು ಗುಂಪಾಗಿ ದಾಳಿ ಮಾಡಿದ್ದು, ತೀವ್ರವಾಗಿ ಘಾಸಿಗೊಳಿಸಿದ್ದವು. ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಪ್ರೇಮವ್ವ ಸಾವನ್ನಪ್ಪಿದ್ದಾರೆ. ಗಜೇಂದ್ರಗಡ (Gadag news) ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಬೀದಿನಾಯಿಗಳ ದಾಳಿಗೆ ಮಕ್ಕಳು ಬಲಿಯಾಗುವ ಪ್ರಕರಣಗಳು ರಾಜ್ಯದಲ್ಲಿ ಇದುವರೆಗೆ ಹಲವು ನಡೆದಿವೆ. ಬೀದಿನಾಯಿಗಳಿಗೆ ಮಾಂಸದ ತ್ಯಾಜ್ಯ ಸುಲಭವಾಗಿ ದೊರೆಯುತ್ತಿರುವುದರಿಂದ ಅವು ಕೊಬ್ಬಿವೆ. ಅವು ಸಿಗದೆ ಹೋದಾಗ ಮನುಷ್ಯರ ಮೇಲೆ ದಾಳಿ ನಡೆಸುತ್ತಿವೆ. ಇವುಗಳ ಸಂಖ್ಯೆ ಅಕ್ಷಯವಾಗಿ ವೃದ್ಧಿಸಿದ್ದು, ಬೀದಿ ನಾಯಿಗಳ ಸಂತಾನಹರಣ ಪ್ರಕ್ರಿಯೆ ನಗರ ಆಡಳಿತದಿಂದ ಸರಿಯಾಗಿ ನಡೆಯುತ್ತಿಲ್ಲ ಎಂದು ನಾಗರಿಕರು ಆರೋಪಿಸಿದ್ದಾರೆ.

ಆಟವಾಡುತ್ತಿದ್ದ ಮಗು ಬಾವಿಗೆ ಬಿದ್ದು ಮೃತ್ಯು

ವಿಜಯಪುರ: ಆಟವಾಡುತ್ತಿದ್ದ ಮಗು ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಮೂರು ವರ್ಷದ ಹರ್ಷಿತ್ ಪಾಟೀಲ್ ಬಾವಿಗೆ ಬಿದ್ದು ಮೃತಪಟ್ಟ ಮಗು. ಶುಕ್ರವಾರದಂದು ಮನೆಯಿಂದ ಮಗು ನಾಪತ್ತೆಯಾಗಿತ್ತು. ಮಗು ಎಲ್ಲಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಕಂಗಾಲಾದ ಕುಟುಂಬಸ್ಥರು ಹರ್ಷಿತ್ ಹುಡುಕಾಟದಲ್ಲಿ ತೊಡಗಿದ್ದರು. ಇಂದು ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ.

ಈ ಸುದ್ದಿಯನ್ನೂ ಓದಿ | Dr Ayyappan: ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ. ಅಯ್ಯಪ್ಪನ್‌ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ

ಕುಟುಂಬಸ್ಥರು ಮಗುವನ್ನು ತೆರೆದ ಬಾವಿಯ ಆಸುಪಾಸಲ್ಲಿ ಆಡಲು ಬಿಟ್ಟಾಗ ಅನಾಹುತ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.