ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bagepally News: ಪ್ರತಿ 6 ತಿಂಗಳಿಗೊಮ್ಮೆ ಅರೋಗ್ಯ ತಪಾಸಣೆ ಮಾಡಿಸಿಕೊಳ್ಳಿ: ಕೆ.ಟಿ.ವೀರಾಂಜನೇಯ

ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಹೆಚ್ಚಿನ ಕೆಲಸ ಹಾಗೂ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯವಿದೆ. ವಿಶ್ರಾಂತಿ ರಹಿತ ಕೆಲಸ ಕೂಡಾ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸದೆ ಇರುವುದು ಅನೇಕ ಸಮಸ್ಯೆಗಳಿಗೆ ಕಾರಣ ವಾಗಿದೆ

ಪ್ರತಿ 6 ತಿಂಗಳಿಗೊಮ್ಮೆ ಅರೋಗ್ಯ ತಪಾಸಣೆ ಮಾಡಿಸಿಕೊಳ್ಳಿ

-

Ashok Nayak Ashok Nayak Oct 17, 2025 12:45 AM

ಬಾಗೇಪಲ್ಲಿ: ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಸಹಾಯಕ ಸಿಬ್ಬಂದಿ ಒತ್ತಡದ ಬದುಕನ್ನು ನಡೆಸುತ್ತಿದ್ದು, ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ತಲೆದೋರುತ್ತಿದ್ದು, ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಕೆ.ಟಿ.ವೀರಾಂಜನೇಯಲು ಹೇಳಿದರು.

ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಗಂಗೋತ್ರಿ ಪೆಟ್ರೋಲ್ ಬಂಕ್ ಹಾಗೂ ಬೆಂಗಳೂರು ಖಾಸಗಿ ಆಸ್ಪತ್ರೆ ನೇರ್ತ ಸಿಬ್ಬಂದಿ ಗೆ ಆರೋಗ್ಯ ತಪಾಸಣೆ ಗೆ ಚಾಲನೆ ನೀಡಿ ಮಾತನಾಡಿದರು.

ಪೆಟ್ರೋಲ್ ಪಂಪ್ ಸಹಾಯಕರಾಗಿ ದೀರ್ಘಾವಧಿ ಕೆಲಸ ಮಾಡುವ ಅನೇಕ ಯುವಕರು ಮತ್ತು ಯುವತಿಯರು ತಮ್ಮ ಆರೋಗ್ಯವನ್ನು ಉದಾಸೀನ ಭಾವದಿಂದ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಆದ್ದರಿಂದ ಪ್ರತಿ 6 ತಿಂಗಳಗೊಮ್ಮ ಅರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: Bagepally News: ಭೋವಿ ಸಮುದಾಯದ ಶಂಕರಪ್ಪಗೆ ನ್ಯಾಯ ಕೊಡುವಲ್ಲಿ ಪೊಲೀಸರು ವಿಫಲ :  ಭೋವಿ ಸಂಘದ ಜಿಲ್ಲಾಧ್ಯಕ್ಷ ಪಿ.ಡಿ.ವೆಂಕಟರವಣ ಆರೋಪ

ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಹೆಚ್ಚಿನ ಕೆಲಸ ಹಾಗೂ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯವಿದೆ. ವಿಶ್ರಾಂತಿ ರಹಿತ ಕೆಲಸ ಕೂಡಾ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸದೆ ಇರುವುದು ಅನೇಕ ಸಮಸ್ಯೆಗಳಿಗೆ ಕಾರಣ ವಾಗಿದೆ. ಈ ರೀತಿಯ ಆರೋಗ್ಯ ಶಿಬಿರ ನಿರಂತರವಾಗಿ ನಡೆಯುವುದರಿಂದ ಅನೇಕ ಕಾಯಿಲೆ ಗಳನ್ನು ಪ್ರಾರಂಭದಲ್ಲಿ ಕಂಡುಹಿಡಿದು, ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ’ ಎಂದರು.

ಈ ಸಂದರ್ಭದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ವರ್ಗದವರು ಆರೋಗ್ಯ ತಪಾಸಣೆಗೆ ಒಳಗಾದರು. ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಆರೋಗ್ಯ ಕಣ್ಣು ಕಿವಿ ಮೂಗು ಹಾಗೂ ಹೃದಯ ಸಂಬಂಧಿ ಕಾಯಿಲೆ,ರಕ್ತ ಒತ್ತಡ, ಚರ್ಮ ರೋಗದ ತಪಾಸಣೆಯನ್ನು ಯಶಸ್ವಿಯಾಗಿ ನಡೆಸಿದರು. ಈ ಸಂದರ್ಭದಲ್ಲಿ ಗಂಗೋತ್ರಿ ಪೆಟ್ರೋಲ್ ಸಿಬ್ಬಂದಿ ವರ್ಗ ಹಾಜರಿದ್ದರು.