Gudibande News: ಸರಕಾರಗಳಿಂದ ರೈತರ ಬದುಕನ್ನು ಹಸನು ಮಾಡುವ ಕೆಲಸ ನಡೆಯಬೇಕಿದೆ : ಮಂಜುನಾಥ್
ಇಂದು ರೈತರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಒಬ್ಬ ರೈತ ಏನೇನೆ ಸಮಸ್ಯೆ ಬಂದರೂ ಕೃಷಿಯನ್ನು ಮಾತ್ರ ಬಿಡುವುದಿಲ್ಲ. ಲಾಭ ಬರಲಿ, ನಷ್ಟ ಬರಲಿ ಕೃಷಿ ಚಟುವಟಿಕೆಯನ್ನು ಮಾತ್ರ ಬಿಡುವುದಿಲ್ಲ. ಇಂದು ರೈತ ತುಂಬಾ ಸಂಕಷ್ಟದಲ್ಲಿದ್ದಾನೆ. ಅವರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆತನು ಬೆಳೆ ಚೆನ್ನಾಗಿ ಬಂದರೇ ಬೆಲೆ ಸಿಗುವುದಿಲ್ಲ,
ಪಟ್ಟಣದ ಗಜನಾಣ್ಯ ಕಲ್ಯಾಣ ಮಂಟಪದಲ್ಲಿ ನಡೆದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. -
ಗುಡಿಬಂಡೆ: ದೇಶಕ್ಕೆ ಅನ್ನ ನೀಡುವಂತಹ ರೈತ ಇದೀಗ ತುಂಬಾ ಸಂಕಷ್ಟದಲ್ಲಿದ್ದಾನೆ, ತಾನು ಬೆಳೆದ ಬಳೆಗೆ ಬೆಲೆ ಸಿಗದೆ ಸಾಲದ ಸಂಕೋಲೆಗೆ ಸಿಲುಕುತ್ತಿದ್ದಾನೆ. ಈ ನಿಟ್ಟಿನಲ್ಲಿ ರೈತರ ಬದುಕನ್ನು ಹಸನು ಮಾಡುವಂತಹ ಕೆಲಸ ಸರ್ಕಾರಗಳು ಮಾಡಬೇಕಿದೆ ಎಂದು ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಹೆಚ್.ಎನ್.ಮಂಜುನಾಥ್ ತಿಳಿಸಿದರು.
ಪಟ್ಟಣದ ಗಜನಾಣ್ಯ ಕಲ್ಯಾಣ ಮಂಟಪದಲ್ಲಿ ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ರೈತರು ಸಾಕಷ್ಟು ಸಂಕಷ್ಟ ಗಳನ್ನು ಎದುರಿಸುತ್ತಿದ್ದಾರೆ. ಒಬ್ಬ ರೈತ ಏನೇನೆ ಸಮಸ್ಯೆ ಬಂದರೂ ಕೃಷಿಯನ್ನು ಮಾತ್ರ ಬಿಡುವು ದಿಲ್ಲ. ಲಾಭ ಬರಲಿ, ನಷ್ಟ ಬರಲಿ ಕೃಷಿ ಚಟುವಟಿಕೆಯನ್ನು ಮಾತ್ರ ಬಿಡುವುದಿಲ್ಲ. ಇಂದು ರೈತ ತುಂಬಾ ಸಂಕಷ್ಟದಲ್ಲಿದ್ದಾನೆ. ಅವರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕಿ ದ್ದಾನೆ. ಆತನು ಬೆಳೆ ಚೆನ್ನಾಗಿ ಬಂದರೇ ಬೆಲೆ ಸಿಗುವುದಿಲ್ಲ, ಬೆಲೆ ಇದ್ದಾಗ ಇಳುವರಿ ಸಿಗುವುದಿಲ್ಲ. ಅದರ ಜೊತೆಗೆ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಕಾಟ. ಇದರಿಂದ ರೈತ ಸಂಕಷ್ಟಕ್ಕೆ ಸಿಲುಕು ತ್ತಿದ್ದಾನೆ. ಸರ್ಕಾರಗಳು ರೈತರ ಸಮಸ್ಯೆಗಳನ್ನು ಸ್ಪಂಧಿಸಿ, ರೈತರನ್ನು ಸಂಕಷ್ಟಗಳಿಂದ ಪಾರು ಮಾಡುವಂತಹ ಕೆಲಸ ಮಾಡಬೇಕಿದೆ ಎಂದರು.
ಇದನ್ನೂ ಓದಿ: Chinnaswamy Stadium: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತು ಪರಿಶೀಲನೆಗೆ ಸಮಿತಿ ರಚನೆ
ಇದೇ ಸಮಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೆಚ್.ಪಿ.ರಾಮನಾಥರೆಡ್ಡಿ ಮಾತನಾಡಿ, ಇಂದಿನ ಸರ್ಕಾರಗಳು ಹೆಚ್ಚು ಹೆಚ್ಚು ರಸಗೊಬ್ಬರಗಳನ್ನು ಬಳಸಿ ಹೆಚ್ಚು ಉತ್ಪಾದನೆ ಮಾಡಲು ರೈತರನ್ನು ಪರೋಕ್ಷವಾಗಿ ಉತ್ತೇಜನ ನೀಡುತ್ತಿವೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಭೂಮಿಯ ಫಲವತ್ತತೆ ನಾಶವಾಗಿ ಭೂಮಿ ಬರಡಾಗುವು ದರಲ್ಲಿ ಯಾವುದೇ ಸಂಶಯವಿಲ್ಲ. ರೈತರಿಗೆ ಸಾವಯವ ಗೊಬ್ಬರಗಳನ್ನು ಬಳಸಲು ಸರ್ಕಾರಗಳು ಉತ್ತೇಜನ ನೀಡಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ತಾಪಂ ಇಒ ನಾಗಮಣಿ ಮಾತನಾಡಿ, ರೈತರು ಅಧಿಕ ಇಳುವರಿ ಪಡೆಯ ಬೇಕೆಂಬ ಉದ್ದೇಶದಿಂದ ಹೆಚ್ಚು ರಾಸಾಯನಿಕ ಗೊಬ್ಬರಗಳನ್ನು ಬಳಸುತ್ತಿದ್ದಾರೆ. ಇದರಿಂದ ವಿಷಪೂರಿತವಾದ ಆಹಾರ ಉತ್ಪಾದನೆಯಾಗುತ್ತಿದೆ. ಇದರಿಂದ ಎಲ್ಲರಿಗೂ ಅಪಾಯವಾಗಲಿದೆ. ಜೊತೆಗೆ ಭೂಮಿ ಸಹ ಬರಡಾಗುತ್ತದೆ. ಈ ಕುರಿತು ರೈತರು ಎಚ್ಚರಿಕೆ ವಹಿಸಬೇಕು ಎಂದರು.
ಈ ವೇಳೆ ತಹಸೀಲ್ದಾರ್ ಸಿಗ್ಬತ್ತುಲ್ಲಾ, ಮುಖಂಡ ಕೃಷ್ಣೇಗೌಡ ಸೇರಿದಂತೆ ಹಲವರು ಮಾತನಾಡಿ ದರು. ತಾಲೂಕಿನಲ್ಲಿ ಪ್ರಮುಖ ಆದಾಯದ ಮೂಲಗಳಾಗಿರುವ ರೇಷ್ಮೆ, ತೋಟಗಾರಿಕೆ, ಪಶು ಪಾಲನೆ ಹಾಗೂ ಮೀನುಗಾರಿಕೆ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಪ್ರಗತಿಪರ ರೈತರನ್ನು ಗುರುತಿಸಿ ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಈ ಸಮಯದಲ್ಲಿ ಪಪಂ ಅಧ್ಯಕ್ಷ ವಿಕಾಸ್, ಉಪಾಧ್ಯಕ್ಷ ಗಂಗರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೇಶವರೆಡ್ಡಿ, ಕೃಷಿಕ ಸಮಾಜದ ಪದಾಧಿಕಾರಿಗಳು, ರೈತ ಮುಖಂಡರು, ಕೃಷಿ ಇಲಾಖೆಯ ಸಿಬ್ಬಂದಿ ಸೇರಿದಂತೆ ಹಲವರು ಇದ್ದರು.