CITU: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ನೌಕರರು ಸಿಐಟಿಯು ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ
ಇಲಾಖೆ ಕಾರ್ಯದರ್ಶಿಗಳು ಪ್ರೀಡಂ ಪಾರ್ಕಿನಲ್ಲಿ ನೀಡಿದ್ದ ಭರವಸೆಯಂತೆ 19 ಬೇಡಿಕೆಗಳಲ್ಲಿ ಸರ್ಕಾರದ ಹಂತದಲ್ಲಿರುವ ಬೇಡಿಕೆಗಳನ್ನು ಹೊರತುಪಡಿಸಿ ಉಳಿದ 7 ಬೇಡಿಕೆಗಳನ್ನು ಈಡೇರಿಸಿ ಆದೇಶ ಮಾಡುವುದಾಗಿ ಹೇಳಿದ್ದರು. ಆ ಪೈಕಿ ಇಲ್ಲೀವರೆಗೆ ಒಂದೇ ಒಂದು ಬೇಡಿಕೆ ಈಡೇರಿಸದೇ ಇರುವುದು ವಿಷಾದನೀಯ. ಹೀಗಾಗಿ ಇಡೀ ರಾಜ್ಯದ ಪಂಚಾಯತ್ ನೌಕರರು ಅಸಮಾಧಾನ ಗೊಂಡು ಇಲಾಖೆಯ ವಿಳಂಬ ನೀತಿಯನ್ನು ಖಂಡಿಸಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಕಚೇರಿಗಳ ಮುಂದೆ ಹೋರಾಟ ನಡೆಸಲಾಗುತ್ತಿದೆ
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘಟನೆಯ ಜಿಲ್ಲಾಘಟಕ ಸಿಐಟಿಯು ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. -
ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯತಿ ನೌಕರರಿಗೆ ಕನಿಷ್ಠ ವೇತನ ಸೇರಿದಂತೆ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಡಳಿತ ಭವನದ ಮುಂದೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ವತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್.ಪಾಪಣ್ಣ ಮಾತನಾಡಿ ಸರಕಾರ ಬೇಡಿಕೆ ಈಡೇರಿಸುವ ಮಾತು ಕೊಟ್ಟು 3 ತಿಂಗಳಾದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲದ ಕಾರಣ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.
ಇಲಾಖೆ ಕಾರ್ಯದರ್ಶಿಗಳು ಫ್ರೀಡಂ ಪಾರ್ಕಿನಲ್ಲಿ ನೀಡಿದ್ದ ಭರವಸೆಯಂತೆ 19 ಬೇಡಿಕೆಗಳಲ್ಲಿ ಸರ್ಕಾರದ ಹಂತದಲ್ಲಿರುವ ಬೇಡಿಕೆಗಳನ್ನು ಹೊರತುಪಡಿಸಿ ಉಳಿದ 7 ಬೇಡಿಕೆಗಳನ್ನು ಈಡೇರಿಸಿ ಆದೇಶ ಮಾಡುವುದಾಗಿ ಹೇಳಿದ್ದರು. ಆ ಪೈಕಿ ಇಲ್ಲಿಯವರೆಗೆ ಒಂದೇ ಒಂದು ಬೇಡಿಕೆ ಈಡೇರಿಸದೇ ಇರುವುದು ವಿಷಾಧನೀಯ. ಹೀಗಾಗಿ ಇಡೀ ರಾಜ್ಯದ ಪಂಚಾಯತ್ ನೌಕರರು ಅಸಮಾಧಾನ ಗೊಂಡು ಇಲಾಖೆಯ ವಿಳಂಬ ನೀತಿಯನ್ನು ಖಂಡಿಸಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಕಚೇರಿಗಳ ಮುಂದೆ ಹೋರಾಟ ನಡೆಸಲಾಗುತ್ತಿದೆ ಎಂದರು.
ಇದನ್ನೂ ಓದಿ: CPM: ಬಡವರ ಭೂಮಿ ಹಕ್ಕಿಗಾಗಿ ಸಿಪಿಎಂ ಹೋರಾಟ: ಕಾಂಗ್ರೆಸ್-ಬಿಜೆಪಿ ವಿರುದ್ಧ ವೆಂಕಟ್ ಕಿಡಿ
ಈಗಿನ ಮನವಿಗೂ ತಾವು ಸ್ಪಂದಿಸದಿದ್ದರೆ ಮುಂದೆ ನಮ್ಮ ಹೋರಾಟ ಬೃಹತ್ ಪ್ರಮಾಣದಲ್ಲಿ ಬೆಂಗಳೂರು ಚಲೋ ಕಾರ್ಯಕ್ರಮದ ರೀತಿ ಇರಲಿದೆ. ಈ ಹೋರಾಟದಲ್ಲಿ ಏನಾದರೂ ಅನಾಹುತ ಗಳಾದರೆ ಇದಕ್ಕೆ ನೇರವಾಗಿ ಆರ್‌ಡಿಪಿಆರ್ ಇಲಾಖೆಯೆ ಹೊಣೆಯಾಗಬೇಕಾಗುತ್ತದೆ. ದಯವಿಟ್ಟು ಇದಕ್ಕೆ ಆಸ್ಪದ ನೀಡದೇ ಕೂಡಲೆ ತಾವೇ ಒಪ್ಪಿಕೊಂಡ ಪ್ರಮುಖ ಬೇಡಿಕೆಗಳನ್ನು ಈಡೇರಿಸಿ ಆದೇಶ ಹೊರಡಿಸಬೇಕೆಂದು ವಿನಂತಿಸುತ್ತೇವೆ ಎಂದರು.
ಪ್ರಮುಖ ಬೇಡಿಕೆಗಳು !!!
ಈ ಕೂಡಲೇ ಸರಕಾರ ಎಲ್ಲಾ ಗ್ರಾಪಂ ನೌಕರರಿಗೆ 5 ಸಾವಿರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಬೇಕು. ಗ್ರಾಮ ಪಂಚಾಯಿತಿ ನೌಕರರಿಗೆ ರದ್ದು ಪಡಿಸಿರುವ ಬಿಪಿಎಲ್ ಪಡಿತರ ಚೀಟಿ ಹಿಂತಿರುಗಿಸಬೇಕು. ನೌಕರರು ನಿವೃತ್ತಿ ಅಥವಾ ನಿಧನ ಹೊಂದಿದರೆ ಅವರಿಗೆ ಇಡಗಂಟು ರೂಪ ದಲ್ಲಿ 6 ಲಕ್ಷ ನೀಡಬೇಕು. ಸೇವಾ ಹಿರಿತನದ ಆಧಾರದಲ್ಲಿ ವೇತನ ಹೆಚ್ಚಳ ಮಾಡಬೇಕು. ಗ್ರಾಮ ಪಂಚಾಯಿತಿ ನೌಕರರಿಗೆ ಇಎಸ್‌ಐ ಮತ್ತು ಫಿಎಫ್ ಜಾರಿ ಮಾಡಬೇಕು. ಸ್ವಚ್ಛವಾಹಿನಿ ನೌಕರರ ಸಭೆಯನ್ನು ಮಾಡಿ ಅವರ ಪ್ರಮುಖ ಬೇಡಿಕೆಗಳನ್ನು ಇತ್ಯರ್ಥಪಡಿಸಬೇಕು. ಪ್ರತಿಯೊಂದು ಪಂಚಾಯತಿಗೆ ದ್ವಿತಿಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಬೇಕು.
ಕಳೆದ 18-20 ವರ್ಷಗಳಿಂದ ಡೇಟಾ ಎಂಟ್ರಿ ಆಪರೇಟರ್‌ಗಳಾಗಿ ಕೆಲಸ ನಿರ್ವಹಿಸುತ್ತಿರುವ ನೌಕರ ರಿಗೆ ಅನುಮೋದನೆ ನೀಡಬೇಕು. 2ನೇ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ ಆಗಬೇಕು. ಈಗಾಗಲೆ ಆರೋಗ್ಯದ ಕುರಿತು ಸಿಬ್ಬಂದಿಗಳ ಮಾಹಿತಿಗಾಗಿ ಫಾರ್ಮೆಟ್ ಕಳಿಸಿದ್ದೀರಿ. ಅದರಲ್ಲಿ ಗುತ್ತಿಗೆ, ಹೊರಗುತ್ತಿಗೆ, ಗೌರವಧನದ, ಕಾರ್ಮಿಕರ ಮಾಹಿತಿ ನೀಡಲು ತಿಳಿಸಿದ್ದೀರಿ. ಆದರೆ ಈ ಫಾರ್ಮೆಟ್ ನಲ್ಲಿ ಪಂಚಾಯತ ನೌಕರರೆಂದು ಮಾಹಿತಿ ಇಲ್ಲಾ ಇದನ್ನು ಸರಿಪಡಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಬಂದ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಅತೀಕ್ ಪಾಷ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯುನ ಲಕ್ಷ್ಮೀದೇವಮ್ಮ, ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ ಗೌರವಾಧ್ಯಕ್ಷ ಫಯಾಜ್ ಅಹ್ಮದ್, ಜಿಲ್ಲಾ ಖಜಾಂಚಿ ಈಶ್ವರಪ್ಪ, ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಚಿಂತಾಮಣಿ ತಾಲೂಕು ಅಧ್ಯಕ್ಷ ಮಂಜುನಾಥ್,ಗುಡಿಬAಡೆ ತಾಲೂಕು ಅಧ್ಯಕ್ಷ ರಾಮಲಿಂಗಪ್ಪ. ಗೌರಿಬಿದನೂರು ತಾಲೂಕು ಅಧ್ಯಕ್ಷ ನರಸಿಂಹಮೂರ್ತಿ, ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ಕೆ.ಆಂಜಿನಪ್ಪ ಇತರೆ ಪದಾಧಿಕಾರಿಗಳಾದ ನರಸಿಂಹಪ್ಪ, ಶಿವಣ್ಣ ಮತ್ತಿತರರು ಇದ್ದರು.