ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shidlaghatta News: ಶ್ರೀರಾಮ ಶೋಭಾಯಾತ್ರೆಗೆ ಭರ್ಜರಿ ಸಿದ್ಧತೆ: ಜೂನ್ 7ರಂದು ಆಯೋಜನೆ

ಜೂನ್ 7ರಂದು ನಡೆಯಲಿರುವ ಈ ಶೋಭಾಯಾತ್ರೆಯನ್ನು ಅದ್ದೂರಿಯಾಗಿ ನಡೆಸಲು ಸಮಿತಿ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ವಿವಿಧ ಭಾಗಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ಯಾತ್ರೆ ಸಂಚರಿಸಲಿದೆ. ಧಾರ್ಮಿಕ ಘೋಷಣೆಗಳು ಹಾಗೂ ವಿವಿಧ ಕಲಾತಂಡಗಳ ಪ್ರದರ್ಶನಗಳು ಯಾತ್ರೆಯ ವಿಶೇಷ ಆಕರ್ಷಣೆ ಯಾಗಲಿವೆ

ಶ್ರೀರಾಮ ಶೋಭಾಯಾತ್ರೆಗೆ ಭರ್ಜರಿ ಸಿದ್ಧತೆ: ಜೂನ್ 7ರಂದು ಆಯೋಜನೆ

-

Profile
Ashok Nayak May 6, 2026 11:34 PM

ಶಿಡ್ಲಘಟ್ಟ: ಶ್ರೀರಾಮನು ಧರ್ಮ, ಸತ್ಯ ಮತ್ತು ನೀತಿಯ ಪ್ರತೀಕವಾಗಿದ್ದು, ಇಂದಿನ ಸಮಾಜಕ್ಕೆ ಆ ಮೌಲ್ಯಗಳನ್ನು ನೆನಪಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಶ್ರೀರಾಮ ಶೋಭಾಯಾತ್ರೆ( Sri Ram Shobha Yatra) ಆಚರಣೆ ಸಮಿತಿ ಅಧ್ಯಕ್ಷ ಬಿ. ವೆಂಕಟೇಶ್ ಹೇಳಿದರು.

ನಗರದ ಕೋಟೆ ವೃತ್ತದ ಶ್ರೀರಾಮ ಮಂದಿರದಲ್ಲಿ ನಡೆದ ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಶೋಭಾಯಾತ್ರೆಯ ಮೂಲಕ ಯುವಜನತೆಗೆ ಸಂಸ್ಕೃತಿ, ಪರಂಪರೆ ಹಾಗೂ ಹಿಂದುತ್ವದ ಮಹತ್ವ ಪರಿಚಯಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜೂನ್ 7ರಂದು ನಡೆಯಲಿರುವ ಈ ಶೋಭಾಯಾತ್ರೆಯನ್ನು ಅದ್ದೂರಿಯಾಗಿ ನಡೆಸಲು ಸಮಿತಿ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ವಿವಿಧ ಭಾಗಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿ ಸುವ ನಿರೀಕ್ಷೆಯಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ಯಾತ್ರೆ ಸಂಚರಿಸಲಿದೆ. ಧಾರ್ಮಿಕ ಘೋಷಣೆಗಳು ಹಾಗೂ ವಿವಿಧ ಕಲಾತಂಡಗಳ ಪ್ರದರ್ಶನಗಳು ಯಾತ್ರೆಯ ವಿಶೇಷ ಆಕರ್ಷಣೆ ಯಾಗಲಿವೆ ಎಂದು ಹೇಳಿದರು.

ಇದನ್ನೂ ಓದಿ: Shidlaghatta News: ತಾಲೂಕು ದಂಡಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ: ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯ ಕ್ರಮಕ್ಕೆ ಶೋಭೆ ತರಬೇಕೆಂದು ಮನವಿ ಮಾಡಿದ ಅವರು, ಕನ್ನಡಪರ, ರೈತಪರ, ದಲಿತಪರ ಹಾಗೂ ಮಹಿಳಾ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಈಗಾಗಲೇ ಬೆಂಬಲ ಸೂಚಿಸಿರುವು ದಾಗಿ ತಿಳಿಸಿದರು.

ಆಚರಣೆ ಸಮಿತಿ ಗೌರವ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಶ್ರೀರಾಮ ಶೋಭಾಯಾತ್ರೆ ಕೇವಲ ಧಾರ್ಮಿಕ ಕಾರ್ಯಕ್ರಮವಲ್ಲ, ಇದು ಹಿಂದು ಸಮಾಜವನ್ನು ಏಕತೆಯಲ್ಲಿ ಕಟ್ಟುವ ಮಹತ್ವದ ವೇದಿಕೆಯಾಗಿದೆ ಎಂದರು.

ಶ್ರೀರಾಮನ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿ, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಸ್ಕೃತಿ ಮತ್ತು ಪರಂಪರೆ ಉಳಿಸುವ ಜವಾಬ್ದಾರಿ ಯನ್ನು ಹೊತ್ತುಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಮಿತಿ ಪದಾಧಿಕಾರಿಗಳಾದ ಮಂಜುನಾಥ್, ಅನಿಲ್ ಕುಮಾರ್ ಜಿ.ಕೆ., ಭರತ್, ರವಿಚಂದ್ರ, ಲಕ್ಷ್ಮಿಪತಿ, ವೆಂಕೋಬರಾವ್, ಲಕ್ಷ್ಮಿಕಾಂತ್, ಕಿರಣ್ ಅಶ್ವಥ್, ರಾಮಾಂಜನೇಯ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಮಹಿಳಾ ಪದಾಧಿಕಾರಿಗಳು ಹಾಜರಿದ್ದರು.