Guarantee Scheme: ಗ್ಯಾರಂಟಿಗಳನ್ನು ಶೇ.100ರಷ್ಟು ಅರ್ಹರಿಗೆ ತಲುಪಿಸಲು ಬದ್ದ: ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್
ಗ್ಯಾರಂಟಿ ಯೋಜನೆಗಳನ್ನು ಶೇ. ೧೦೦ ರಷ್ಟು ಪ್ರಮಾಣದಲ್ಲಿ ಅರ್ಹರಿಗೆ ತಲುಪಿಸಲು ಪ್ರಾಧಿಕಾರ ಕಂಕಣ ಬದ್ದವಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವ್ಯಾಪಕ ಪ್ರಚಾರ ಮಾಡಲು ಈಗಾಗಲೇ ಸಂಚಾರ ವಾಹನದ ಮೂಲಕ ಯೋಜನೆಗಳ ಕುರಿತು ಜಿಲ್ಲಾದ್ಯಂತ ಜಾಗೃತಿ ಮೂಡಿಸಲಾಗಿದೆ.

ಪಂಚ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅರ್ಹ ಫಲಾನುಭವಿಗಳು ವಂಚಿತರಾಗಿದ್ದಲ್ಲಿ ಕೂಡಲೆ ಸಂಬAಧಪಟ್ಟ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ಯೋಜನೆಗಳ ಸೌಲಭ್ಯವನ್ನು ಪಡೆಯಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಚಿಕ್ಕಬಳ್ಳಾಪುರ : ಪಂಚ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅರ್ಹ ಫಲಾನುಭವಿಗಳು ವಂಚಿತ ರಾಗಿದ್ದಲ್ಲಿ ಕೂಡಲೆ ಸಂಬAಧಪಟ್ಟ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ಯೋಜನೆ ಗಳ ಸೌಲಭ್ಯವನ್ನು ಪಡೆಯಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ನಗರ ಹೊರವಲಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಚಿಕ್ಕಬಳ್ಳಾಪುರ ವಿಭಾಗ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಕೆ.ಎಸ್.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ: Accident at Chikkanayakanahalli: ಬಸ್ ಪಲ್ಟಿಯಾಗಿ ಹಲವರಿಗೆ ಗಾಯ
ಗ್ಯಾರಂಟಿ ಯೋಜನೆಗಳನ್ನು ಶೇ. ೧೦೦ ರಷ್ಟು ಪ್ರಮಾಣದಲ್ಲಿ ಅರ್ಹರಿಗೆ ತಲುಪಿಸಲು ಪ್ರಾಧಿಕಾರ ಕಂಕಣ ಬದ್ದವಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವ್ಯಾಪಕ ಪ್ರಚಾರ ಮಾಡಲು ಈಗಾಗಲೇ ಸಂಚಾರ ವಾಹನದ ಮೂಲಕ ಯೋಜನೆಗಳ ಕುರಿತು ಜಿಲ್ಲಾದ್ಯಂತ ಜಾಗೃತಿ ಮೂಡಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ಯೋಜನೆಗಳು ಹಾಗೂ ಸೇವೆಗಳನ್ನು ಬಿಂಬಿಸಲು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಜುಲೈ ೧ ರಿಂದ ೪ ದಿನಗಳ ಕಾಲ ವಸ್ತು ಪ್ರದರ್ಶನವನ್ನು ಏರ್ಪಡಿಸಿದ್ದರಿಂದ ಸಾವಿರಾರು ಜನರು ವೀಕ್ಷಣೆ ಮಾಡಿ ಮಾಹಿತಿ ಪಡೆದಿದ್ದಾರೆ ಎಂದರು.
ರಾಜ್ಯದಲ್ಲೆಯೇ ಚಿಕ್ಕಬಳ್ಳಾಪುರ ಜಿಲ್ಲೆ ಮಾದರಿಯಾಗಿ ವ್ಯಾಪಕ ಪ್ರಚಾರ ಕಾರ್ಯಕ್ರಮ ಕೈಗೊಂಡಿ ರುವುದರಿಂದ ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯಲ್ಲಿ ೨೦,೮೨,೯೮೮ ಫಲಾನುಭವಿಗಳನ್ನು ನೋಂದಣಿ ಮಾಡಿ ಅವರಿಗೆ ೧,೦೯,೧೦೬ ಕೋಟಿ ಹಣವನ್ನು ಜಮೆ ಮಾಡಲಾಗಿದೆ.
ಅನ್ನಭಾಗ್ಯ ಯೋಜನೆಯಡಿ ಕಳೆದ ೨ ವರ್ಷಗಳಲ್ಲಿ ೫,೪೩,೦೬೧ ಪಡಿತರ ಚೀಟಿ ಕುಟುಂಬಗಳಿಗೆ ೨,೬೫,೨೯,೬೮,೫೦೦ ರೂಗಳನ್ನು ವೆಚ್ಚ ಮಾಡಿ ಪಡಿತರ ವಿತರಿಸುವ ವ್ಯವಸ್ಥೆಯಾಗಿದೆ. ಯುವ ನಿಧಿ ಯೋಜನೆಯಡಿ ೪,೨೮೨ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳನ್ನು ನೋಂದಣಿ ಮಾಡಿ ೫,೮೪,೩೨,೫೦೦ ಗಳ ಹಣವನ್ನು ಅವರ ಖಾತೆಗೆ ಜಮೆ ಮಾಡಲಾಗಿದೆ.
ಗೃಹ ಜ್ಯೋತಿ ಯೋಜನೆಯಡಿ ೬,೩೦,೭೮೧ ಫಲಾನುಭವಿಗಳಿಗೆ ೨೦೦ ಯುನಿಟ್ ಉಚಿತ ವಿದ್ಯುತ್ ನೀಡಿ ೨೩,೩೭೧ ಲಕ್ಷ ಹಣವನ್ನು ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ೬,೨೧,೦೯,೫೪೩ ಉಚಿತ ಟಿಕೆಟ್ ಗಳನ್ನು ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ವಿತರಿಸಿ ೨,೨೭,೫೫,೬೮,೫೩,೭೦೦ ರೂಗಳನ್ನು ಸರ್ಕಾರ ಭರಿಸಿದೆ.
ಈ ಎಲ್ಲ ಯೋಜನೆಗಳ ಬಡ ಹಾಗೂ ಮಧ್ಯಮ ವರ್ಗಗದವರಿಗೆ ಆರ್ಥಿಕ ಶಕ್ತಿ ತುಂಬಿ ಈ ಯೋಜನೆಗಳಿಂದ ಉಳಿತಾಯವಾದ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ, ಔಷಧಿ ಖರೀದಿ, ಮನೆ ನಿರ್ಮಾಣ, ಕೊಳವೆ ಬಾವಿ ಕೊರೆಯಲು, ಆರೋಗ್ಯ ಚಿಕಿತ್ಸೆಗೆ ಹೀಗೆ ಇನ್ನೂ ಹಲವು ಉಪಯುಕ್ತ ಕಾರ್ಯಗಳಿಗೆ ವಿನಿಯೋಗಿಸಿಕೊಳ್ಳುವ ಮೂಲಕ ಸರ್ಕಾರದ ಆಶಯಕ್ಕೆ ಸಾರ್ಥಕತೆಯನ್ನು ಜನರು ನೀಡಿದ್ದಾರೆ ಎಂದರು.
ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಮಾತನಾಡಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಗಳನ್ನು ಅರ್ಹರೆಲ್ಲರಿಗೂ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಗಳನ್ನು ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸರ್ಕಾರ ರಚಿಸಿ ಸಮಾಜದ ಪ್ರಗತಿಗೆ ಶಕ್ತಿ ಯೋಜನೆ ಶಕ್ತಿ ತುಂಬಿದೆ. ಗೃಹ ಲಕ್ಷ್ಮೀ ಯೋಜನೆ ಒಂದು ಕುಟುಂಬ ಯಜಮಾನಿಯ ಖರೀದಿಯ ಶಕ್ತಿಗೆ ಬಲತುಂಬಿದೆ. ಅನ್ನಭಾಗ್ಯವು ಹಸಿವು ಮುಕ್ತ ಸಮಾಜ ನಿರ್ಮಾಣ ಮಾಡಿದೆ. ಹೀಗೆ ಈ ಎಲ್ಲ ಯೋಜನೆಗಳು ಒಂದಲ್ಲ ಒಂದು ರೂಪದಲ್ಲಿ ಜನರ ನೆರವಿಗೆ ಬಂದಿವೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರು ಗಳು, ಸದಸ್ಯರುಗಳು, ಜಿಲ್ಲಾಧಿಕಾರಿಗಳು ಹಾಗೂ ಇತರ ಗಣ್ಯರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಳೆದ ನಾಲ್ಕು ದಿನಗಳಿಂದ ಆಯೋಜಿಸಿದ್ದ ವಸ್ತು ಪ್ರದರ್ಶನ ಹಾಗೂ ಛಾಯಚಿತ್ರಾವಳಿಗಳನ್ನು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಸೆಲ್ಪಿ ಪಾಯಿಂಟ್ ಗಳಲ್ಲಿ ಗಣ್ಯರು ಪೋಟೋ ತೆಗೆಸಿಕೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾ ಧ್ಯಕ್ಷರುಗಳಾದ ಸುಬ್ಬಾರೆಡ್ಡಿ, ರಾಮಕೃಷ್ಣಪ್ಪ, ಆದಿರೆಡ್ಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಚಿಕ್ಕಬಳ್ಳಾಪುರ ತಾಲ್ಲೂಕು ಅಧ್ಯಕ್ಷರಾದ ಜಯರಾಮ್ ಕೆ.ಎನ್, ಚಿಂತಾಮಣಿ ತಾಲ್ಲೂಕು ಅಧ್ಯಕ್ಷರಾದ ಮುನಿನಾರಾಯಣಪ್ಪ, ಬಾಗೇಪಲ್ಲಿ ತಾಲ್ಲೂಕು ಅಧ್ಯಕ್ಷರಾದ ನರೇಂದ್ರ, ಮಂಚೇನಹಳ್ಳಿ ತಾಲ್ಲೂಕು ಅಧ್ಯಕ್ಷರಾದ ಮಧುಸೂಧನ್ ರೆಡ್ಡಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷಾ, ಕೆ.ಎಸ್.ಆರ್.ಟಿ.ಸಿ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಾ ಧಿಕಾರಿ ವಿ.ಬಸವರಾಜು, ಡಿ.ಟಿ.ಓ ಪ್ರಭು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ವಾರ್ತಾ ಸಹಾಯಕ ಎಂ.ಆರ್. ಮಂಜುನಾಥ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.