ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shidlaghatta News: ದ್ವೇಷ ಭಾಷಣ ತಡೆ ಮಸೂದೆ: ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ !

ಈ ವಿಧೇಯಕ ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯ ಹೇಳುವುದನ್ನೂ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ

ಸಂವಿಧಾನ ನೀಡಿದ ಸ್ವಾತಂತ್ರ್ಯವನ್ನು ಕೈ ಸರ್ಕಾರ ಕಿತ್ತುಕೊಳ್ಳುತ್ತಿದೆ....

-

Ashok Nayak
Ashok Nayak Dec 25, 2025 5:23 PM

ಶಿಡ್ಲಘಟ್ಟ: ಮಸೂದೆ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಇದು ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ತಂತ್ರವಾಗಿದ್ದು, ಸಂವಿಧಾನ ನೀಡಿದ ಸ್ವಾತಂತ್ರ್ಯವನ್ನು ಕಾಂಗ್ರೆಸ್‌ ಸರ್ಕಾರ ಕಿತ್ತುಕೊಳ್ಳುತ್ತಿದೆ. ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನವೂ ಇದಾಗಿದೆ’ ಎಂದು ಶಿಡ್ಲಘಟ್ಟ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ ಕಿಡಿ ಕಾರಿದರು.

ರಾಜ್ಯ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ದ್ವೇಷ ಭಾಷಣ, ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬಿಜೆಪಿ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಗ್ರೇಟ್ 2 ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿ ನಂತರ ಮಾತನಾಡಿದ ಅವರು

ಈ ವಿಧೇಯಕ ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯ ಹೇಳುವುದನ್ನೂ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದರು.

ಇದನ್ನೂ ಓದಿ: Shidlaghatta News: ಶಿಬಿರಗಳಿಂದ ಆರೋಗ್ಯ ಸಮಸ್ಯೆ ಪತ್ತೆ ಜತೆಗೆ ಪರಿಹಾರ ಕಂಡುಕೊಳ್ಳಬಹುದು : ಮನೋಹರ್

ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಈ ಕಾನೂನು ಪೆÇಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಬೇಕೇ ಎಂದರು

ಬಿಜೆಪಿ ಮುಖಂಡರಾದ ಡಾ. ಸತ್ಯನಾರಾಯಣರಾವ್ ಮಾತನಾಡಿ ಬಾಬಾ ಸಾಹೇಬ ಡಾ.ಅಂಬೇಡ್ಕ ರರ ಸಂವಿಧಾನದಲ್ಲಿ ಈ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಎಂಬ ಮೂರು ಹಂತಗಳಿವೆ. ಇದೀಗ ವಾಕ್ ಸ್ವಾತಂತ್ರ್ಯದ ವಿರುದ್ಧವಾಗಿ ಹೊಸ ಕಾಯ್ದೆ ತಂದಿದ್ದಾರೆ. ನ್ಯಾಯಾಂಗ ದ ಅಧಿಕಾರವನ್ನು ಉಲ್ಲಂಘಿಸಿ ಡಿವೈಎಸ್ಪಿ ಮೇಲ್ಪಟ್ಟ ಅಧಿಕಾರಿ ಯಾರನ್ನಾದರೂ ಏಕಾಏಕಿ ಜೈಲಿಗೆ ಹಾಕುವ ಕಾನೂನು ತಂದಿದ್ದಾರೆ. ಈ ಮೂಲಕ ಮತ್ತೊಮ್ಮೆ ತುರ್ತು ಪರಿಸ್ಥಿತಿ ತಂದಿದ್ದಾರೆ ಎಂದು ಆಕ್ಷೇಪಿಸಿದರು.

ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ನರೇಶ್, ಬಿ ಸಿ ನಂದೀಶ್, ಸುರೇಂದ್ರ ಗೌಡ, ಚೆಲುವ ರಾಜ್, ಎಸ್ ಮಂಜುಳ, ಜಯಂತಿ ಗ್ರಾಮ ನಾರಾಯಣಸ್ವಾಮಿ, ಸೇರಿದಂತೆ ತಾಲ್ಲೂಕು ಮುಖಂಡರು ಗಳು ಕಾರ್ಯಕರ್ತರುಗಳು ಮತ್ತಿತರರು ಉಪಸ್ಥಿತರಿದ್ದರು.