Chalavadi Narayanaswamy: ಅವನೊಬ್ಬ ಬಫೂನ್, ಜೋಕರ್ ತರ ಆಡ್ತಿದ್ದಾನೆ": ಹೆಸರು ಹೇಳದೆ ಪ್ರದೀಪ್ ಈಶ್ವರ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಆಕ್ರೋಶ!*
ಬಿಜೆಪಿ ಜಿಲ್ಲಾಧ್ಯಕ್ಷ ರಾಮಚಂದ್ರಗೌಡ ರವರ ನಿವಾಸಕ್ಕೆ ಭೇಟಿ ನೀಡಿದ ನಂತರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಛಲವಾದಿ ನಾರಾಯಣ ಸ್ವಾಮಿ ಅವರು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಹೆಸರನ್ನು ಎಲ್ಲೂ ಪ್ರಸ್ತಾಪಿಸದೆ, ಅವರ ವಿರುದ್ಧ ಪರೋಕ್ಷವಾಗಿ ತೀವ್ರ ವಾಗ್ದಾಳಿ ನಡೆಸಿದ್ದಾರೆ
-
ಚಿಂತಾಮಣಿ: ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ( Legislative Council member Chalavadi Narayanaswamy) ರವರು ಚಿಂತಾಮಣಿ ತಾಲ್ಲೂಕಿನ ಸೀಕಲ್ ಗ್ರಾಮದ ಬಿಜೆಪಿ ಜಿಲ್ಲಾಧ್ಯಕ್ಷ ರಾಮಚಂದ್ರಗೌಡ ರವರ ನಿವಾಸಕ್ಕೆ ಭೇಟಿ ನೀಡಿದ ನಂತರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಛಲವಾದಿ ನಾರಾಯಣ ಸ್ವಾಮಿ ಅವರು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಹೆಸರನ್ನು ಎಲ್ಲೂ ಪ್ರಸ್ತಾಪಿಸದೆ, ಅವರ ವಿರುದ್ಧ ಪರೋಕ್ಷವಾಗಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇತ್ತೀಚೆಗೆ ರಾಜಕೀಯಕ್ಕೆ ಬಂದು ದೊಡ್ಡ ದೊಡ್ಡ ಮಾತನಾಡುತ್ತಿರುವವರು ಮೊದಲು ತಾವೇನು ಎಂಬುದನ್ನು ಅರಿತುಕೊಳ್ಳಬೇಕು. ಕೇವಲ ಮಾತುಗಾರಿಕೆಯಿಂದಲೇ ಎಲ್ಲವನ್ನೂ ಸಾಧಿಸಲು ಸಾಧ್ಯವಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಜ್ಞಾನ ಇರಬೇಕು ಎಂದು ಕಿಡಿಕಾರಿದರು.
ಸಾರ್ವಜನಿಕ ಜೀವನದಲ್ಲಿ ಟೀಕೆಗಳನ್ನು ಮಾಡುವಾಗ ಭಾಷೆಯ ಮೇಲೆ ಸಂಯಮವಿರಬೇಕು. ಸದಾ ಮಾಧ್ಯಮಗಳ ಮುಂದೆ ಅಬ್ಬರಿಸುವುದೇ ಸಾಧನೆಯಲ್ಲ, ಕ್ಷೇತ್ರದ ಜನರ ಕೆಲಸ ಮಾಡುವುದು ಮುಖ್ಯ ಎಂದು ಪರೋಕ್ಷವಾಗಿ ಟಾಂಗ್ ನೀಡಿದರು.
ಇದನ್ನೂ ಓದಿ: Chalavadi Narayanaswamy: ಪ್ರಿಯಾಂಕ್ ಬುಡಕ್ಕೆ ಬೆಂಕಿ ಬಿದ್ದಾಗ ಮಾತ್ರ ದಲಿತರ ನೆನಪು: ಛಲವಾದಿ ನಾರಾಯಣಸ್ವಾಮಿ
ವಿರೋಧ ಪಕ್ಷದ ನಾಯಕರನ್ನು ಜೈಲಿಗಟ್ಟಿ ಆಡಳಿತ ನಡೆಸಿದ್ದನ್ನು ಯಾರಾದರೂ ಒಳ್ಳೆಯದು ಎನ್ನುತ್ತಾರಾ? ಇಂದು ಭಾರತ ದೇಶ ಸುರಕ್ಷಿತವಾಗಿದೆ ಮತ್ತು ದೇಶದ ನಾಯಕತ್ವವೂ ಅತ್ಯಂತ ಸುಭದ್ರವಾಗಿದೆ"ಎಂದರು.
ಮುಂದುವರಿದು ಮಾತನಾಡಿದ ಅವರು, ದೇಶದ ಈ ಭದ್ರತೆ ಮತ್ತು ಸುಭದ್ರ ನಾಯಕತ್ವವನ್ನು ಸಹಿಸಿಕೊಳ್ಳಲು ಸಾಧ್ಯವಾಗದ ಕೆಲವರು ಈ ರೀತಿಯಾಗಿ ಮಾತನಾಡುತ್ತಿದ್ದಾರೆ. ಇಂತಹ ಗುಲಾಮಿ ಮಾನಸಿಕತೆಯಲ್ಲಿ ಇರುವ ವ್ಯಕ್ತಿಗಳ ಬಗ್ಗೆ ನಾನು ಅತಿ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ ಎಂದು ಲೇವಡಿ ಮಾಡಿದರು.
ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಮಾತನಾಡಿ, ಕೆಲವರು ತಮಗೆ ಎಲ್ಲವೂ ಗೊತ್ತು ಎನ್ನುವಂತೆ ಆಡುತ್ತಿದ್ದಾರೆ.ಸಂವಿಧಾನ ಮತ್ತು ಕಾನೂನಿನ ಬಗ್ಗೆ ಮಾತನಾಡುವ ಮುನ್ನ ತಮ್ಮ ಜವಾಬ್ದಾರಿ ಯನ್ನು ಅರಿಯಬೇಕು ಎಂದು ಪರೋಕ್ಷವಾಗಿ ಟಾಂಗ್ ನೀಡಿದರು.
ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿ, ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.ಇದೇ ವೇಳೆ ವಿವಿಧ ವಿಷಯಗಳ ಕುರಿತು ಸರಣಿ ಪ್ರಶ್ನೆಗಳನ್ನು ಮುಂದಿಟ್ಟ ಅವರು, ಆಡಳಿತ ಪಕ್ಷದ ನಾಯಕರ ಬೇಜವಾಬ್ದಾರಿ ಹೇಳಿಕೆಗಳು ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಚಂದ್ರಗೌಡ, ಬಿಜೆಪಿ ಮುಖಂಡರಾದ ಡಾಬಾ ಮಂಜುನಾಥ್, ಪ್ರದೀಪ್, ಪೆದ್ದೂರು ನಾಗರಾಜ್ ರೆಡ್ಡಿ, ಕುರುಬೂರು ರಾಜಣ್ಣ, ಕೆ.ಎಂ.ರಾಜಶೇಖರ್ ರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.