ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MP Dr K Sudhakar: ಎವಿಎಂ ಮೇಲೆ ನಂಬಿಕೆ ಇಲ್ಲಾಂದ್ರೆ ರಾಜೀನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಲಿ: ಸಂಸದ ಡಾ ಕೆ ಸುಧಾಕರ್ ಸವಾಲು

ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನ ದಿಂದ ಎಂದು ಸ್ವಯಂ ಪ್ರಾಮಾಣಿಕರಿಸಿಕೊಂಡಂತಿದೆ. ಈ ಹಿನ್ನೆಲೆಯಲ್ಲಿ EVM ಮತಯಂತ್ರ ಬಳಸಿ ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಆರಿಸಿ ಬಂದಿರುವ 136 ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ

ಎವಿಎಂ ಮೇಲೆ ನಂಬಿಕೆ ಇಲ್ಲಾಂದ್ರೆ ರಾಜೀನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಲಿ

-

Ashok Nayak
Ashok Nayak Nov 9, 2025 11:08 PM

ಶಿಡ್ಲಘಟ್ಟ: ಎವಿಎಂ ಮತಯಂತ್ರ ಬಳಸಿ ರಾಜ್ಯದಲ್ಲಿ 2೦23ರ ಚುನಾವಣೆಯಲ್ಲಿ ಆರಿಸಿ ಬಂದಿರುವ 136 ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ, ರಾಜ್ಯದಿಂದ ಆಯ್ಕೆಯಾದ ಒಂಬತ್ತು ಕಾಂಗ್ರೆಸ್ ಲೋಕಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸಲಿ, ಮತಪತ್ರ ಬಳಸಿ ಮತ್ತೆ ಚುನಾವಣೆಯಿಂದ ಗೆದ್ದು ಬರಲಿ ಎಂದು ಸಂಸದ ಡಾ ಕೆ ಸುಧಾ ಕರ್ ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ನಗರದ ಬಿಜೆಪಿ ಸೇವಾ ಸೌಧ ಕಚೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ನೇತೃತ್ವದಲ್ಲಿ ನಡೆದ ಬಿ.ಎಲ್.ಎ-2 ಜಿಲ್ಲಾ ಕಾರ್ಯಗಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮತ ಪತ್ರ ಆಧರಿಸಿದ ಚುನಾವಣೆಗಳಲ್ಲಿ ಅಕ್ರಮ ಹಾಗೂ ಮತಗಳ್ಳತನ ನಡೆಸುವುದರಲ್ಲಿ ನಿಷ್ಣಾತರಾದ ಕಾಂಗ್ರೆಸ್ಸಿಗರು ಕೆಲವು ರಾಜ್ಯಗಳ ಚುನಾವಣೆಗಳಲ್ಲಿ ನಿರಂತರ ಸೋಲು ಗಳಿಂದ ಮೂಲೆಗುಂಪಾಗುತ್ತಿರುವ ಪರಿಸ್ಥಿತಿಯಿಂದ ಕಂಗೆಟ್ಟು ಹೋಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.ಕಾಂಗ್ರೆಸ್ ಸರ್ಕಾರ ಅಧಿಕಾರವಿದ್ದ ಅವಧಿಯಲ್ಲಿ ಮತಪತ್ರ ಬಳಸಿ ನಡೆದ ಚುನಾವಣೆಗಳಲ್ಲಿ ಎಷ್ಟು ಅಕ್ರಮ ನಡೆದಿದೆ ಎನ್ನುವುದಕ್ಕೆ ಇವತ್ತಿಗೂ ದಾಖಲೆಗಳಿವೆ.

ಇದನ್ನೂ ಓದಿ: MP Dr. K. Sudhakar: ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ಹಬ್ಬ ಆಚರಿಸಿದ ಸಂಸದ ಡಾ.ಕೆ.ಸುಧಾಕರ್

ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸ್ವಯಂ ಪ್ರಾಮಾಣಿಕರಿಸಿಕೊಂಡಂತಿದೆ. ಈ ಹಿನ್ನೆಲೆಯಲ್ಲಿ EVM ಮತಯಂತ್ರ ಬಳಸಿ ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಆರಿಸಿ ಬಂದಿರುವ 136 ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ, ರಾಜ್ಯದಿಂದ ಆಯ್ಕೆಯಾದ ಒಂಬತ್ತು ಕಾಂಗ್ರೆಸ್ ಲೋಕಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸಲಿ, ಮತಪತ್ರ ಬಳಸಿ ಮತ್ತೆ ಚುನಾವಣೆಯಿಂದ ಗೆದ್ದು ಬರಲಿ, ಇಲ್ಲದಿದ್ದರೆ ಮತಗಳ್ಳತನದಿಂದ ನಾವು ಆಯ್ಕೆ ಯಾಗಿ ಅಧಿಕಾರಕ್ಕೆ ಬಂದಿರುವುದು ಎಂದು ಒಪ್ಪಿಕೊಳ್ಳಲಿ ಎಂದು ಹೇಳಿದ್ದಾರೆ.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯದಲ್ಲಿರುವ ನಿಜವಾದ ಮತದಾರರು ಮಾತ್ರ ಮತದಾನ ಮಾಡುವಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಬೂತ್ ಏಜೆಂಟರದ್ದಾಗಿರುತ್ತದೆ ಎಲ್ಲ ಕಾರ್ಯಕರ್ತರ ಶ್ರಮ ಅತ್ಯಂತ ಅವಶ್ಯಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ ಯೋಜನೆಯನ್ನು ಪ್ರತಿ ಮನೆಗೆ ತಲುಪಿಸುವ ಗುರಿ ಹೊಂದಿದೆ. ಹೀಗಾಗಿ “ಸ್ವದೇಶಿ ನಮ್ಮ ಜೀವನ ಮಂತ್ರ ಆಗಿರಬೇಕು. ವಿದೇಶಿ ವಸ್ತುಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ, ನಮ್ಮ ದೇಶದಲ್ಲೇ ತಯಾರಾದ ಸ್ವದೇಶಿ ವಸ್ತು ಗಳನ್ನು ಖರೀದಿಸೋಣ. ಈ ಮೂಲಕ ಪ್ರತಿಯೊಬ್ಬ ಭಾರತೀಯನ ಪ್ರಗತಿಗೆ ಕೈಜೋಡಿ ಸೋಣ ಎಂದರು.

ಈ ಸಂದರ್ಭದಲ್ಲಿ ಶಿಡ್ಲಘಟ್ಟ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ ಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ಚಾತುರ್ಯ,ನಗರ ಮಂಡಲ ಅಧ್ಯಕ್ಷ ನರೇಶ್, ರಾಮಕೃಷ್ಣಪ್ಪ, ತಲದುಮ್ಮನಹಳ್ಳಿ ಮಧು, ರಾಜು, ಗ್ಯಾಸ್ ನಾರಾಯಣಸ್ವಾಮಿ, ಎಸ್ ಮಂಜುಳ ಸೇರಿದಂತೆ ಬಿಜೆಪಿ ಜಿಲ್ಲಾ ಹಾಗೂ ತಾಲೂಕು ಮುಖಂಡರುಗಳು ಕಾರ್ಯ ಕರ್ತರುಗಳು ಮತ್ತೆ ತರರು ಉಪಸ್ಥಿತರಿದ್ದರು.

"ಸ್ಥಳೀಯ ಜಿಪಂ. ತಾಪಂ ಚುನಾವಣೆಯೂ ಯಾವ ಸಂದರ್ಭದಲ್ಲಿ ಬೇಕಾದರೂ ಚುನಾವಣೆಯಾಗಬಹುದಾಗಿದ್ದು ಬಹುದಾಗಿದ್ದು ಕಾರ್ಯಕರ್ತರು ಚುನಾವಣೆ ಎದುರಿ ಸಲು ಸಿದ್ಧರಿರಬೇಕು. ಮೊದಲ ಹಂತದಲ್ಲಿ ಸರಿಯಾದ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿದ್ದೇವೆ ಎಂದರು.

ಪ್ರತಿ ಬೂತ್‍ನಲ್ಲಿ ಬಿಎಲ್‍ಎಗಳು ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಕಾರ್ಯನಿರ್ವ ಹಿಸುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಅವರ ಜೊತೆ ಸಹಕಾರ ನೀಡಬೇಕು ಎಂದು ಸೂಚಿಸಿದರು"