ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gauribidanur News: ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ವಿರ್ಬಾಕ್ ಅನಿಮಲ್ ಹೆಲ್ತ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಕಾರ್ಪೋ ರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಸುಮಾರು 2 ಲಕ್ಷ 40 ಸಾವಿರ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೋಚಿಮಲ್ ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕ ಜೆ ಕಾಂತರಾಜು ಉದ್ಘಾಟಿಸಿದರು.

ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

-

Ashok Nayak Ashok Nayak Sep 12, 2025 11:13 PM

ಗೌರಿಬಿದನೂರು:ತಾಲೂಕಿನ ತೊಂಡೇಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈಲ್ವೆ ನಿಲ್ದಾಣದ ಬಳಿ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ವಿರ್ಬಾಕ್ ಅನಿಮಲ್ ಹೆಲ್ತ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಕಾರ್ಪೋ ರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಸುಮಾರು 2 ಲಕ್ಷ 40 ಸಾವಿರ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೋಚಿಮಲ್ ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕ ಜೆ ಕಾಂತರಾಜು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು ಸ್ವಚ್ಛ ಪರಿಸರ,ಶುದ್ಧ ಗಾಳಿ,ಶುದ್ಧ ನೀರು ಎಲ್ಲರಿಗೂ ಅತ್ಯವಶ್ಯಕ. ಶುದ್ಧಗಾಳಿ ಮತ್ತು ಶುದ್ಧ ನೀರಿನಿಂದ ಶೇ80ರಷ್ಟು ರೋಗಗಳು ಬಾರದಂತೆ ತಡೆಗಟ್ಟಬಹುದು, ಕುಡಿಯುವ ನೀರಿನ ಘಟಕದಿಂದ ಶಾಲಾ ವಿದ್ಯಾರ್ಥಿ ಮಕ್ಕಳಿಗೆ ಹೆಚ್ಚು ಅನುಕೂಲವಾಗಲಿದೆ. ಸಾರ್ವಜನಿಕರು ಸ್ವಚ್ಚತೆಗೆ ಮೊದಲ ಆದ್ಯತೆ ನೀಡಬೇಕು, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ನೀಡಿರುವ ವಿರ್ಬಾಕ್ ಅನಿಮಲ್ ಹೆಲ್ತ್ ಸಂಸ್ಥೆಯ ಸಮಾಜಮುಖಿ ಕಾರ್ಯ ನಿಜಕ್ಕೂ ಶ್ಲಾಘನೀಯವಾದದ್ದು ಎಂದರು.

ಇದನ್ನೂ ಓದಿ: Gauribidanur News: ಜಿಎಸ್‌ಟಿ ಇಳಿಕೆ ಆರ್ಥಿಕತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : ಮಾರ್ಕೆಟ್ ಮೋಹನ್

ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರದ ಜೊತೆಗೆ ಸಾಮಾಜಿಕ ಸಂಸ್ಥೆಗಳ ಸಹಕಾರ ದೊಂದಿಗೆ ಹೆಚ್ಚಿನ ಅಭಿವೃದ್ಧಿ ಪಡಿಸಲು ಅನುಕೂಲವಾಗುವುದು, ಈಗಾಗಲೇ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ಎಸಿಸಿ ಕಾರ್ಖಾನೆಯ ಸಿ ಆರ್ ಸಿ ನಿಧಿಯಿಂದ ಶಾಲೆಗಳನ್ನು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳ ಲಾಗುವುದು ಎಂದರು.

ಈ ಸಂದರ್ಭದಲ್ಲಿ ವಿರ್ಬಾಕ್ ಅನಿಮಲ್ ಸಂಸ್ಥೆಯ ವ್ಯವಸ್ಥಾಪಕ ಹರೀಶ್, ರಕ್ಷಿತ್, ಸಹಾಯಕ ನಿರ್ದೇಶಕರು ಹಾಗೂ ಪಶುಸಂಗೋಪನಾ ಇಲಾಖೆಯ ಡಾ.ಮಾರುತಿ, ತೊಂಡೇಭಾವಿ ಪಶು ವೈದ್ಯಾಧಿಕಾರಿ ಡಾ.ವಿಕಾಸ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಪಿ ಎನ್ ಶಿವಶಂಕರರೆಡ್ಡಿ, ನಾರಾಯಣ ಸ್ವಾಮಿ ಮತ್ತಿತರರು ಉಪಸ್ಥಿತ ರಿದ್ದರು.