ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅರ್ಹ ಮತದಾರರು ಯಾರೂ ಮತಪಟ್ಟಿಯಿಂದ ಹೊರಗುಳಿಯಬಾರದು; ಅನರ್ಹರ ಸೇರ್ಪಡೆಗೂ ಅವಕಾಶವಿಲ್ಲ ಎಂದು ಸೂಚನೆ

ತಾಲೂಕಿನಲ್ಲಿ ಎಸ್‌ಐಆರ್ ಕಾರ್ಯ ಸುಸೂತ್ರವಾಗಿ ನಡೆಯುತ್ತಿದ್ದು, ಅಧಿಕಾರಿಗಳು ಮತ್ತು ಬಿಎಲ್‌ಒ ಗಳು ಮತದಾರರಲ್ಲಿ ವ್ಯಾಪಕ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ತಿಳಿಸಿದರು. ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಎಲ್ಲರೂ ಈ ಪ್ರಕ್ರಿಯೆಯಲ್ಲಿ ಆಸಕ್ತಿ ಯಿಂದ ಭಾಗವಹಿಸಬೇಕು

ಎಸ್‌ಐಆರ್ ಪ್ರಕ್ರಿಯೆ ಪರಿಶೀಲಿಸಿದ ಶಾಸಕ ಪುಟ್ಟಸ್ವಾಮಿಗೌಡ

-

Profile
Ashok Nayak Jul 13, 2026 11:40 PM

ಗೌರಿಬಿದನೂರು: ಕ್ಷೇತ್ರದ ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ(MLA K H Puttaswamy Gowda) ಅವರು ನಗರದ ವಿವಿಧ ಬಡಾವಣೆಗಳು ಹಾಗೂ ತಾಲೂಕಿನ ಹೊಸೂರು ಸೇರಿದಂತೆ ಹಲವು ಗ್ರಾಮ ಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಯನ್ನು ಖುದ್ದಾಗಿ ಅವಲೋಕಿಸಿದರು.

ಬಿಎಲ್‌ಒಗಳು ಮನೆಮನೆಗೆ ತೆರಳಿ ವಿತರಿಸುತ್ತಿರುವ ಅರ್ಜಿ ನಮೂನೆಗಳನ್ನು ಮತದಾರರು ಪಡೆದು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಸಕಾಲದಲ್ಲಿ ಹಿಂತಿರುಗಿಸುವಂತೆ ಅವರು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಇದನ್ನೂ ಓದಿ: Gauribidanur News: ಶ್ರೀಶಾರದಾ ದೇವಿ ದೇವಸ್ಥಾನದಲ್ಲಿ ವಿಮಾನ ಗೋಪುರ ಕಲಶ ಸ್ಥಾಪನೆ ಹಾಗೂ ಮಹಾಕುಂಭಾಭಿಷೇಕದಲ್ಲಿ ಶ್ರೀವಿಧುಶೇಖರ ಭಾರತಿ ಮಹಾಸ್ವಾಮಿ ಭಾಗಿ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ತಾಲೂಕಿನಲ್ಲಿ ಎಸ್‌ಐಆರ್ ಕಾರ್ಯ ಸುಸೂತ್ರವಾಗಿ ನಡೆಯುತ್ತಿದ್ದು, ಅಧಿಕಾರಿಗಳು ಮತ್ತು ಬಿಎಲ್‌ಒಗಳು ಮತದಾರರಲ್ಲಿ ವ್ಯಾಪಕ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ತಿಳಿಸಿದರು. ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಎಲ್ಲರೂ ಈ ಪ್ರಕ್ರಿಯೆಯಲ್ಲಿ ಆಸಕ್ತಿಯಿಂದ ಭಾಗವಹಿಸ ಬೇಕು ಎಂದು ಮನವಿ ಮಾಡಿದರು.

"ಯಾವುದೇ ಕಾರಣಕ್ಕೂ ಅರ್ಹ ಮತದಾರರ ಹೆಸರು ಮತಪಟ್ಟಿಯಿಂದ ಹೊರಗುಳಿಯಬಾರದು. ಅದೇ ವೇಳೆ ಅನರ್ಹ ಮತದಾರರ ಹೆಸರು ಸೇರ್ಪಡೆಯಾಗದಂತೆ ಎಚ್ಚರಿಕೆ ವಹಿಸುವುದು ಸರ್ಕಾ ರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಬಿಎಲ್‌ಒಗಳಿಗೆ ಸೂಚಿಸಿದ್ದೇನೆ. ಯಾವುದೇ ಗೊಂದಲಗಳಿದ್ದರೆ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಸಮನ್ವಯದಿಂದ ಪರಿಹರಿಸಲಿದ್ದು, ನನ್ನ ಗಮನಕ್ಕೆ ಬಂದ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತೇನೆ" ಎಂದು ಹೇಳಿದರು.

ಮತದಾನದ ಹಕ್ಕಿನ ಮಹತ್ವವನ್ನು ಪ್ರತಿಯೊಬ್ಬರೂ ಅರಿತು ತಮ್ಮ ಹಕ್ಕನ್ನು ಕಾಪಾಡಿಕೊಳ್ಳು ವಂತೆ ಶಾಸಕ ಪುಟ್ಟಸ್ವಾಮಿಗೌಡ ಕರೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಆರ್. ಅಶೋಕಕುಮಾರ್, ಎ.ಎನ್. ವೇಣುಗೋಪಾಲ, ಅಮರನಾಥ್, ಅಬುಬೇಕರ್, ಸಪ್ತಗಿರಿ, ಜಗನ್ನಾಥ್, ನಾಗಾರ್ಜುನ, ಅನಿಲ್, ಶ್ರೀನಿವಾಸಗೌಡ, ಪ್ರಭಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.