ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shidlaghatta News: ಎಫ್‌ಎಸ್‌ಟಿಪಿ ಘಟಕದ ಬಾಕಿ ಕಾಮಗಾರಿ ಮೂರು ವಾರದಲ್ಲಿ ಪೂರ್ಣಗೊಳಿಸಲು ಸೂಚನೆ

ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಛ ಭಾರತ್ ಮಿಷನ್‌ (ಗ್ರಾಮೀಣ) ಯೋಜನೆಯಡಿ ನಿರ್ಮಿಸಲಾಗಿರುವ ಎಫ್‌ಎಸ್‌ಟಿಪಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಘಟಕದ ಕಾರ್ಯನಿರ್ವಹಣೆ ಹಾಗೂ ಪ್ರಸ್ತುತ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಘಟಕದ ಬಾಕಿ ಕಾಮಗಾರಿ ಮೂರು ವಾರದಲ್ಲಿ ಪೂರ್ಣಗೊಳಿಸಲು ಸೂಚನೆ

-

Profile
Ashok Nayak Aug 21, 2026 10:46 PM

ಶಿಡ್ಲಘಟ್ಟ: ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಮಲ ಕೆಸರು ಸಂಸ್ಕರಣ ಘಟಕದ ಬಾಕಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ, ಘಟಕವನ್ನು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಸಿದ್ಧಪಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ನವೀನ್ ಭಟ್ ವೈ. ಭಾ. ಆ. ಸೇ. ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಛ ಭಾರತ್ ಮಿಷನ್‌ (ಗ್ರಾಮೀಣ) ಯೋಜನೆಯಡಿ ನಿರ್ಮಿಸಲಾಗಿರುವ ಎಫ್‌ಎಸ್‌ಟಿಪಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಘಟಕದ ಕಾರ್ಯನಿರ್ವಹಣೆ ಹಾಗೂ ಪ್ರಸ್ತುತ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದನ್ನೂ ಓದಿ: Shidlaghatta News: ಮಹಿಳೆಯರ ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ ಕಲ್ಪಿಸುವುದು ಅಗತ್ಯ: ಹೇಮಾವತಿ

ಘಟಕದಲ್ಲಿ ಕೆಲವು ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಇರುವುದನ್ನು ಗಮನಿಸಿದ ಅವರು, ಮೂರು ವಾರಗಳೊಳಗೆ ಎಲ್ಲ ಬಾಕಿ ಕೆಲಸಗಳನ್ನು ಪೂರ್ಣಗೊಳಿಸಿ ಘಟಕವನ್ನು ಸಮರ್ಪಕವಾಗಿ ಬಳಕೆಗೆ ಸಿದ್ಧಪಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಿರ್ದೇಶನ ನೀಡಿದರು.

ಘಟಕದ ನಿರ್ವಹಣೆ, ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅಗತ್ಯ ಕ್ರಮ ಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತಿಕ್ ಪಾಷ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸ್ವಚ್ಛ ಭಾರತ್ ಮಿಷನ್ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.