ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಫೆ.12ಕ್ಕೆ ನಗರಕ್ಕೆ ಜಗಜೀತ್‌ಸಿಂಗ್ ದಲೇವಾಲ ಆಗಮನ : ಅಂಬೇಡ್ಕರ್ ಭವನದಲ್ಲಿ ಸನ್ಮಾನ

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ದೇಶಕ್ಕೆ ಅನ್ನ ನೀಡುವ ಅನ್ನದಾತರು ಸಮಸ್ಯೆಗಳ ಸುಳಿಯಿಂದ ಹೊರಬರಲಾಗದೆ ನರಳುತ್ತಿದ್ದಾರೆ.ಬೆವರು ಹರಿಸಿ ದುಡಿದರೂ ಕೂಡ ಬೆಳೆದ ಬೆಳೆಗಳಿಗೆ ಸ0ರಿಯಾದ ಬೆಲೆ ದೊರೆಯುತ್ತಿಲ್ಲ. ನಮ್ಮನ್ನಾಳುವ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ಕೂಡ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹರ ಕಂಡುಹಿಡಿಯುವಲ್ಲಿ ಸಂಪೂರ್ಣ ಸೋತಿವೆ.

ಫೆ.12ಕ್ಕೆ ನಗರಕ್ಕೆ ಜಗಜೀತ್‌ಸಿಂಗ್ ದಲೇವಾಲ ಆಗಮನ

-

Ashok Nayak
Ashok Nayak Feb 6, 2026 11:02 PM

ಚಿಕ್ಕಬಳ್ಳಾಪುರ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಎಂಎಸ್‌ಪಿ ಬೆಲೆ ಖಾತರಿ ಕಾನೂನೂ ಜಾರಿಗೆ ಆಗ್ರಹಿಸಿ ರೈತ ಜಾಗೃತಿ ಯಾತ್ರೆ ಮಾಡುತ್ತಿರುವ ರಾಜಕೀಯೇತರ ಸಂಘಟನೆಯಾದ ಸಂಯುಕ್ತಾ ಕಿಸಾನ್ ಮೋರ್ಚಾ ಮುಖ್ಯಸ್ಥ ಜಗಜಿತ್ ಸಿಂಗ್ ದಲೇವಾಲಾ ಅವರು ಫೆ.12ರಂದು ನಗರಕ್ಕೆ ಆಗಮಿಸಲಿದ್ದು ಅವರನ್ನು ಬರಮಾಡಿಕೊಂಡು ಅಂಬೇಡ್ಕರ್ ಭವನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷ ಟಿ.ಆರ್.ಕೃಷ್ಣಪ್ಪ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ದೇಶಕ್ಕೆ ಅನ್ನ ನೀಡುವ ಅನ್ನದಾತರು ಸಮಸ್ಯೆಗಳ ಸುಳಿಯಿಂದ ಹೊರಬರಲಾಗದೆ ನರಳುತ್ತಿದ್ದಾರೆ.ಬೆವರು ಹರಿಸಿ ದುಡಿದರೂ ಕೂಡ ಬೆಳೆದ ಬೆಳೆಗಳಿಗೆ ಸ0ರಿಯಾದ ಬೆಲೆ ದೊರೆಯುತ್ತಿಲ್ಲ. ನಮ್ಮನ್ನಾಳುವ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ಕೂಡ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹರ ಕಂಡುಹಿಡಿಯುವಲ್ಲಿ ಸಂಪೂರ್ಣ ಸೋತಿವೆ. ಸ್ವಾಮಿ ನಾಥನ್ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಲು ಮುಂದಾಗುತ್ತಿಲ್ಲ. ಹೀಗಾಗಿ ರೈತ ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗಧಿಗೆ ಆಗ್ರಹಿಸಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆ ಈ ಜಾಗೃತಿ ಯಾತ್ರೆ ನಡೆಸುತ್ತಿದ್ದಾರೆ. ಇವರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಇದನ್ನೂ ಓದಿ: Chikkaballapur News: ಸಂವಿಧಾನದ ಆಶಯಗಳ ಈಡೇರಿಕೆ, ಸರಕಾರಿ ನೌಕರರ ಹೊಣೆ: ಜಿಲ್ಲಾಧಿಕಾರಿ ಜಿ.ಪ್ರಭು

ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಶ್ರೀನಿವಾಸಲು ಮಾತನಾಡಿ ದೇಶದ ರೈತರ ಬದುಕು ಸುಧಾರಣೆಗಾಗಿ ಸಂಯುಕ್ತಾ ಕಿಸಾನ್ ಮೋರ್ಚಾ ಸಂಘಟನೆಯ ಮುಖ್ಯಸ್ಥ ಜಗಜೀತ್‌ಸಿಂಗ್ ದಲೇವಾಲ ಅವರು ಫೆ.7ರಿಂದು ಕನ್ಯಾಕುಮಾರಿಯಿಂದ ಆರಂಭಿಸುವ ರೈತ ಜಗೃತಿ ಯಾತ್ರೆಯು ಫೆ.10ಕ್ಕೆ ರಾಜ್ಯವನ್ನು ಪ್ರವೇಶಿಸಲಿದೆ. 11 ರಂದು ಮೈಸೂರಿ ನಲ್ಲಿ ಬೃಹತ್ ಸಮಾವೇಶ ಮಾಡಿ ರಾತ್ರಿಗೆ ಬೆಂಗಳೂರಿಗೆ ಆಗಮಿಸುವರು. ಫೆ 12ರಂದು ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ರೈತ ಜಾಗೃತಿ ಯಾತ್ರೆಯ ಉದ್ದೇಶವನ್ನು ಮನವರಿಕೆ ಮಾಡಿಕೊಡು ವರು ಎಂದರು.

ಫೆ.12ರಂದು ಚಿಕ್ಕಬಳ್ಳಾಪುರಕ್ಕೆ ದಲೇವಾಲ ಆಗಮಿಸಲಿದ್ದು ರೈತರತ್ನ ಪ್ರಶಸ್ತಿ ಪುರಸ್ಕೃತ ಕಬ್ಬು ಬೆಳೆಗಾರರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಅಂಬೇಡ್ಕರ್ ಭವನದಲ್ಲಿ ರೈತ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಗಿದೆ.

ಸದರಿ ಕಾರ್ಯಕ್ರಮದಲ್ಲಿ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಜಿಲ್ಲೆಯ ರೈತರಿಂದ ಸಹಿಸಂಗ್ರಹ ಅಭಿಯಾನ ಮಾಡಿ ಅಂತಹ ಪತ್ರವನ್ನು ಪ್ರಧಾನಮಂತ್ರಿಗಳಿಗೆ ಮನವಿರೂಪದಲ್ಲಿ ನೀಡಲು ದಲೇವಾಲ ತೀರ್ಮಾನಿಸಿದ್ದಾರೆ.ಹೀಗಾಗಿ ರಾಜ್ಯದ ಗಡಿವರೆಗೂ ಅವರನ್ನು ಕರೆದೊಯ್ದು ಬಾಗೇಪಲ್ಲಿ ಗಡಿಯ ಮೂಲಕ ಆಂದ್ರಪ್ರದೇಶಕ್ಕೆ ಕಳಿಸಲಾಗುವುದು.

ಜಿಲ್ಲೆಯ ಎಲ್ಲಾ ಪ್ರಗತಿಪರ, ರೈತಪರ,ಮಹಿಳೆಯರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೈರಾರೆಡ್ಡಿ,ಜಿಲ್ಲಾ ಉಪಾಧ್ಯಕ್ಷ ಸತ್ಯನಾರಾಯಣಪ್ಪ. ವಿ.ಕೆ.,ಜಿಲ್ಲಾ ಸಂಚಾಲಕ ವೆಂಕಟಶಿವಾರೆಡ್ಡಿ,ಕದಿರಪ್ಪ,ಗಡಿನಾಡು ರೈತಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್,ತಾಲೂಕು ಅಧ್ಯಕ್ಷ ರಾಮಕೃಷ್ಣಪ್ಪ ಮತ್ತಿತರರು ಇದ್ದರು. ಮತ್ತಿತರರು ಇದ್ದರು.