ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕೌಶಲ್ಯ ಕಲಿಕೆಯಿಂದ ಉದ್ಯೋಗ ಭದ್ರತೆ ಸಾಧ್ಯ: ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ

ಕೌಶಲ್ಯ ಕಲಿಕೆಯಿಂದ ಯುವ ಸಮೂಹಕ್ಕೆ ಉದ್ಯೋಗ ಭದ್ರತೆ ಸಾಧ್ಯವಾಗಲಿದೆ. ಆದ್ದರಿಂದ ಉದ್ಯೋ ಗಾಂಕ್ಷಿಗಳು, ಉದ್ಯೋಗದಾತರು ಮತ್ತು ಹೊಸದಾಗಿ ಉದ್ಯೋಗ ಗಳಿಸುವವರು ವಿಕಸಿತ ಭಾರತ ಉದ್ಯೋಗ ಯೋಜನೆಯ ಮಹತ್ವವನ್ನು ಅರಿತುಕೊಳ್ಳಬೇಕು. ಈ ಯೋಜನೆಯನ್ನು ಖಾಸಗಿ ವಲಯದ ನೌಕರರು ಮತ್ತು ಅವರ ಕುಟುಂಬದ ಸದಸ್ಯರ ಆರ್ಥಿಕ ಭದ್ರತೆಯನ್ನು ಖಚಿತಪಡಿಸಿ ಕೊಳ್ಳಲು ವಿನ್ಯಾಸ ಗೊಳಿಸಲಾಗಿದೆ.

ಕೌಶಲ್ಯ ಕಲಿಕೆಯಿಂದ ಉದ್ಯೋಗ ಭದ್ರತೆ ಸಾಧ್ಯ

೩.೫ ಕೋಟಿ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ ಮತ್ತು ಸಾಮಾಜಿಕ ಭದ್ರತೆ ನೀಡುವಂತಹ ಮಹತ್ವಾಕಾಂಕ್ಷಿ ಯೋಜನೆಯಾದ "ಭಾರತ್ ಉದ್ಯೋಗ (ರೋಜ್ಗಾರ್) ಯೋಜನೆಯನ್ನು ಜಿಲ್ಲೆಯಲ್ಲಿಯೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

Ashok Nayak Ashok Nayak Aug 13, 2025 12:34 AM

ಚಿಕ್ಕಬಳ್ಳಾಪುರ : ೩.೫ ಕೋಟಿ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ ಮತ್ತು ಸಾಮಾಜಿಕ ಭದ್ರತೆ ನೀಡುವಂತಹ ಮಹತ್ವಾಕಾಂಕ್ಷಿ ಯೋಜನೆಯಾದ “ಭಾರತ್ ಉದ್ಯೋಗ (ರೋಜ್ಗಾರ್) ಯೋಜನೆ ಯನ್ನು ಜಿಲ್ಲೆಯಲ್ಲಿಯೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಜಿಲ್ಲಾಡಳಿತ ಭವನದ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ “ಪ್ರಧಾನಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ” ಕುರಿತ ತರಬೇತಿ ಹಾಗೂ  ಮಾರ್ಗದರ್ಶನ ನೀಡುವ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೌಶಲ್ಯ ಕಲಿಕೆಯಿಂದ ಯುವ ಸಮೂಹಕ್ಕೆ ಉದ್ಯೋಗ ಭದ್ರತೆ ಸಾಧ್ಯವಾಗಲಿದೆ. ಆದ್ದರಿಂದ ಉದ್ಯೋಗಾಂಕ್ಷಿಗಳು, ಉದ್ಯೋಗದಾತರು ಮತ್ತು ಹೊಸದಾಗಿ ಉದ್ಯೋಗ ಗಳಿಸುವವರು ವಿಕಸಿತ ಭಾರತ ಉದ್ಯೋಗ ಯೋಜನೆಯ ಮಹತ್ವವನ್ನು ಅರಿತುಕೊಳ್ಳಬೇಕು. ಈ ಯೋಜನೆಯನ್ನು ಖಾಸಗಿ ವಲಯದ ನೌಕರರು ಮತ್ತು ಅವರ ಕುಟುಂಬದ ಸದಸ್ಯರ ಆರ್ಥಿಕ ಭದ್ರತೆಯನ್ನು ಖಚಿತಪಡಿಸಿ ಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ಉದ್ಯೋಗ ಆಧಾರಿತ ಪ್ರೋತ್ಸಾಹಧನ ಯೋಜನೆಯ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ೨ ವರ್ಷದಲ್ಲಿ ೩.೫ ಕೋಟಿಗಿಂತ ಅಧಿಕ ಉದ್ಯೋಗಗಳ ಸೃಷ್ಟಿಗೆ ಬೆಂಬಲ ನೀಡುವ ಯೋಜನೆಯಾಗಿದೆ ಎಂದರು.

ಇದನ್ನೂ ಓದಿ: Vishwavani Editorial: ಕಾರ್ಮೋಡದಂಚಿನ ಬೆಳ್ಳಿಕಿರಣ

ಇಂತಹ ಮಹತ್ವ ಪೂರ್ಣ ಯೋಜನೆಯ ಸಾಪಲ್ಯವನ್ನು ಉದ್ಯೋಗದಾತರ ಮೂಲಕ ಉದ್ಯೋಗಿ ಗಳಿಗೆ ತಲುಪಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದ್ದು ಈ ನಿಟ್ಟಿನಲ್ಲಿ ಉದ್ಯೋಗದಾತ ಖಾಸಗಿ ಕಂಪನಿಗಳು,ಸAಸ್ಥೆಗಳ,ಕಾರ್ಖಾನೆಗಳ ಮುಖ್ಯಸ್ಥರಿಗೆ ಪ್ರತಿನಿಧಿಗಳಿಗೆ ಹೆಚ್ಚಿನ  ರೀತಿಯಲ್ಲಿ  ಅಧಿಕಾರಿಗಳು ಅರಿವುಮೂಡಿಸಬೇಕು. ಈ ಯೋಜನೆಯು ಎಲ್ಲ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ, ಉದ್ಯೋಗಾರ್ಹತೆ ಮತ್ತು ಸಾಮಾಜಿಕ ಭದ್ರತೆ ಹೆಚ್ಚಿಸಲಿದೆ. ತಯಾರಿಕಾ ವಲಯ ಮತ್ತು ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವವರಿಗೆ ಪ್ರೋತ್ಸಾಹಧನ ನೀಡಲು ಈ ಯೋಜನೆ ಹೆಚ್ಚಿನ ಗಮನ ಹರಿಸಲಿದೆ. ಈ ಯೋಜನೆಯು ಉದ್ಯೋಗ ಸೃಷ್ಟಿ ಹೆಚ್ಚಿಸಲು ಉದ್ಯೋಗಿಗಳಿಗೆ ಮತ್ತು ಉದ್ಯೋಗ ದಾತರಿಗೆ ಪ್ರೋತ್ಸಾಹಧನ ಒದಗಿಸಲಿದೆ ಎಂದರು.

ಸAಪನ್ಮೂಲ ವ್ಯಕ್ತಿಯಾಗಿ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಕುಮಾರ್ ರಾಹುಲ್ ರವರು ಪ್ರಧಾನ ಮಂತ್ರಿ ವಿಸ್ಕಿತ್ ಭಾರತ್ ರೋಜ್‌ಗಾರ್ ಯೋಜನೆಯ ಕುರಿತು ಶಕ್ತಿ ಬಿಂದು ಪ್ರದರ್ಶನದ ಮೂಲಕ ವಿವರವಾದ ಮಾಹಿತಿ ನೀಡಿ ಮಾತನಾಡುತ್ತಾ, ವಿಕಸಿತ ಭಾರತ ಉದ್ಯೋಗ ಯೋಜನೆ ಯಲ್ಲಿ ನೂತನವಾಗಿ ಉದ್ಯೋಗಕ್ಕೆ ಸೇರಿದ ಉದ್ಯೋಗಿಗಳಿಗೆ ಗರಿಷ್ಠ ೧೫,೦೦೦ ರೂ.ಗಳ ವರೆಗೆ ಪ್ರೋತ್ಸಾಹಧನವನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. ೧ ಲಕ್ಷ ವರೆಗಿನ ವೇತನ ಹೊಂದಿರುವ ಉದ್ಯೋಗಿಗಳು ಇದಕ್ಕೆ ಅರ್ಹರು. ಮೊದಲ ಕಂತನ್ನು ೬ ತಿಂಗಳ ಸೇವೆಯ ನಂತರ ಮತ್ತು ೨ನೇ ಕಂತನ್ನು ೧೨ ತಿಂಗಳ ಸೇವೆಯ ನಂತರ ಪಾವತಿಸಲಾಗುತ್ತದೆ. ಉಳಿತಾಯ ಮನೋಭಾವ ಉತ್ತೇಜಿಸಲು, ಪ್ರೋತ್ಸಾಹಧನದ ಒಂದು ಭಾಗವನ್ನು ಠೇವಣಿ ಖಾತೆಯಲ್ಲಿ ನಿಗದಿತ ಅವಧಿಗೆ ಇಡಲಾಗುತ್ತದೆ' ಎಂದರು.

ಈ ಯೋಜನೆ ಎಲ್ಲ ಕ್ಷೇತ್ರಗಳಲ್ಲಿ ಹೆಚ್ಚುವರಿ ಉದ್ಯೋಗ ಸೃಷ್ಟಿಯತ್ತ ಗಮನ ಹರಿಸುತ್ತದೆಯಾದರೂ ತಯಾರಿಕಾ ವಲಯದ ಮೇಲೆ ವಿಶೇಷವಾಗಿ ಗಮನ ಕೇಂದ್ರೀಕರಿಸುತ್ತದೆ. ಗರಿಷ್ಠ ೧ ಲಕ್ಷವರೆಗಿನ ವೇತನ ಹೊಂದಿರುವ ಉದ್ಯೋಗಿಗಳಿಗೆ ಸಂಬAಧಿಸಿದAತೆ ಉದ್ಯೋಗದಾತರು ಈ ಪ್ರೋತ್ಸಾಹಧನ ಪಡೆಯುತ್ತಾರೆ. ಕನಿಷ್ಠ ಆರು ತಿಂಗಳವರೆಗೆ ಉದ್ಯೋಗ ಹೊಂದಿರುವ ಪ್ರತಿ ಹೆಚ್ಚುವರಿ ಉದ್ಯೋಗಿಗೆ ಸರ್ಕಾರವು ತಿಂಗಳಿಗೆ ೩,೦೦೦ ಪ್ರೋತ್ಸಾಹಧನ ನೀಡಲಿದೆ. ಇದನ್ನು ಎರಡು ವರ್ಷಗಳ ವರೆಗೆ ನೀಡಲಾಗುತ್ತದೆ. ತಯಾರಿಕಾ ವಲಯಕ್ಕೆ ಪ್ರೋತ್ಸಾಹಧನವನ್ನು ೩ ಮತ್ತು ೪ನೇ ವರ್ಷಗಳಿಗೂ ವಿಸ್ತರಿಸಲಾಗುವುದು. ಇದರಿಂದ ೨.೬ ಕೋಟಿ ಹೆಚ್ಚುವರಿ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಸಗಿ ಉದ್ಯೋಗ ರಂಗದಲ್ಲಿರುವವರು ಸಹ ಯೋಜನೆಯ ಅನುಕೂಲ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಯಲಹಂಕದ ಭವಿಷ್ಯ ನಿಧಿ ಶಾಖಾ ಕಚೇರಿಯ ಉಸ್ತುವಾರಿ ಇSIಅ ಪ್ರತಿನಿಧಿ ಶ್ರೀ ಪ್ರಭು ಕುಮಾರ್ ಅವರು “ಉದ್ಯೋಗದಾತರು/ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆ” ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಯಲಹಂಕದ ಕಾರ್ಮಿಕರ ಭವಿಷ್ಯನಿಧಿಯ ಪ್ರಾದೇಶಿಕ ಕಚೇರಿಯ ಆಯುಕ್ತೆ ಸ್ವಾಗತಾ  ರೈ,  ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಧಿಕಾರಿ ರಘು ಜಿ.ಪಿ,  ಜಿಲ್ಲಾ ಕಾರ್ಮಿಕ ಅಧಿಕಾರಿ ಶಬಾನಾ ಆಜ್ಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.