ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಕನ್ನಡ ಭವನ ಉದ್ಘಾಟನಾ ಸಮಾರಂಭ

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ರಾದ ಪೂಜ್ಯ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದ ನಾಥ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ಎಸ್ ತಂಗಡಗಿ ವಹಿಸಲಿದ್ದಾರೆ

ಕನ್ನಡ ಭವನ ಉದ್ಘಾಟನಾ ಸಮಾರಂಭ

Profile Ashok Nayak May 23, 2025 10:32 AM

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಚಿಕ್ಕಬಳ್ಳಾಪುರ ನಗರದಲ್ಲಿ ನಿರ್ಮಿಸಿರುವ ಕನ್ನಡ ಭವನ ಉದ್ಘಾಟನಾ ಸಮಾರಂಭವನ್ನು ಮೇ 27 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿ.ಬಿ. ರಸ್ತೆಯ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ರಾದ ಪೂಜ್ಯ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ಎಸ್ ತಂಗಡಗಿ ವಹಿಸಲಿದ್ದಾರೆ.

ಇದನ್ನೂ ಓದಿ: Chikkaballapur News: ಸಕಾಲಕ್ಕೆ ಬೀಜ ಗೊಬ್ಬರ ವಿತರಣೆಗೆ ಸಿಪಿಐಎಂ ಆಗ್ರಹ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಇ ಪ್ರದೀಪ್ ಈಶ್ವರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಂ. ಮಲ್ಲೇಶ್ ಬಾಬು, ಶಾಸಕ ರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ,  ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಡಾ.ಹೆಚ್.ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್. ಶಿವಶಂಕರರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಚಿಕ್ಕ ಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಜಿಲ್ಲಾ ಗ್ಯಾರಂಟಿ ಯೋಜನೆ ಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್, ನಗರ ಸಭೆ ಅಧ್ಯಕ್ಷ ಎ. ಗಜೇಂದ್ರ ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಡಾ. ಎನ್.ಮಂಜುಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ್, ಕರ್ನಾಟಕ ಗೃಹ ಮಂಡಳಿ ಆಯುಕ್ತರಾದ ಕವಿತಾ ಎಸ್. ಮನ್ನಿಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಕೆ.ಎಂ. ಗಾಯಿತ್ರಿ, ಜಂಟಿ ನಿರ್ದೇಶಕರಾದ ಅಶೋಕ್ ಎನ್.ಛಲವಾದಿ ರವರು ಭಾಗವಹಿಸಲಿದ್ದಾರೆ.

ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು  ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ.