ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ(Karnataka State Commission for Protection of Child Rights)ದ ಅಧ್ಯಕ್ಷರಾದ ಶಶಿಧರ್ ಕೋಸಂಬೆರವರು ಬುಧವಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರೌಢ ಶಾಲೆಯಲ್ಲಿ ನಡೆದ ಶಾಲಾ ಮಕ್ಕಳು, ಪೋಷಕರು ಹಾಗೂ ಶಾಲಾ ಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು ಗಳೊಂದಿಗೆ ಅಹವಾಲುಗಳನ್ನು ಸ್ವೀಕರಿಸಿದರು

ಆಯೋಗದ ಅಧ್ಯಕ್ಷರ ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸ

-

Ashok Nayak
Ashok Nayak Jan 21, 2026 9:34 PM

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ(Karnataka State Commission for Protection of Child Rights)ದ ಅಧ್ಯಕ್ಷರಾದ ಶಶಿಧರ್ ಕೋಸಂಬೆರವರು ಬುಧವಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರೌಢ ಶಾಲೆಯಲ್ಲಿ ನಡೆದ ಶಾಲಾ ಮಕ್ಕಳು, ಪೋಷಕರು ಹಾಗೂ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು ಗಳೊಂದಿಗೆ ಅಹವಾಲುಗಳನ್ನು ಸ್ವೀಕರಿಸಿದರು.

ಇದನ್ನೂ ಓದಿ: Human Rights: ಪ್ರತಿಯೊಬ್ಬರೂ ಮಾನವ ಹಕ್ಕುಗಳ ಅರಿವು ಹೊಂದ ಬೇಕು: ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ

ನಂತರ ಜಿಲ್ಲಾ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ VRW, MRW, URW ರವರಿಗೆ ಮಕ್ಕಳ ರಕ್ಷಣೆ ಕುರಿತ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್. ವೆಂಕಟೇಶರೆಡ್ಡಿ ರವರು ಮಕ್ಕಳ ರಕ್ಷಣೆ ಕುರಿತ ಮಾಹಿತಿಯನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಆರ್. ಆದಿಶೇಷರಾವ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್, ವಿದ್ಯಾರ್ಥಿಗಳು, ಪೋಷಕರು ಇದ್ದರು.