ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಕೆಂಪೇಗೌಡ ಜಯಂತಿ ಗದ್ದಲ ಪ್ರಕರಣ: ಸಂಸದ ಡಾ.ಕೆ.ಸುಧಾಕರ್ ವಿರುದ್ಧ ತನಿಖೆಗೆ ಆಗ್ರಹಿಸಿ ಎಸ್‌ಪಿಗೆ ದೂರು

ಕಾರ್ಯಕ್ರಮದ ವೇಳೆ ಗದ್ದಲ ಸೃಷ್ಟಿಸಿ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಘಟನೆಗಳ ಹಿಂದೆ ಸಂಸದರ ಬೆಂಬಲಿಗರ ಪಾತ್ರವಿದೆ ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆ ಯಲ್ಲಿ ಸಂಸದ ಡಾ.ಕೆ. ಸುಧಾಕರ್(MP Dr K Sudhakar) ಹಾಗೂ ಪಿ.ಎನ್.ಕೇಶವರೆಡ್ಡಿ ಅವರನ್ನು ವಿಚಾರಣೆಗೆ ಒಳಪಡಿಸಿದರೆ ಪ್ರಕರಣದ ಸತ್ಯಾಸತ್ಯತೆ ಹೊರ ಬರಲಿದೆ

ಸಂಸದ ಡಾ.ಕೆ.ಸುಧಾಕರ್ ವಿರುದ್ಧ ತನಿಖೆಗೆ ಆಗ್ರಹಿಸಿ ಎಸ್‌ಪಿಗೆ ದೂರು

-

Profile
Ashok Nayak Jul 1, 2026 10:47 PM

ಚಿಕ್ಕಬಳ್ಳಾಪುರ: ಜೂನ್ 27ರಂದು ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಉಂಟಾದ ಗದ್ದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್(MP Dr.K.Sudhakar) ಹಾಗೂ ಅವರ ತಂದೆ ಪಿ.ಎನ್.ಕೇಶವರೆಡ್ಡಿ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸುವಂತೆ ಆಗ್ರಹಿಸಿ ತಾಲೂಕು ಬಲಿಜ ಸಂಘದ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅವರಿಗೆ ಬುಧವಾರ ದೂರು ಸಲ್ಲಿಸಿದರು.

cbpm3jp

ತಾಲೂಕು ಬಲಿಜ ಸಂಘದ ಅಧ್ಯಕ್ಷ ಡಾ.ಬಿ.ವಿ.ಮಂಜುನಾಥ್ ನೇತೃತ್ವದಲ್ಲಿ ಎಸ್‌ಪಿ ಕಚೇರಿಗೆ ತೆರಳಿದ ಮುಖಂಡರು, ಘಟನೆಯ ವಿಡಿಯೊ ದೃಶ್ಯಾವಳಿ ಮತ್ತು ಲಿಖಿತ ಮನವಿಯನ್ನು ಸಲ್ಲಿಸಿ, ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ನಡೆದ ಗದ್ದಲ, ಶಾಸಕರ ವಾಹನದ ಮೇಲೆ ಕಲ್ಲು ಹಾಗೂ ಚಪ್ಪಲಿ ಎಸೆದ ಆರೋಪ ಸೇರಿದಂತೆ ಎಲ್ಲ ಬೆಳವಣಿಗೆಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Chikkaballapur News: "2028ರಲ್ಲಿ ಎಷ್ಟು ಮತಗಳ ಅಂತರದಲ್ಲಿ ಸೋಲುತ್ತೀಯೋ ಕಾದು ನೋಡು" ಸವಾಲು

ದೂರಿನಲ್ಲಿ, ಕಾರ್ಯಕ್ರಮದ ವೇಳೆ ಗದ್ದಲ ಸೃಷ್ಟಿಸಿ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಘಟನೆಗಳ ಹಿಂದೆ ಸಂಸದರ ಬೆಂಬಲಿಗರ ಪಾತ್ರವಿದೆ ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆ ಯಲ್ಲಿ ಸಂಸದ ಡಾ.ಕೆ.ಸುಧಾಕರ್(MP Dr K Sudhakar) ಹಾಗೂ ಪಿ.ಎನ್.ಕೇಶವರೆಡ್ಡಿ ಅವರನ್ನು ವಿಚಾರಣೆಗೆ ಒಳಪಡಿಸಿದರೆ ಪ್ರಕರಣದ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಮನವಿ ಮಾಡಲಾ ಗಿದೆ.

ಅಲ್ಲದೆ, ಕಾರ್ಯಕ್ರಮದ ಬಳಿಕ ನೀಡಲಾದ ಹೇಳಿಕೆಗಳ ಬಗ್ಗೆಯೂ ತನಿಖೆ ನಡೆಸಿ, ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸುವಂತೆ ದೂರಿನಲ್ಲಿ ಕೋರಲಾಗಿದೆ. ದೂರು ಸ್ವೀಕರಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಅಧಿಕಾರಿಗಳು, ಮನವಿಯನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಬಲಿಜ ಸಂಘದ ಅಧ್ಯಕ್ಷ ಡಾ.ಬಿ.ವಿ.ಮಂಜುನಾಥ್, ಉಪಾಧ್ಯಕ್ಷ ಲೋಕೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ಸದಸ್ಯರು ಉಪಸ್ಥಿತರಿದ್ದರು.